ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ತುಂಡಾಗಿ ಬಿದ್ದ ಯುವಕ! Video
Dandeli Zipline Accident: ದಾಂಡೇಲಿಯ 'ಸ್ಟರ್ಲಿಂಗ್ ರಿವರ್ ರೆಸಾರ್ಟ್'ನಲ್ಲಿ ಜಿಪ್‌ಲೈನ್ ಲಾಕ್ ತುಂಡಾಗಿ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರಿಂದ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದಿದ್ದು, ನರಗಳಿಗೂ ತೀವ್ರ ಹಾನಿಯಾಗಿದೆ ಎನ್ನಲಾಗಿದೆ. ಗಾಯಾಳುವನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.