ಪೆಟ್ರೋಲ್ ಅಂಗಡಿಯಲ್ಲಿ ಬೆಂಕಿ ಅವಘಡ; ಮಾಲೀಕ ಸಜೀವ
Honnali News: ಎಂದಿನಂತೆ ಬೆಳಿಗ್ಗೆ ಅಂಗಡಿ ಬಾಗಿಲು ತೆರೆದು ಪೂಜೆ ಸಲ್ಲಿಸುವ ವೇಳೆ ಬೆಂಕಿ ಅವಘಡ ಸಂಭವಿಸಿದೆ. ದೇವರಿಗೆ ದೀಪ ಹಚ್ಚುತ್ತಿದ್ದಂತೆ ಬೆಂಕಿಯ ಕಿಡಿ ಪಕ್ಕದಲ್ಲೇ ಇರಿಸಿದ್ದ ಪೆಟ್ರೋಲ್‌ಗೆ ತಗುಲಿ ದುರಂತ ನಡೆದಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಪೊಲೀಸ್ ವೆರಿಫಿಕೇಶನ್ ಕಡ್ಡಾಯಗೊಳಿಸಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಲಾಗಿದೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ.
ಹೃದಯಾಘಾತ ಎನ್ನುವುದು ಸಾವಿಗೆ ಕಾರಣವಾಗುವ ರೋಗಗಳಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ. ಅದೇ ರೀತಿ 50 ಶೇಕಡಾ ಹೃದಯಾಘಾತಗಳನ್ನು ಜೀವನಶೈಲಿ ಪರಿವರ್ತನೆ, ಆಹಾರ ಪದ್ದತಿ ಬದಲಾವಣೆ ಮತ್ತು ನಿರಂತರ ಔಷಧಿ ಸೇವನೆಯಿಂದ ತಡೆಗಟ್ಟಬಹುದಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಹೆಚ್ಚು ಹೆಚ್ಚು ಹೃದಯಾಘಾತವಾಗುವ ಕಾರಣದಿಂದಾಗಿ ಕ್ಯಾಲ್ಸಿಯಂ ಸ್ಕ್ಯಾನ್ ಪರೀಕ್ಷೆ ಮತ್ತಷ್ಟು ಮುನ್ನೆಲೆಗೆ ಬಂದಿದೆ.
ಒಂದೆಡೆ ಬರದ ಪರಿಣಾಮ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದರೆ, ಮತ್ತೊಂದೆಡೆ ಗ್ರಾಮೀಣ ಭಾಗದಲ್ಲಿ ಕೂಲಿ ಕೆಲಸಗಳೂ ಸಿಗುತ್ತಿಲ್ಲ. ಹೀಗಾಗಿ ಜೀವನ ನಿರ್ವಹಣೆಗಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಇಡೀ ಕುಟುಂಬವೇ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪೋಷಕರೊಂದಿಗೆ ಮಕ್ಕಳು ಕೂಡ ವಲಸೆ ಹೋಗುತ್ತಿರುವುದರಿಂದ ಅವರ ಶಿಕ್ಷಣ ಮೊಟಕುಗೊಳ್ಳುವ ಆತಂಕ ಎದುರಾಗಿದೆ.
2008ಕ್ಕಿಂತ ಮುಂಚೆ ಮನೆ ಕಟ್ಟಿದವರಿಗೆ, ಸುಮಾರು 1 ಲಕ್ಷ ಮಾಲಿಕರಿಗೆ ಆಸ್ತಿ ದೊರಕಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಸರ್ಕಾರ ಅವಕಾಶ ನೀಡಿತು. 2021ರಲ್ಲಿಯೇ ದರ ನಿಗದಿ ಮಾಡಿತ್ತು. ಆದರೆ ಶುಲ್ಕ ಹೆಚ್ಚಾಯಿತೆಂದು ಕೇವಲ 600ಜನ ಮಾತ್ರ ಅರ್ಜಿ ಹಾಕಿದ್ದರು. ಆದರೆ ನಾವು ಶುಲ್ಕ ಕಡಿಮೆ ಮಾಡಿ ಇನ್ನೊಂದು ಅವಕಾಶ ನೀಡಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೂ ನಿಮಗೂ ಮುನಿಸು ಉಂಟಾಗಿದೆಯೇ ಎಂಬ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಭೂಸ್ವಾಧೀನಕ್ಕೊಳಪಟ್ಟ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಮೀನಿನಲ್ಲಿನ ಅನಧಿಕೃತ ಕಟ್ಟಡಗಳನ್ನು ಸರ್ಕಾರದ ಸುಗ್ರೀವಾಜ್ಞೆ ದಿನಾಂಕದಿಂದ 12 ವರ್ಷಗಳ ಹಿಂದೆ ವಾಸಯೋಗ್ಯ ಮನೆಗಳನ್ನು ನಿರ್ಮಿಸಿದ್ದಲ್ಲಿ ಮರುಮಂಜೂರಾತಿ ವ್ಯಾಪ್ತಿಯಲ್ಲಿ ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯ ಸರಕಾರಕ್ಕೆ ಜನರ ನೋವನ್ನು ತಲುಪಿಸಿ, ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯುವಂತೆ ಎಚ್ಚರಿಕೆ ನೀಡಲಾಗುವುದು. ಇದಾದ ಬಳಿಕ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪಾದಯಾತ್ರೆ ಗಳಲ್ಲೂ ಬೆಲೆ ಏರಿಕೆ ವಿರುದ್ಧದ ಹೋರಾಟವನ್ನು ಮುಂದು ವರಿಸಲಾಗುವುದು. ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಾಗುವುದು.
Deepavali 2026: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಜತೆಗೆ ಪಟಾಕಿ ಅಬ್ಬರವೂ ಸಾಮಾನ್ಯ. ಆದರೆ ಸಂಡೂರಿನ ಶ್ರೀಶೈಲೇಶ್ವರ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ದೀಪಾವಳಿಯನ್ನು ಸಮಾಜಕ್ಕೆ ಉತ್ತಮ ಸಂದೇಶ ಸಾರಳು ಬಳಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಪಟಾಕಿಗೆ ಹಣ ವ್ಯಯಿಸುವ ಬದಲು ಪೌರ ಕಾರ್ಮಿಕರಿಗೆ ಹೊಸ ಬಟ್ಟೆ ವಿತರಿಸಿದ್ದಾರೆ.
Bengaluru Mass Murder: ಬೆಂಗಳೂರಿನಲ್ಲಿ ನಡೆದ 7 ಮಂದಿಯ ಸರಣಿ ಹತ್ಯೆಯ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ರಾಜಾಜಿನಗರದ ಕ್ಯಾಬ್ ಡ್ರೈವರ್ ಇಂದುಶೇಖರ್ ಪತ್ನಿ ಮತ್ತು ಆಕೆಯ ಕುಟುಂಬದ 6 ಮಂದಿ ಸೇರಿ 7 ಜನರನ್ನು ಹತ್ಯೆಗೈದು ಮೃತದೇಹವನ್ನು ವಿವಿಧ ಕಡೆ ಎಸೆದಿದ್ದು, ಮೈಸೂರಿನಲ್ಲಿ ಇದೀಗ 2 ಮೃತದೇಹ ಪತ್ತೆಯಾಗಿದೆ.
ಅಂಡಾಣು ಬಿಡುಗಡೆಯ ಪ್ರಕ್ರಿಯೆ, ಗರ್ಭಾಶಯದ ಆರೋಗ್ಯ ಮತ್ತು ಅದರ ಒಳಪದರದ ದಪ್ಪವು ಗರ್ಭಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಸಮಯೋಚಿತ ತಪಾಸಣೆ, ಸೂಕ್ತ ಚಿಕಿತ್ಸೆ, ಆಹಾರ ಕ್ರಮ, ನಿಯಮಿತ ವ್ಯಾಯಾಮ ಹಾಗೂ ವೈದ್ಯಕೀಯ ಮೇಲ್ವಿಚಾರಣೆಯು ಮಾತೃತ್ವದ ಕನಸಿನತ್ತ ಸಾಗಲು ಸಹಕಾರಿಯಾಗಬಲ್ಲವು ಎಂದು ಡಾ. ಜ್ಯೋತಿಕಾ ಹುಬ್ಳೀಕರ್ ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಸಿದ್ಧ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತರ ದರ್ಶನದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಬೆಟ್ಟದ ತುದಿಯಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಸುರಕ್ಷತಾ ಕಂಬಿ (ರೈಲಿಂಗ್) ದಿಢೀರ್ ಮುರಿದುಬಿದ್ದ ಪರಿಣಾಮ, ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಕಾರಣಿಯೊಬ್ಬರ ಭದ್ರತಾ ಸಿಬ್ಬಂದಿಯೇ ಸಿನಿಮಾ ಶೈಲಿಯಲ್ಲಿ ದರೋಡೆಗೆ ಸಂಚು ರೂಪಿಸಿ, ಕೋಟ್ಯಂತರ ರೂಪಾಯಿ ಲೂಟಿ ಮಾಡಲು ಯತ್ನಿಸಿದ ರೋಚಕ ಘಟನೆಯೊಂದು ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬೆಳಕಿಗೆ ಬಂದಿದೆ. ಬಂಧಿತರಿಂದ ಬರೋಬ್ಬರಿ 2.39 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ಮಾಸ್ಟರ್ ಮೈಂಡ್ ಗನ್‌ಮ್ಯಾನ್ ಚಿದಾನಂದನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಲ್ಲು ಗಣಿಗಾರಿಕೆ (ಕ್ರಷರ್) ಗಳಿಗೆ ಅನುಮತಿ ನೀಡುವುದು ಹಾಗೂ ವಸತಿ ಬಡಾವಣೆಗಳ ಅಲ್ಯುಲೇಷನ್ (ಅನ್ಯ ಸಂಕ್ರಮಣ) ವಿಚಾರದಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಅಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಕೂಡ ಶಾಮೀಲಾಗಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಪೆಟ್ರೋಲ್ ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿರುವ ಬಗ್ಗೆ ಕೇಳಿಬಂದಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.