ಲೇಖಕಿ ಬಾನು ಮುಷ್ತಾಕ್ರಿಂದ ಈ ಬಾರಿಯ ದಸರಾ ಉದ್ಘಾಟನೆ
Banu Mushtaq: ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.