ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: ಶಿಕ್ಷಕರ ಸೇವೆ ಸಮಾಜದ ಶಾಶ್ವತ ಸಂಪತ್ತು: ಹರೀಶ್ ಕೆ.ರೆಡ್ಡಿ

ಶಿಕ್ಷಕರ ಸೇವೆ ಸಮಾಜದ ಶಾಶ್ವತ ಸಂಪತ್ತು: ಹರೀಶ್ ಕೆ.ರೆಡ್ಡಿ

ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹೆಚ್. ನಾಗರಾಜ್ ಅವರು ಸಲ್ಲಿಸಿರುವ ಸೇವೆ ಅನುಕರಣೀಯವಾಗಿದೆ. ಅವರ ಶಿಸ್ತು, ಬದ್ಧತೆ ಹಾಗೂ ಶಿಕ್ಷಣದ ಮೇಲಿನ ಪ್ರೀತಿ ಮುಂದಿನ ಪೀಳಿಗೆಯ ಶಿಕ್ಷಕರಿಗೂ ಪ್ರೇರಣೆಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Chikkaballapur News: ತೋಟಗಾರಿಕೆ ಯೋಜನೆಗಳ ಪ್ರಗತಿ ಪರಿಶೀಲನೆ: ಗುರಿ ಸಾಧನೆಗೆ ಸಿಇಒ ಸೂಚನೆ

ತೋಟಗಾರಿಕೆ ಯೋಜನೆಗಳ ಪ್ರಗತಿ ಪರಿಶೀಲನೆ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಮಾವು ಪುನಶ್ಚೇತನ, ದ್ರಾಕ್ಷಿ, ಹೂವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳ ಪ್ರಗತಿ, ರೈತರಿಗೆ ಸಹಾಯಧನ ವಿತರಣೆ, ಪಕ್ಷಿ ನಿಯಂತ್ರಣ ಹೊದಿಕೆ, ಈರುಳ್ಳಿ ಶೇಖರಣ ಘಟಕ, ಪ್ಯಾಕ್ ಹೌಸ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

Bangalore University: ಕಳೆದ ಆರು ತಿಂಗಳಿಂದ ಮುಂದೂಡಿಕೆಯಾಗಿದ್ದ ಬೆಂಗಳೂರು ವಿವಿ ಪಿಎಚ್.ಡಿ ಪ್ರವೇಶ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ; ಆಗಸ್ಟ್ 3, 4ರಂದು ಸಂದರ್ಶನ

ಬೆಂಗಳೂರು ವಿವಿ ಪಿಎಚ್.ಡಿ ಪ್ರವೇಶ ಪ್ರಕ್ರಿಯೆ; ಆ. 3, 4ರಂದು ಸಂದರ್ಶನ

Bangalore University PhD admission: ಬೆಂಗಳೂರು ವಿವಿ ಪಿಎಚ್‌.ಡಿ ಪ್ರವೇಶಕ್ಕೆ ಬೇರೆ ಬೇರೆ ಕಾರಣಗಳಿಂದಾಗಿ ಎರಡು ಬಾರಿ ಅಧಿಸೂಚನೆ ರದ್ದಾಗಿತ್ತು. ಮೂರನೇ ಬಾರಿ ಹೊರಡಿಸಿದ್ದ ಅಧಿಸೂಚನೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಆಕಾಂಕ್ಷಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Gubbi News: ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಶಾಸಕ ಎಂ.ಟಿ. ಕೃಷ್ಣಪ್ಪ

ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ

ದೇಶದ ಎಲ್ಲ ನಾಗರಿಕರಿಗೂ ಒಂದೇ ಕಾನೂನು ಅನ್ವಯವಾಗಬೇಕು ಎಂದು ಪ್ರತಿಪಾದಿಸಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಸಂಸತ್ತಿನಲ್ಲಿ ಸತತ ಏಳು ದಿನಗಳ ಕಾಲ ಹೋರಾಟ ನಡೆಸಿತ್ತು. ಬಳಿಕ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿ ಆರೋಪಿ ಗಳನ್ನು ಬಂಧಿಸಿತ್ತು ಹಾಗೂ ಸಂಬಂಧಪಟ್ಟ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

ಮಧುಗಿರಿಯಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.89 ಪ್ರಗತಿ

Madhugiri News: ಅರ್ಹ ಮತದಾರರು ಮತಪಟ್ಟಿಯಿಂದ ಹೊರಗುಳಿಯಬಾರದು. ಆಸಕ್ತಿ ವಹಿಸಿ ಗಣತಿ ನಮೂನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿಯವರೆಗೂ ಸಂಪರ್ಕಕ್ಕೆ ಸಿಗದವರನ್ನು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅವರನ್ನು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು‌‌ ಎಂದು‌ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಬಿಎಲ್‌ಒಗಳಿಗೆ ಸಲಹೆ ನೀಡಿದ್ದಾರೆ.

Karnataka Drought: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಚ್.ಡಿ.ಕುಮಾರಸ್ವಾಮಿ ಆರೋಪ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಚ್‌ಡಿಕೆ

ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ನೂರಾರು ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಸಾಕಷ್ಟು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದೆ. ಈ ಸರ್ಕಾರದವರು ನೋಡಿದರೆ ರೈತರ ನೆರವಿಗೆ ಹೋಗುವುದನ್ನು ಬಿಟ್ಟು ಹೊಲದಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟು ಬರುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ʼಪಿಎಂ ಸೂರ್ಯ ಸರೋವರ' ಯೋಜನೆಗೆ ಕೇಂದ್ರ ಅಸ್ತು: ಬಳಕೆಯಾಗದ ಜಲಮೂಲಗಳಲ್ಲಿ 5000 ಮೆ.ವ್ಯಾ ತೇಲುವ ಸೌರ PV ಅಳವಡಿಕೆ

ʼಪಿಎಂ ಸೂರ್ಯ ಸರೋವರ' ಯೋಜನೆಗೆ ಕೇಂದ್ರ ಅಸ್ತು

Pralhad Joshi: ಪ್ರಧಾನಮಂತ್ರಿ ಸೂರ್ಯ ಸರೋವರ ಯೋಜನೆ ದೇಶದಲ್ಲಿ ಜಲಾಶಯಗಳು ಮತ್ತು ಜಲಮೂಲಗಳನ್ನೂ ಬಳಸಿಕೊಂಡು ಸೌರ ಶಕ್ತಿ ಉತ್ಪಾದಿಸುವ ಒಂದು ಮಹತ್ತರ ಯೋಜನೆಯಾಗಿದ್ದು, ಬಳಕೆಯಾಗದ ಜಲಮೂಲಗಳ ಸದ್ಬಳಕೆಗೆ ಉತ್ತಮ ಅವಕಾಶವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ನೇಮಕಾತಿ ಪ್ರಕ್ರಿಯೆಗೆ ಕೆಪಿಎಸ್‌ಸಿ, ಕೆಇಎ ಕೈಗೊಂಡ ಕ್ರಮ ಪರಿಶೀಲಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ

ನೇಮಕಾತಿ ಪ್ರಕ್ರಿಯೆ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ

CM DK Shivakumar: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

319 ಕೆಎಎಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

KPSC Gazetted Probationers Recruitment: 319 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು 2026ರ ನವೆಂಬರ್ 15 ರಂದು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ.

Annabrahma Chaturmasya Vrata: ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ: ರಾಘವೇಶ್ವರ ಶ್ರೀ

Raghaveshwara Bharathi Swamiji: ಎಷ್ಟೇ ಉತ್ತಮ ಆಹಾರವಾಗಿದ್ದರೂ ಅಕಾಲದಲ್ಲಿ ಸೇವಿಸಿದರೆ ಅದು ದೇಹಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಸರಿಯಾದ ಸಮಯದಲ್ಲಿ ಸೇವಿಸಿದ ಆಹಾರ ದೇಹಕ್ಕೆ ಪೋಷಣೆ ನೀಡುತ್ತದೆ. ಆದರೆ ಸಮಯ ಮೀರಿ ಅಥವಾ ಅಸಮಯದಲ್ಲಿ ಸೇವಿಸಿದರೆ ಅದೇ ಆಹಾರ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕಳ್ಳತನವಾಗಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಎಸ್ಪಿ ಯಶೋಧಾ ವಂಟಗೋಡಿ

ಹಾವೇರಿಯಲ್ಲಿ ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ಹಸ್ತಾಂತರ

Haveri News: ಹಾವೇರಿ ಜಿಲ್ಲೆಯಲ್ಲಿ ದಾಖಲಾದ ವಿವಿಧ ಸ್ವತ್ತಿನ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ನಗದು ಹಣ, ಮೊಬೈಲ್ ಫೋನ್‌ಗಳು, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವುಗಳ ನಿಜವಾದ ವಾರಸುದಾರರಿಗೆ ಗುರುವಾರ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪ್ರಾಪರ್ಟಿ ಪರೇಡ್ ಮೂಲಕ ಹಸ್ತಾಂತರಿಸಲಾಯಿತು.

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌; ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ

ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗಿಲ್ಲ ಶೂ, ಸಾಕ್ಸ್, ನೋಟ್‌ಬುಕ್ಸ್‌!

Chikkaballapur News: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್‌ಬುಕ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್!

ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ದಂಧೆಯ ಕಿಂಗ್‌ಪಿನ್

Tumkur News: ಪೊಲೀಸ್ ಸಿಬ್ಬಂದಿಯ ಪುತ್ರ ಗ್ಯಾಂಗ್ ಕಟ್ಟಿಕೊಂಡು ದುಬಾರಿ 'ಹೈಡ್ರೋ ಗಾಂಜಾ' ಮಾರಾಟ ಮಾಡುತ್ತಿದ್ದ ಆಘಾತಕಾರಿ ಪ್ರಕರಣ ತುಮಕೂರು ನಗರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರ ನೂತನ 'ಕ್ಯೂಆರ್ ಕೋಡ್' ತಂತ್ರಜ್ಞಾನದ ರಹಸ್ಯ ಕಾರ್ಯಾಚರಣೆಯಿಂದ ಈ ಕರಾಳ ದಂಧೆ ಬಯಲಾಗಿದೆ.

ವಿಧಾನ ಪರಿಷತ್ ಚುನಾವಣೆ; ಮರು ಮತ ಎಣಿಕೆಯಲ್ಲಿ ಎಂ.ಕೆ. ಪ್ರಾಣೇಶ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಗೆ ಗೆಲುವು

ಮರು ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು

Chikkamagaluru MLC Election Recount: 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರು 6 ಮತಗಳಿಂದ ಗೆದ್ದಿದ್ದರು. ಆದರೆ, ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದನ್ನು ಆಕ್ಷೇಪಿಸಿ ಗಾಯತ್ರಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಮರು ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಗೆಲುವು ಪಡೆದಿದ್ದಾರೆ.

Kundapur Murder: ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಕುಂದಾಪುರದ ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ ಜಿಲ್ಲೆಯ ಕುಂದಾಪುರ ನಗರದ ಹೋಲಿ ರೋಸರಿ ಚರ್ಚ್‌ ಎದುರು ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರದ ವಿಚಾರದಲ್ಲಿದ್ದ ಮನಸ್ತಾಪ ಕಾರಣವೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Cauvery Water Dispute: ಬಂದ್‌ ಬೇಡ; ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತ ಕಾಯಲು ನಾವು ಬದ್ಧ ಎಂದ ಸಿಎಂ ಡಿಕೆಶಿ

ಪರಿಸ್ಥಿತಿ ತಿಳಿಯಾದ ಬಳಿಕ ಸಿಎಂ ವಿಜಯ್ ಜತೆ ಸಭೆ: ಮುಖ್ಯಮಂತ್ರಿ ಡಿಕೆಶಿ

“ನಾನು ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು, ರಾಜ್ಯದ ಹಿತಕ್ಕೆ ಅವರ ಸಲಹೆ ಪಡೆಯುತ್ತೇವೆ. ಸರ್ವಪಕ್ಷ ಸಭೆಯಲ್ಲಿ ಅವರು ಬರಲಿ, ಅವರ ಸಲಹೆ ನೀಡಲಿ. ರಾಜ್ಯದ ಹಿತಕ್ಕೆ ನಾವು ಬದ್ಧರಾಗೋಣ. ಜುಲೈ ಅಂತ್ಯದವರೆಗೆ ನಾವು ತಮಿಳುನಾಡಿಗೆ 0.6 ಟಿಎಂಸಿ ನೀರನ್ನು ಮಾತ್ರ ತಮಿಳುನಾಡಿಗೆ ಹರಿಸಿದ್ದು, ಕಳೆದ 100 ವರ್ಷಗಳಲ್ಲಿ ತಮಿಳುನಾಡಿಗೆ ಹರಿಸಲಾಗಿರುವ ಅತ್ಯಂತ ಕಡಿಮೆ ಪ್ರಮಾಣದ ನೀರಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ; ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಶಂಕೆ

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಸಮೀಪ ಯುವಕನ ಶವ ಪತ್ತೆ

Chikkaballapur News: ಚಿಕ್ಕಬಳ್ಳಾಪುರ ನಗರದ ರೈಲು ನಿಲ್ದಾಣದ ಸಮೀಪ ಯುವಕನೊಬ್ಬನ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಸಚಿವ ಸಂಪುಟ ವಿಸ್ತರಣೆಯ ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಸಿಎಂಗೆ ಡಿಕೆಶಿಗೆ ಯಡಿಯೂರಪ್ಪ ಆಗ್ರಹ

ದೊಂಬರಾಟ ಬಿಡಿ, ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಿ: ಬಿಎಸ್‌ವೈ

BS Yediyurappa: ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‌ಎಸ್‍ನಿಂದ ಬಿಡಲ್ಲ; ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

Friendship Bands Fashion 2026: ಸ್ನೇಹಿತರ ದಿನಕ್ಕೆ ಟ್ರೆಂಡಿಯಾದ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳಿವು!

ಸ್ನೇಹಿತರ ದಿನಕ್ಕೆ ಟ್ರೆಂಡಿಯಾದ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳಿವು!

Friendship Bands: ಸ್ನೇಹಿತರ ದಿನದ ಅಂಗವಾಗಿ ವೈವಿಧ್ಯಮಯ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಸೀಸನ್‌ನಲ್ಲಿ ವೆರೈಟಿ ಫಂಕಿ ಹಾಗೂ ಜಂಕ್‌ ಜ್ಯುವೆಲ್ಸ್‌ ಕೆಟಗರಿಗೆ ಸೇರುವ ಫ್ರೆಂಡ್‌ಶಿಪ್‌ ಬ್ಯಾಂಡ್‌ಗಳು ಅತಿ ಹೆಚ್ಚು ಮಾರಾಟವಾಗುತ್ತಿದ್ದು, ಅದರಲ್ಲೂ ಮಿಕ್ಸ್‌ ಮ್ಯಾಚ್‌ ಡಿಸೈನ್‌ನವು ಹೆಚ್ಚು ಬಿಕರಿಯಾಗುತ್ತಿವೆ ಎನ್ನುತ್ತಾರೆ ಮಾರಾಟಗಾರರು. ಈ ಬಗ್ಗೆ ಇಲ್ಲಿದೆ ವರದಿ.

Jawa Yezdi: ಬೈಕ್ ಪ್ರಿಯರಿಗೆ ಹಬ್ಬದ ಬಂಪರ್‌ ಉಡುಗೊರೆ: 3 ಹೊಸ ಬೈಕ್‌ ಬಿಡುಗಡೆ ಮಾಡಿದ ಜಾವಾ ಯೆಜ್ಡಿ, ಇಲ್ಲಿದೆ ಬೆಲೆ, ಫೀಚರ್ಸ್

3 ಹೊಸ ಬೈಕ್‌ ಬಿಡುಗಡೆ ಮಾಡಿದ ಜಾವಾ ಯೆಜ್ಡಿ, ಇಲ್ಲಿದೆ ಬೆಲೆ, ಫೀಚರ್ಸ್

ದ್ವಿಚಕ್ರ ವಾಹನ ತಯಾರಕ ಸಂಸ್ಥೆ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ 2026ರ ಆವೃತ್ತಿಯ ಹೊಸ ಬೈಕ್‌ಗಳನ್ನು ಅದ್ಧೂರಿಯಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 'ಅನ್‌ಟೇಮ್ಡ್ ಟ್ರಿನಿಟಿ' ಹೆಸರಿನಲ್ಲಿ ಮೂರು ಆಕರ್ಷಕ ಬಣ್ಣ ಮತ್ತು ವಿನ್ಯಾಸದ ಬೈಕ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಡ್ರಗ್ಸ್‌ಗೆ  ನೋ, ಕನಸುಗಳಿಗೆ ಹೌದು ಹೇಳಿ; ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

ಮಾದಕ ವ್ಯಸನ ವಿರುದ್ಧ ಜಾಗೃತಿ: ಯುವಜನತೆಗೆ ಶಾಸಕ ಭೀಮಣ್ಣ ನಾಯ್ಕ ಕಿವಿಮಾತು

Sirsi News: ಸಹನೆ ಮತ್ತು ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡು, ಯಾವುದೇ ವ್ಯಸನಕ್ಕೆ ದಾಸರಾಗದೆ ಸಹಬಾಳ್ವೆಯ ಬದುಕು ಸಾಗಿಸಿದಾಗ ಮಾತ್ರ ನಮ್ಮ ಪೂರ್ವಜರು ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಆಕ್ರೋಶ; ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

ಆಗಸ್ಟ್‌ 13ಕ್ಕೆ ಕರ್ನಾಟಕ ಬಂದ್‌

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಕ್ರಮದ ವಿರುದ್ಧ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಕರೆ ನೀಡಿದೆ. ಹಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ಕರ್ನಾಟಕ ಬಂದ್​ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿವೆ. ಆಗಸ್ಟ್​ 13 ರಂದು ಕರ್ನಾಟಕ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ನೀಡಿದ್ದಾರೆ.

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌; ಜಾಮೀನು ಮಂಜೂರು

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌; ಜಾಮೀನು ಮಂಜೂರು

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ನಡೆದಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಗೆ ಬಿಗ್‌ ರಿಲೀಪ್‌ ಸಿಕ್ಕಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Kaiwara News: ಗುರುಪೂಜಾ ಸಂಗೀತೋತ್ಸವಕ್ಕೆ ವಿದ್ಯುಕ್ತ ತೆರೆ

ಗುರುಪೂಜಾ ಸಂಗೀತೋತ್ಸವಕ್ಕೆ ವಿದ್ಯುಕ್ತ ತೆರೆ

ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ಸಂಗೀತೋತ್ಸವದಲ್ಲಿ ರಾಜ್ಯದ ವಿವಿಧ ಭಾಗ ಗಳಿಂದ ಆಗಮಿಸಿದ್ದ ಖ್ಯಾತ ಸಂಗೀತ ವಿದ್ವಾಂಸರು ಹಾಗೂ ನೂರಾರು ಭಜನಾ ತಂಡಗಳು ನಿರಂತರವಾಗಿ ಸಂಗೀತ ಸೇವೆ ಸಲ್ಲಿಸಿದವು. ಮೂರು ದಿನಗಳ ಕಾಲ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುಪೂಜೆ, ಸಂಗೀತ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು

Loading...