ಖಾಸಗಿ, ಸರ್ಕಾರಿ ಕಟ್ಟಡಗಳಲ್ಲಿ ತಿಂಗಳಿಡೀ ಕನ್ನಡ ಧ್ವಜ ಹಾರಾಟ ಕಡ್ಡಾಯ
ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವ ಸಲುವಾಗಿ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ, ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ ಎಂದು ಅವರು ಹೇಳಿದರು.