ಹಿರಿಯ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ
ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.