ಸುಪ್ರೀಂ ನ್ಯಾಯಮೂರ್ತಿಗಳಿಂದ ಮೊದಲ ಸುದ್ದಿಗೋಷ್ಠಿ

Posted In : ದೇಶ

ದೆಹಲಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ, ನ್ಯಾಯಾಂಗ ವ್ಯವಸ್ಥೆ ಹಾಗೂ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು.

ನ್ಯಾಯಮೂರ್ತಿ ಚೆಲ್ಮೇಶ್ವರ್ ಅವರು, ದೆಹಲಿಯ ನಿವಾಸದ ಆವರಣದಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಂಗ ವ್ಯವಸ್ಥೆ ಕುರಿತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಇತರ ನ್ಯಾಯಮೂರ್ತಿಗಳಾದ ಚೆಲ್ಮೇ ಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಮುಂತಾದವರು ಉಪಸ್ಥಿತರಿದ್ದರು.

ನ್ಯಾಯಾಂಗ ವ್ಯವಸ್ಥೆ ಕುರಿತು ಸಿಜೆಐ ದೀಪಕ್ ಮಿಶ್ರಾ ಅವರಿಗೆ ಬರೆಯಲಾಗಿರುವ ಪತ್ರಕ್ಕೆ ನಾಲ್ವರು ನ್ಯಾಯಾಧೀಶರು ಸಹಿ ಮಾಡಿದ್ದು, ಪತ್ರದಲ್ಲಿರುವ ಸಾರಾಂಶವನ್ನು ಇಂದು ಬಹಿರಂಗಪಡಿಸಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಹಿಡಿದು ಸಿಜೆಐಗಳ ಬಳಿ ಅರುಹಿದ್ದೆವು. ಆದರೆ ಯಾವುದೇ ಪ್ರಯೋಜನಗಳಾಗಲಿಲ್ಲ. ಹೀಗಾಗಿ ಬೇರಾವುದೇ ದಾರಿಯಿಲ್ಲದೆ, ದೇಶದ ಜನತೆಯ ಮುಂದೆ ಬಂದಿದ್ದೇವೆಂದು ನ್ಯಾ.ಚಲ್ಮೇಶ್ವರ್ ಹೇಳಿದ್ದಾರೆ.

ಕೋರ್ಟ್’ನಲ್ಲಿ ಆಡಳಿತ ಸರಿಯಿಲ್ಲ. ಕೆಲವು ಬಾರಿ ಬಯಸದ ಘಟನೆಗಳು ನಡೆಯುತ್ತಿವೆ. ನ್ಯಾಯಾಲಯದ ಘನತೆಯನ್ನು ಎತ್ತಿ ಹಿಡಿಯುವ ಸಲುವಾಗಿ ಅನಿವಾರ್ಯವಾಗಿ ಸುದ್ದಿಗೋಷ್ಠಿ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ. ಸೂಕ್ತವಾದ ಪೀಠಗಳು ಪ್ರಕರಣಗಳ ತನಿಖೆ ನಡೆಸಬೇಕಿದೆ. ಆದರೆ ಪೀಠದ ವಿಚಾರದಲ್ಲಿ ನ್ಯಾಯಮೂರ್ತಿಗಳ ನಡುವೆ ಭಿನ್ನಮತ ಏರ್ಪಟ್ಟಿದ್ದು. ನ್ಯಾಯಮೂರ್ತಿ ಲೋಯಾ ಪ್ರಕರಣ, ನ್ಯಾಯಮೂರ್ತಿಗಳ ನೇಮಕಾತಿ ವಿಚಾರಗಳಲ್ಲಿ ನ್ಯಾಯಮೂರ್ತಿಗಳು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

1 × 2 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

 

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

Back To Top