ಡಿಜಿ-ಐಜಿಪಿ ಅಲೋಕ್ ಮೋಹನ್ ಅವಧಿ ಮೇ 21ರವರೆಗೆ ವಿಸ್ತರಣೆ
Alok Mohan: 2023ರ ಮೇ 20ರಂದು ಡಿಜಿ-ಐಜಿಪಿಯಾಗಿ ನೇಮಕವಾಗಿದ್ದ ಅಲೋಕ್ ಮೋಹನ್ ಅವರು, ಇದೇ ಏಪ್ರಿಲ್ 30ರಂದು ನಿವೃತ್ತಿಯಾಗಬೇಕಿತ್ತು. ಆದರೆ, ಇದೀಗ 22 ದಿನಗಳ ಕಾಲ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಇವರು 1987ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ.