ಮೂರನೇ ಶ್ರಾವಣ ಶನಿವಾರ: ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ
ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಅಶ್ವತ್ಥನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಗೆ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಸ್ವಾಮಿಗೆ ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿ ಪುಷ್ಪಗಳಿಂದ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.