ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
BC Nagesh: ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬುಧವಾರ (ಆಗಸ್ಟ್ 19) ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
Sri Raghaveshwara Bharathi Swamiji: ಎಲ್ಲ ಕಡೆಯಲ್ಲೂ ಸಮಾನತೆಯನ್ನು ಹುಡುಕುವುದು ಮೂರ್ಖತನವಾಗುತ್ತದೆ. ಸೃಷ್ಟಿಯೆಂಬುದು ವೈವಿಧ್ಯತೆಯಾಗಿದ್ದು, ಮುಕ್ತಿಯಲ್ಲಿ ಮಾತ್ರ ಏಕತೆಯನ್ನು ಕಾಣಬಹುದು. ಕೈ ಇರುವಷ್ಟು ಉದ್ದ ಮೂಗಿಲ್ಲ. ಹಾಗಾಗಿ ಎಲ್ಲೆಡೆ ಸಮಾನತೆಯನ್ನು ಹುಡುಕಲಾಗದು. ದೇಹದಲ್ಲೂ ಎಲ್ಲವೂ ಸಮಾನವಾಗಿರಲು ಸಾಧ್ಯವಿಲ್ಲ. ಆಯಾಯ ಧಾತುಗಳು ಎಷ್ಟಿರಬೇಕೋ ಅಷ್ಟಿರಬೇಕು. ಇದು ಸೃಷ್ಟಿಯ ಅದ್ಭುತ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.
Viral News: ಖ್ಯಾತ ಮಹಿಳಾ ಉದ್ಯಮಿಯೊಬ್ಬರು ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಭೆಗಳನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಬೆಂಗಳೂರಿನ ಉದ್ಯಮಿಗಳು, ಉತ್ಪನ್ನ ವ್ಯವಸ್ಥಾಪಕರು ಮತ್ತು ತಂತ್ರಜ್ಞಾನ ವೃತ್ತಿಪರರ ಶ್ರಮ ಅದ್ಭುತವಾದುದು. ಆದರೆ ಇಲ್ಲಿನ ದೈನಂದಿನ ಸಂಚಾರ ಹಾಗೂ ಟ್ರಾಫಿಕ್ ತಮ್ಮ ಆರೋಗ್ಯವನ್ನೇ ಹಾಳುಗೆಡವಿದೆ ಎಂದು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಡಿಯಲ್ಲಿ ಮೊದಲ ಕರಡು ಮತದಾರರ ಪಟ್ಟಿಯಿಂದ ಸುಮಾರು 1.08 ಕೋಟಿ ಮತದಾರರು ಹೊರಗುಳಿಯುವ ಸಾಧ್ಯತೆಯಿದೆ. ಜೂನ್ 30ರಂದು ಆರಂಭವಾದ ಎಸ್ಐಆರ್ ಕಾರ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕರ್ನಾಟಕದಾದ್ಯಂತ ಮನೆ-ಮನೆಗೆ ಭೇಟಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.
CM DK Shivakumar: ನಮ್ಮದು ಸಿದ್ದರಾಮಯ್ಯ ಅವರ ಸರ್ಕಾರದ ಮುಂದುವರಿದ ಭಾಗ. ಹೊಸ ಆಲೋಚನೆ ಹೊಂದಿದ್ದೇವೆ. ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಅವರ ಆಲೋಚನೆಯನ್ನು ನಾವು ಬಿಡದೆ ಮುಂದುವರಿಸುತ್ತೇವೆ. ಕುಮಾರಸ್ವಾಮಿ ಅವರ ಬಿಡದಿ, ದೇವೇಗೌಡರ ನೈಸ್ ಯೋಜನೆಯನ್ನು ನಾವು ಮುಂದುವರಿಸುತ್ತೇವೆ. ಈ ಯೋಜನೆಗಳಲ್ಲಿ ತಪ್ಪಾಗಿದ್ದರೆ ಸರಿ ಮಾಡೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಘಟನೆ ಮಂಗಳವಾರ ಬೆಳಗಿನ ಜಾವ ಸುಮಾರು 6 ಗಂಟೆಯ ಸಮಯದಲ್ಲಿ ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಸಂಭವಿಸಿದೆ. ಸದರಿ ಪ್ಲಾಸ್ಟಿಕ್ ಫ್ಯಾಕ್ಟರಿಯು ನಗರದ ಎಂ.ಜಿ. ರಸ್ತೆ ಯಲ್ಲಿರುವ ಫ್ರೆಂಡ್ಸ್ ಇಲಿಯಾಸ್ ಎಂಬುವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಗೆ ವ್ಯಾಪಿ ಸಿದ್ದು, ಒಳಗಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಇದರಿಂದ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಕೆಪಿಎಸ್ಸಿ ಪರೀಕ್ಷೆಯಲ್ಲಿ ರಾಮಕೃಷ್ಣಪ್ಪ ಅವರ ಪುತ್ರ ಲೋಕೇಶ್ ಅವರು ರಾಜ್ಯಕ್ಕೆ 27ನೇ ಶ್ರೇಣಿ ಪಡೆದಿರುವ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 7 ಗಂಟೆಗೆ ಮನೆಗೆ ಆಗಮಿಸಿದ ಇ.ಡಿ. ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಿದ್ದು, ಸತತ ಏಳೆಂಟು ಗಂಟೆಗಳಿಗೂ ಹೆಚ್ಚು ಕಾಲ ತನಿಖೆ ಮುಂದುವರಿದಿದೆ.
CM DK Shivakumar: ನನಗೆ ಅಶ್ವಥ್ ನಾರಾಯಣ್, ವಿಜಯೇಂದ್ರ ಅವರ ತಂಡದ ಮೇಲೆ ಬಹಳ ಬೇಜಾರಾಗಿದೆ. ಎರಡು ಮೂರು ದಿನ ಕುಳಿತುಕೊಂಡು ನಾನು ಹೇಳುವುದನ್ನು ಕೇಳಿ ಎಂದು ಹೇಳಿದ್ದೇನೆ. ಆದರೂ ಸದನಕ್ಕೆ ಬರುತ್ತಿದ್ದಂತೆ ಧಿಕ್ಕಾರ ಎಂದು ಕೂಗಿ ನನ್ನ ಮನಸ್ಸಿಗೆ ಆಳವಾದ ಗಾಯ ಮಾಡಿದ್ದೀರಿ. ಈ ವಿಚಾರ ನನಗೆ ನಾಟಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಮಣಿಪಾಲ ವೃತ್ತದ (Circle) ಪ್ರಧಾನ ವ್ಯವಸ್ಥಾಪಕರು ಮತ್ತು ವೃತ್ತ ಕಚೇರಿಯ ಮುಖ್ಯಸ್ಥ ಎಚ್. ಕೆ. ಗಂಗಾಧರ್ ಅವರ ಮಾರ್ಗದರ್ಶನದಲ್ಲಿ, ಕೆನರಾ ಬ್ಯಾಂಕ್ನ ಶಿವಮೊಗ್ಗ ವಲಯವು ತನ್ನ BHIM QR ಮತ್ತು ಹೊಸದಾಗಿ ಪರಿಚಯಿಸಲಾದ 'ಸೌಂಡ್ ಬಾಕ್ಸ್' (Sound Box) ಸೇವೆಗಳನ್ನು ಉತ್ತೇಜಿಸಲು ವ್ಯಾಪಾರಿಗಳೊಂದಿಗೆ ವ್ಯಾಪಕ ಸಂಪರ್ಕ ಸಾಧಿಸುವ ಅಭಿಯಾನ ನಡೆಸಿತು.
CM D.K. Shivakumar: ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಕರ್ನಾಟಕದ ಅಭಿವೃದ್ಧಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆ ಮತ್ತು ಹಳೆಯ ಘಟನೆಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಮಾತನಾಡಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಬೆಳವಣಿಗೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.
Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
Bengaluru News: ಬೆಂಗಳೂರಿನ ಚಿಕ್ಕಬಾವಣಾವರದ ಮನೆಯೊಂದರಲ್ಲಿ ಮೃತಪಟ್ಟ ಟೆಕ್ಕಿ ಮತ್ತು ಅವರ 5 ವರ್ಷದ ಪುತ್ರನ ನಿಗೂಢ ಸಾವಿನ ರಹಸ್ಯ ಬಯಲಾಗಿದೆ. ಮೃತರನ್ನು ಅಭಿನವ್ (38) ಹಾಗೂ ಅವರ ಪುತ್ರ ಯದುವೀರ್ (5) ಎಂದು ಗುರುತಿಸಲಾಗಿದೆ. ಅಭಿನವ್ ಅವರ ಪತ್ನಿ ಹರಿಣಿಯೇ ಈ ಹತ್ಯೆ ಮಾಡಿದ್ದಾಳೆ ಎನ್ನುವುದು ತಿಳಿದು ಬಂದಿದೆ.
ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಆಯ್ಕೆಯಾಗಿದ್ದಾರೆ. ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳ ವೈದ್ಯ ಅವರ ಹೆಸರನ್ನು ಅನುಮೋದಿಸಿದರು.
Shivashankarappa Sahukar: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಶಿವಶಂಕರಪ್ಪ ಎಸ್.ಸಾಹುಕಾರ ಅವರ ನಿವಾಸ ಸೇರಿದಂತೆ ಒಟ್ಟು 21 ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ
Hanur encounter case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ನೇರವೇರಿದ ಬಳಿಕ ಅರಣ್ಯ ಇಲಾಖೆ ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ತನಿಖಾಧಿಕಾರಿಗಳಿ ಒಪ್ಪಿಸಿತ್ತು.
ಕನಸು, ಪರಿಶ್ರಮ, ನಂಬಿಕೆ, ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆಯನ್ನು ಪೂರೈಸಿದ ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ನ ಸುವರ್ಣ ಮಹೋತ್ಸವ ಸಮಾರಂಭ ಮೈಸೂರಿನಲ್ಲಿ ಸಂಭ್ರಮದಿಂದ ಜರುಗಿತು. ಸಂಸ್ಥೆಗೆ ಸುವರ್ಣ ಮಹೋತ್ಸವದ ಜತೆಗೆ ನಗರದ ಬನ್ನಿಮಂಟಪ ಬಡಾವಣೆಯ ಜೋಡಿ ತೆಂಗಿನಮರ ರಸ್ತೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಆರ್ಎಲ್(VRL) ಕಟ್ಟಡ, ಬೃಹತ್ ಗೋದಾಮು ಕಟ್ಟಡ ಲೋಕಾರ್ಪಣೆ ಸಹ ಇದೇ ವೇಳೆ ನೆರವೇರಿಸಲಾಯಿತು.
ಕೊಪ್ಪಳ ಜಿಲ್ಲೆಯ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟ(Anjanadri Hill)ದ ದೇವಸ್ಥಾನ ಪ್ರದೇಶದ ಸಮಗ್ರ ಅಭಿವೃದ್ಧಿಗೆ 1350 ಕೋಟಿ ರು.ಗಳ ಅಗತ್ಯವಿದ್ದು, ವಿಶೇಷ ಅನುದಾನ ಮಂಜೂರಿಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್(Tourism Minister K.J. George) ತಿಳಿಸಿದ್ದಾರೆ.