Sugarcane Farmers Protest: ಪ್ರಧಾನಿ ಮೋದಿ ಅವರು ಕಬ್ಬಿಗೆ FRP ದರ ಎಂದು ಕ್ವಿಂಟಲ್ಗೆ ₹3,550 ನಿಗದಿ ಮಾಡಿದ್ದಾರೆ. ಆದರೆ ಶುಕ್ರವಾರ ಸಿಎಂ, ಡಿಸಿಎಂ ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ನಡೆಸಿ ₹100 ಮಾತ್ರ ಜಾಸ್ತಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹3550 FRP ನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.