ಮೆಟ್ರೋಗೆ ರಾಜ್ಯ ಸರ್ಕಾರವೇ ಶೇ. 87.37 ಹಣ ನೀಡುತ್ತಿದೆ: ಸಿಎಂ
CM Siddaramaiah: ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು 50:50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ, ನಮ್ಮ ಮೇಲೆ ಶೇ.87.37 ರಷ್ಟು ಭಾರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.