ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಈ ಪ್ರದೇಶದಲ್ಲಿ ಮದ್ಯ-ಮಾಂಸ ಮಾರಾಟ ನಿಷೇಧ
PM Narendra Modi: ಬೆಂಗಳೂರು ಹಾಗೂ ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಶುಕ್ರವಾರ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹಲವು ಮುನ್ನೆಚ್ಚರಿಕೆ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.