ಸಾಧಕರಿಗೆ ಮಾಸ್ಕೋದಲ್ಲಿ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ ಪ್ರದಾನ
ಭಾರತ ಮತ್ತು ರಷ್ಯಾದ ಗಣ್ಯರ ಸಮ್ಮುಖದಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಮಾಜ ಸೇವೆ, ಕೃಷಿ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಚಿತ್ರರಂಗ, ಕೈಗಾರಿಕೋದ್ಯಮ, ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಮುಂತಾದ ಹಲವು ರಂಗಗಳಲ್ಲಿ ತಮ್ಮಷ್ಟಕ್ಕೆ ತಾವೇ ಸಾಧನೆ ಗೈಯುತ್ತಿರುವವರನ್ನು ಗುರುತಿಸಿ ಅವರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗೌರವಿಸಿದ್ದು ‘ವಿಶ್ವವಾಣಿ’ಯ ವಿಶೇಷವಾಗಿತ್ತು.