ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

New year celebrations: ಅದ್ಧೂರಿಯಾಗಿ ಹೊಸ ವರ್ಷ ಸ್ವಾಗತಿಸಿದ ಬೆಂಗಳೂರಿಗರು; ರಂಗೇರಿದ ಪಾರ್ಟಿ, ಪಟಾಕಿ ಸಿಡಿಸಿ ಸಂಭ್ರಮ

ಅದ್ಧೂರಿಯಾಗಿ ಹೊಸ ವರ್ಷ ಸ್ವಾಗತಿಸಿದ ಬೆಂಗಳೂರಿಗರು; ಪಟಾಕಿ ಸಿಡಿಸಿ ಸಂಭ್ರಮ

New Year 2026: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಜನರು ಸಂಭ್ರಮದಿಂದ 2026ರ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಬುಧವಾರ ರಾತ್ರಿ ಪಬ್‌, ಬಾರ್‌ಗಳು ಜನರಿಂದ ತುಂಬಿ ತುಳುಕಿದವು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

IAS, IPS Officers Transfer: ರಾಜ್ಯದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ರಾಜ್ಯದ 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್., ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಮೀನಾ ನಾಗರಾಜ್ ಸೇರಿ ಐವರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನು ಯಾವೆಲ್ಲಾ ಅಧಿಕಾರಿಗಳು ವರ್ಗಾವಣೆ ಆಗಿದ್ದಾರೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

Muralidhar Halappa: ​ಪತ್ರಕರ್ತರ ಪ್ರಶ್ನೆಗೆ ಹಾಲಪ್ಪ ಸ್ಪಷ್ಟನೆ; ಜ. 4ಕ್ಕೆ ಬೃಹತ್ ‘ಜನಧ್ವನಿ’ ಪ್ರತಿಭಟನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ಮುರಳೀಧರ ಹಾಲಪ್ಪ ಆಕ್ರೋಶ

ರಾಜ್ಯ ಸರ್ಕಾರವೇ ಅರಣ್ಯ ನಿಯಮ ಉಲ್ಲಂಘಿಸಿರುವುದು ಮತ್ತು ಭೈರಗೊಂಡ್ಲು ಜಲಾಶಯ ನಿರ್ಮಿ ಸಲು ರೈತರ ಮನ ವೊಲಿಸುವಲ್ಲಿ ವಿಫಲವಾಗಿರುವುದು ವಿಳಂಬಕ್ಕೆ ಕಾರಣವಲ್ಲವೇ?" ಎಂದು ಪ್ರಶ್ನಿಸಿ ದರು. ಇದಕ್ಕೆ ಉತ್ತರಿಸಿದ ಹಾಲಪ್ಪ, "ಬೃಹತ್ ಯೋಜನೆಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ಬದಲಾವಣೆ ಸಹಜ. ಅರಣ್ಯ ನಿಯಮ ಉಲ್ಲಂಘನೆ ಎಂಬುದು ಕೇಂದ್ರದ ನೆಪವಷ್ಟೇ. ಈಗಾಗಲೇ 111 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲಾಗಿದೆ

ಚಿಕ್ಕನಾಯಕನಹಳ್ಳಿಯಲ್ಲಿ ಒತ್ತುವರಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ; ಕ್ರಮಕ್ಕೆ ಆಗ್ರಹ

ಚಿಕ್ಕನಾಯಕನಹಳ್ಳಿಯಲ್ಲಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಅಂಚೆ ಕಚೇರಿ ಪಕ್ಕದ ಜಾಗವು ಸರ್ಕಾರಿ ಸ್ವತ್ತಾಗಿದ್ದು, ಅದನ್ನು ಒತ್ತುವರಿ ಮಾಡಿ ಮಳಿಗೆ ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಟ್ರೇಡ್ ಲೈಸನ್ಸ್ ಅಥವಾ ಅಧಿಕೃತ ದಾಖಲೆಗಳಿಲ್ಲ. ಹೀಗಿದ್ದರೂ ಬೆಸ್ಕಾಂ ಅಧಿಕಾರಿಗಳು ಯಾವ ಆಧಾರದ ಮೇಲೆ ಮೀಟರ್ ಅಳವಡಿಸಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಆರೋಪಿಸಿದ್ದಾರೆ.

Karwar News: ಬಸ್‌ನಲ್ಲಿ ಯುವತಿ ಎದೆಗೆ ಕೈ ಹಾಕಿದ ಯುವಕ; ಕಾಮುಕನಿಗೆ ಬಿತ್ತು ಧರ್ಮದೇಟು

ಬಸ್‌ನಲ್ಲಿ ಯುವತಿ ಎದೆಗೆ ಕೈ ಹಾಕಿದ ಯುವಕ; ಕಾಮುಕನಿಗೆ ಧರ್ಮದೇಟು

ಕಾರವಾರದಿಂದ ಅಂಕೋಲಾಗೆ ಬಸ್‌ನಲ್ಲಿ ತೆರಳುತ್ತಿದ್ದ ಯುವತಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಸೀಟ್‌ನಲ್ಲಿ ನಿದ್ರಿಸುತ್ತಿದ್ದ ಯುವತಿ ಎದೆಯ ಮೇಲೆ ಕೈ ಹಾಕಿದ್ದಾನೆ. ಇದರಿಂದ ಆರೋಪಿಯನ್ನು ಯುವತಿ ತರಾಟೆಗೆ ತೆಗೆದುಕೊಂಡಿದ್ದಾಳೆ. ಈ ವೇಳೆ ಪ್ರಯಾಣಿಕರಿಂದ ಯುವಕನಿಗೆ ಧರ್ಮದೇಟು ಬಿದ್ದಿದೆ.

MLC Ramesh Babu: ​ಬೆಂಗಳೂರಿನಲ್ಲಿ ಸ್ಪರ್ಧೆಗೆ ಕ್ಷೇತ್ರ ಹುಡುಕಾಟ: ರಾಜಕೀಯ ಭವಿಷ್ಯ ಬಿಚ್ಚಿಟ್ಟ ಎಂಎಲ್‌ಸಿ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ,"

Chikkanayakanahalli News: ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಬೆಸ್ಕಾಂ ಎಇಇ ಗವಿರಂಗಯ್ಯ ಪ್ರತಿಕ್ರಿಯಿಸಿ ನಮಗೆ ಜಾಗ ಒತ್ತುವರಿಯಾಗಿದೆಯೇ ಎಂದು ಪರಿಶೀಲಿಸುವ ಅಧಿಕಾರವಿಲ್ಲ. ಕಂದಾಯ ಇಲಾಖೆ ಅಥವಾ ಪುರಸಭೆ ಪತ್ರ ನೀಡಿದರೆ ತಕ್ಷಣ ಸಂಪರ್ಕ ಕಡಿತಗೊಳಿಸು ತ್ತೇವೆ ಎಂದು ಹಾರಿಕೆ ಉತ್ತರ ನೀಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಶೇಖರ್ ಅಕ್ರಮ ಸಂಪರ್ಕಗಳನ್ನು ಕೂಡಲೇ ಕಡಿತಗೊಳಿಸುವಂತೆ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ: ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶ ನಿರ್ಮಾಣವಾಗಿದೆ; ಆರ್. ಅಶೋಕ್ ಕಿಡಿ

R Ashok: ಯಲಹಂಕದ ಕೋಗಿಲು ಬಡಾವಣೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಈ ಸರ್ಕಾರ ಬಂದ ಬಳಿಕ ಕರ್ನಾಟಕವು ಮಿನಿ ಬಾಂಗ್ಲಾದೇಶೀಯರ ತಾಣ ಆಗುತ್ತಿದೆ. ಇವರು ಯಾರು? ಎಲ್ಲಿಂದ ಬಂದರು? ಗೂಗಲ್ ಮ್ಯಾಪ್‍ನಡಿ ಇಲ್ಲಿ ಒಂದು ವರ್ಷದ ಹಿಂದೆ ಮನೆಗಳಿರಲಿಲ್ಲ. ಈಗ ಮನೆಗಳಿವೆ. ಇವರೆಲ್ಲ ಬಂದು ಆರು ತಿಂಗಳಾಗಿಲ್ಲ. ಇವರಿಗೆಲ್ಲ ವಿದ್ಯುತ್ ಸಂಪರ್ಕ ಕೊಟ್ಟದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

Karnataka Covid Scam: ಕೋವಿಡ್ ಹಗರಣ; ರಾಜ್ಯ ಸರ್ಕಾರಕ್ಕೆ ಅಂತಿಮ‌ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಕೋವಿಡ್ ಹಗರಣ ಕುರಿತು ರಾಜ್ಯ ಸರ್ಕಾರಕ್ಕೆ ಅಂತಿಮ‌ ವರದಿ ಸಲ್ಲಿಕೆ

ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ 2023ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ.

ವಿಬಿ ಜಿ ರಾಮ್‌ ಜಿ ಯೋಜನೆ ಅನುಷ್ಠಾನ ಬೇಡ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಿಬಿ ಜಿ ರಾಮ್‌ ಜಿ ಯೋಜನೆ ಅನುಷ್ಠಾನ ಬೇಡ; ಪ್ರಧಾನಿಗೆ ಸಿಎಂ ಪತ್ರ

ಹೊಸ ನಿಯಮಗಳು ಉದ್ಯೋಗ ಖಾತ್ರಿ ಯೋಜನೆಯ ಮೂಲ ಆಶಯಕ್ಕೆ ವಿರುದ್ಧವಾಗಿದ್ದು, ಕೆಲಸದ ಹಕ್ಕನ್ನು ಕಸಿಯಲಿದೆ. ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಬದಲಾಯಿಸಿ, ಗುತ್ತಿಗೆದಾರರ ಕೇಂದ್ರಿತ ಮಾದರಿಯಾಗಿಸಲು ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಾಚರಣೆಗೆ ಪೊಲೀಸ್ ಹದ್ದಿನ ಕಣ್ಣು; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

ಹೊಸ ವರ್ಷಾಚರಣೆ; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

Kalaburagi News: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕಲಬುರಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

New year celebrations: ಇಂದು ಬೆಂಗಳೂರಿನ ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ, ಎಲ್ಲೆಲ್ಲಿ ಪಾರ್ಕಿಂಗ್‌ ವ್ಯವಸ್ಥೆ?

ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

Traffic restrictions in Bengaluru: ಬೆಂಗಳೂರಿನಲ್ಲಿ ಡಿಸೆಂಬರ್ 31ರ ರಾತ್ರಿ 11ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ನಗರದ ಹಲವು ಮೇಲ್ಸೇತುವೆಗಳಲ್ಲಿ (ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಹೊರತುಪಡಿಸಿ) ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆಯಲ್ಲೂ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಬದುಕಿನ ಮಹಾ ಕೊಡುಗೆ: ಮೃತರಾದ ವೆಂಕಟೇಶ್ ಕುಟುಂಬದಿಂದ ಅಂಗಾಂಗ ದಾನದ ಮೂಲಕ ಇತರರ ಬಾಳಿಗೆ ಭರವಸೆಯ ಬೆಳಕು

ಅಂಗಾಂಗ ದಾನದ ಮೂಲಕ ಇತರರ ಬಾಳಿಗೆ ಭರವಸೆಯ ಬೆಳಕು

ಮಣಿಪಾಲ್ ಆಸ್ಪತ್ರೆಯ ನರರೋಗ ವಿಭಾಗದ ಹಿರಿಯ ತಜ್ಞರಾದ ಡಾ.ರಾಘವೇಂದ್ರ ಎಸ್. ಮತ್ತು ಡಾ. ಸ್ವಾತಿ ಸುರೇಂದ್ರನ್ ನಾಯರ್ ಅವರ ನೇತೃತ್ವದಲ್ಲಿ ಪರೀಕ್ಷೆ ನಡೆಸಿದಾಗ, ಅವರಿಗೆ ತೀವ್ರ ಸ್ವರೂಪದ ಪಾರ್ಶ್ವವಾಯು (Posterior Circulation Stroke) ಸಂಭವಿಸಿರುವುದು ಮತ್ತು ಮೆದುಳಿನ ಕಾಂಡಕ್ಕೆ (Brainstem) ಸರಿಪಡಿಸಲಾಗದ ಹಾನಿಯಾಗಿರುವುದು ಕಂಡು ಬಂದಿತು.

Kalaburagi Central Jail: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಎಣ್ಣೆ ಪಾರ್ಟಿ, ಇಸ್ಪೀಟ್‌ ಆಟ; ಕೈದಿಗಳ ಹೈಫೈ ಲೈಫ್‌ನ ವಿಡಿಯೊ ವೈರಲ್!

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಹೈಫೈ ಲೈಫ್; ವಿಡಿಯೊ ವೈರಲ್!

ವೈರಲ್ ವಿಡಿಯೊದಲ್ಲಿ ಕಲಬುರಗಿ ಜೈಲಿನ ಕೈದಿಗಳು ಬ್ರ್ಯಾಂಡೆಡ್ ಎಣ್ಣೆ ಸೇವಿಸುತ್ತಾ, ಸಿಗರೇಟ್ ಸೇದುತ್ತಾ, ಗುಂಪು ಗುಂಪಾಗಿ ಇಸ್ಪೀಟ್‌ ಆಟದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಪ್ಲೈ ಆಗುತ್ತಿವೆ ಎಂಬ ಪ್ರಶ್ನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣ; ಶ್ರೀ ಕ್ಷೇತ್ರದ ಪರ ಹಿರಿಯ ನ್ಯಾಯವಾದಿ ಸಿವಿ ನಾಗೇಶ್, ಮಹೇಶ್ ಕಜೆ ವಕಾಲತ್ತು

ಧರ್ಮಸ್ಥಳ ಪರ ಖ್ಯಾತ ವಕೀಲ ಸಿವಿ ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಂಟ್ರಿ

ಇಡೀ ದೇಶದ ಗಮನ ಸೆಳೆದ, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಡಲಾಗಿದೆ ಎಂಬ ಆರೋಪದ ʼಬುರುಡೆ ಪ್ರಕರಣʼಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದ್ದು, ಹಿರಿಯ ವಕೀಲರಾದ ಸಿ.ವಿ. ನಾಗೇಶ್ ಮತ್ತು ಮಹೇಶ್ ಕಜೆ ಅವರು ಧರ್ಮಸ್ಥಳ ಶ್ರೀ ಕ್ಷೇತ್ರದ ಪರ ವಕಾಲತ್ತು ವಹಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. ನ್ಯಾಯವಾದಿ ಸಿ.ವಿ.ನಾಗೇಶ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅನುಭವಿ ವಕೀಲರಾಗಿದ್ದು, ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಖ್ಯಾತರಾಗಿದ್ದಾರೆ; ಇವರು ನಟ ದರ್ಶನ್, ಹೆಚ್.ಡಿ. ರೇವಣ್ಣ, ಮತ್ತು ಮುರುಘಾ ಮಠದ ಸ್ವಾಮೀಜಿಗಳಂತಹ ಗಣ್ಯರ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ.

New Year 2026: ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷದ ಹಿನ್ನೆಲೆ ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

Bengaluru News: ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

Renuka swamy murder case: ರೇಣುಕಾಸ್ವಾಮಿ ತಾಯಿಯನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್‌ ಮನವಿ

ರೇಣುಕಾಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿಯಾಗಿಸಲು ಪ್ರಾಸಿಕ್ಯೂಷನ್‌ ಮನವಿ

ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವದ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ.

New Year 2026: ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷದ ಹಿಂದಿನ ದಿನದಿಂದಲೇ ಭದ್ರತಾ ದೃಷ್ಟಿಯಿಂದ ನಗರದ ಒಳಭಾಗದ ಕೆಲ ರಸ್ತೆಗಳನ್ನು ಬಂದ್ ಮಾಡಿದ್ದು, ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಗಳಲ್ಲಿ ರಾತ್ರಿ 10 ರಿಂದ ಮುಂಜಾನೆ 3 ಗಂಟೆವರೆಗೆ ಸಂಚಾರ ಬಂದ್ ಆಗಲಿದೆ. ಸಂಜೆ 4 ಗಂಟೆಯಿಂದ ಬೆಳಗ್ಗೆ 3 ಗಂಟೆವರೆಗೆ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

Lokayukta Raid: ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ 58,352 ಪ್ರಕರಣ ದಾಖಲು, 2 ಲಕ್ಷ ದಂಡ ವಸೂಲಿ: ಎಸ್ಪಿ ಕುಶಾಲ್ ಚೌಕ್ಸೆ

20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ, 2 ಲಕ್ಷ ದಂಡ ವಸೂಲಿ

ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಿಕೆಯ ಬಿರುಸಿನ ಕಾರ್ಯಾಚರಣೆಗಳ ನಡುವೆ ಜನರಲ್ಲಿ ಅರಿವು ಮೂಡಿಸುವ ಪರಿಣಾಮಕಾರಿ ಚಟುವಟಿಕೆ ಕೈಗೊಳ್ಳಲಾಗುತ್ತಿದೆ. ಜಾಗೃತಿ ಜತೆಗೆ ತ್ವರಿಯ ಕಾರ್ಯಾ ಚರಣೆಯಿಂದಾಗಿ ಕಳೆದ ಸಾಲಿಗಿಂತಲೂ  ಈ ಭಾರಿ ಹೆಚ್ಚಿನ ಪ್ರಕರಣ ದಾಖಲಾಗುವಿಕೆ, ಆರೋಪಿಗಳ ಬಂಧನ, ಅಪಾರ ಪ್ರಮಾಣದ ಮಾಲು ವಶದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ.

Gauribidanur News: ಮಕ್ಕಳ‌‌‌ ಕಲಿಕೆಗೆ ಅಂಗನವಾಡಿ ಕೇಂದ್ರಗಳೇ ಬುನಾದಿ

ಮಕ್ಕಳ‌‌‌ ಕಲಿಕೆಗೆ ಅಂಗನವಾಡಿ ಕೇಂದ್ರಗಳೇ ಬುನಾದಿ

ಸರ್ಕಾರವು ಗ್ರಾಮೀಣ ಭಾಗದಲ್ಲಿನ ಗರ್ಭಿಣಿ ತಾಯಂದಿರು ಮತ್ತು ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪೌಷ್ಟಿಕಾಹಾರದ ಜೊತೆಗೆ ಮಕ್ಕಳಿಗೆ ಅಗತ್ಯ ವಿರುವ ಕಲಿಕೆಗಾಗಿ ವಿಶೇಷವಾಗಿ ಮೊದಲ ಹಂತದಲ್ಲಿ ತಾಲ್ಲೂಕಿನ 18 ಅಂಗನವಾಡಿ ಕೇಂದ್ರದಲ್ಲಿ ಮಾಂಟೆಸ್ಸರಿ ( ಎಲ್ ಕೆ ಜಿ ಮತ್ತು ಯುಕೆಜಿ) ತರಗತಿಗಳನ್ನು ಆರಂಭಿಸಲಾಗಿದೆ.

Bagepally News: ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಎನ್.ವೆಂಕಟೇಶಪ್ಪ ಮನವಿ

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ

ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉಚಿತ ಶಿಕ್ಷಣ ಒದಗಿಸು ತ್ತಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ

Vaikuntha Ekadashi: ಜಿಲ್ಲೆಯ ವಿವಿಧೆಡೆ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ

ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ

ವಿಷ್ಣು ದೇವರಿಗೆ ಪ್ರಿಯವಾದ ಈ ಪವಿತ್ರ ದಿನದಂದು ಮಾಡುವ ಪೂಜೆ ಮತ್ತು ಉಪವಾಸ, ವ್ರತಗಳು ವಿಶೇಷ ಫಲವನ್ನು ನೀಡುತ್ತದೆ ಎಂಬುದು ನಂಬಿಕೆ. ಈ ನಿಟ್ಟಿನಲ್ಲಿ ಬಹುತೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗುತ್ತದೆ. ಎಂದಿನಂತೆ ಈ ಬಾರಿಯೂ ಈ ದಿನದಲ್ಲಿ ಜಿಲ್ಲೆಯಾದ್ಯಂತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ಶ್ರೀ ಸ್ವಾಮಿಯವರಿಗೆ ವಿಶೇಷ ಪೂಜಾಧಿಗಳು ನಡೆದವು.

Loading...