ಅಡ್ಡ ಮತದಿಂದ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗಲ್ಲ: ಎಚ್‌ಡಿಕೆ
ಪರಿಷತ್ ಚುನಾವಣೆ ಮುಂದಿನ ವಿಧಾನಸಭೆಗೆ ದಿಕ್ಸೂಚಿ ಅಲ್ಲ ಎಂಬ ಮಾತನ್ನು ನಾನು ಒತ್ತಿ ಒತ್ತಿ ಹೇಳಬಯಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಮಿತ್ರಪಕ್ಷಗಳು ಒಟ್ಟಾಗಿ ಜನರ ಮುಂದೆ ಹೋಗುತ್ತೇವೆ. ನಮ್ಮ ನಡುವೆ ಯಾವುದೇ ರೀತಿಯ ಹೊಂದಾಣಿಕೆಯ ಕೊರತೆಯಾಗಲಿ, ವಿಶ್ವಾಸದ ಕೊರತೆಯಾಗಲಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.