ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ
Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರಾಜ್ಯದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತಿದೆ. ಸಚಿವ ಜೋಶಿ ಅವರ ಮಾರ್ಗದರ್ಶನದಂತೆ ಕೇಂದ್ರ ಕೃಷಿ ಸಚಿವಾಲಯ ಇದೀಗ ಕ್ವಿಂಟಲ್ಗೆ 7721 ರುಪಾಯಿ ಬೆಂಬಲ ಬೆಲೆ ಯೋಜನೆಯಲ್ಲಿ ಸೂರ್ಯಕಾಂತಿ ಖರೀದಿಗೆ ಅನುಮೋದನೆ ನೀಡಿದೆ.