ಬೀದರ್, ಕಲಬುರಗಿಯಲ್ಲಿ ಶೀತ ಗಾಳಿಯ ಎಚ್ಚರಿಕೆ
ಕರ್ನಾಟಕ ಹವಾಮಾನ ವರದಿ: ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸಲಿದ್ದು, ಇದು ಮುಂದಿನ ಒಂದು ವಾರ ಕಾಲ ಹೀಗೆಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ರಾಜ್ಯದ ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ.