ಬೆಂಗಳೂರಿನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗು ಸಾವು
ಬೆಂಗಳೂರು ನಗರದ ನಾಯಂಡಹಳ್ಳಿಯ ವಿನಾಯಕ ಲೇಔಟ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂರು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.