ಆ.10ರಂದು ಪ್ರಧಾನಿ ಮೋದಿಯಿಂದ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ಡಿಕೆಶಿ
DK Shivakumar: 7,610 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 19.15 ಕಿಲೋಮೀಟರ್ ಉದ್ದದ, 16 ನಿಲ್ದಾಣಗಳಿರುವ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಲೋಕಾರ್ಪಣೆಗೊಳಿಸಲಿದ್ದಾರೆ. ಆ.10ರಂದು ಐಐಎಂಬಿಯಲ್ಲಿ ಇರುವ ಸಭಾಂಗಣದಲ್ಲಿ ಚಿಕ್ಕ, ಚೊಕ್ಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.