ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Bengaluru Rains: ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ನದಿಯಂತಾದ ಪ್ರಮುಖ ರಸ್ತೆಗಳು, ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ; ನದಿಯಂತಾದ ಪ್ರಮುಖ ರಸ್ತೆಗಳು!

ನಾಳೆ (ಸೆ.16) ಕೂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Road Accident: ದ್ವಿಚಕ್ರ ವಾಹನ–ಕಾರಿನ ನಡುವೆ ಅಪಘಾತ: ಬಾಲಕ ಸ್ಥಳದಲ್ಲೇ ಮೃತ

ದ್ವಿಚಕ್ರ ವಾಹನ–ಕಾರಿನ ನಡುವೆ ಅಪಘಾತ

ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಹಫಾನ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕಲ್‌ ಶಾಪ್‌ಗೆ ಮಾತ್ರೆ ತರಲು ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ರಯಾನ್ ಹಾಗೂ ಹಫಾನ್ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ.ಬಿ.ಪಾಟೀಲ್‌

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ

MB Patil: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

K H Puttaswamy gowda: ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದು ಎಲ್ಲರ ಜವಾಬ್ದಾರಿ: ಶಾಸಕ ಪುಟ್ಟಸ್ವಾಮಿಗೌಡ

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದು ಎಲ್ಲರ ಜವಾಬ್ದಾರಿ

ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಂವಿಧಾನ ಪ್ರತಿಪಾದಿ ಸಿರುವ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಬೀಳುತ್ತೆ ಮೊಟ್ಟೆ, ಚಪ್ಪಲಿ ಏಟು; ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಇಮ್ರಾನ್‌ ಪಾಷ ಎಚ್ಚರಿಕೆ

ಚಪ್ಪಲಿ ಏಟು ಬೀಳುತ್ತೆ: ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡ ಎಚ್ಚರಿಕೆ

Muslim leader Imran Pasha: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಜಮೀರ್ ಅಹ್ಮದ್​ ಖಾನ್ ಅವರ ಆಪ್ತ ಇಮ್ರಾನ್ ಪಾಷಾ, ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ.

Renukaswamy murder case: ಜೈಲಿನಲ್ಲಿ ಆರೋಪಿ ಪ್ರದೋಷ್‌ ಕಳ್ಳಾಟ ಬಯಲು; ವಕೀಲರ ಹೆಸರಲ್ಲಿ ಪತ್ನಿಗೆ ಕರೆ, ದೂರು ದಾಖಲು

ಜೈಲಿನಲ್ಲಿ ಆರೋಪಿ ಪ್ರದೋಷ್‌ ಕಳ್ಳಾಟ ಬಯಲು; ಪ್ರದೋಷ್‌ ವಿರುದ್ಧ ದೂರು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಬೇರೆ ಕೈದಿ ಹೆಸರಿನಲ್ಲಿ ನಂಬರ್ ಪಡೆದು, ವಕೀಲರ ನಂಬರ್ ಎಂದು ನಮೂದಿಸಿ ಪತ್ನಿಯ ಜತೆ ಮಾತನಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರದೋಷ್ ಸೇರಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

Chikkaballapur News: ದುಡಿಮೆಯೇ ದೇವರು ಎಂಬುದನ್ನು ಬದುಕಿನ ಮೂಲಕ ತೋರಿಸಿದ ವಿಶ್ವೇಶ್ವರಯ್ಯ: ಕೋಡಿ ರಂಗಪ್ಪ

ʼದುಡಿಮೆಯೇ ದೇವರುʼ: ಬದುಕಿನ ಮೂಲಕ ತೋರಿಸಿದ ವಿಶ್ವೇಶ್ವರಯ್ಯ

ಮಂಡಿಕಲ್‌ನ ಕರ್ನಾಟಕ ಪಬ್ಲಿಕ್ ಶಾಲಾ ಸಮುಚ್ಚಯ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಕಾಲೇಜಿನ ಸಹಯೋಗದಲ್ಲಿ ಕೆಪಿಎಸ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಜೀವನದ ಕೊನೆಯ ಕ್ಷಣದವರೆಗೂ ದುಡಿಯಲು ಇಚ್ಛಿಸುತ್ತೇನೆ” ಎಂಬ ವಿಶ್ವೇಶ್ವರಯ್ಯನವರ ಮಾತು ಪ್ರತಿಯೊಬ್ಬರಿಗೂ ಸ್ಫೂರ್ತಿ ಯಾಗಬೇಕು

Shidlaghatta News: ಶಿಡ್ಲಘಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ‘ನಾದಾಸ್ ಗೋ ಸಂತೆ’: ಗೌರಿ ಗಣೇಶ ಹಬ್ಬದ ದಿನವಾದ ಸೋಮವಾರ ಗುದ್ದಲಿ ಪೂಜೆ

ಶಿಡ್ಲಘಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ‘ನಾದಾಸ್ ಗೋ ಸಂತೆ'

ಗೌರಿ ಗಣೇಶ ಹಬ್ಬದ ದಿನವಾದ ಸೋಮವಾರ ಚಿಂತಾಮಣಿ ರಸ್ತೆಯಲ್ಲಿರುವ ಬೊಮ್ಮನಹಳ್ಳಿ ಹಾಗೂ ಪಿಂಡಪಾಪನಹಳ್ಳಿ ಮಧ್ಯಭಾಗದಲ್ಲಿರುವ ನಾದಾಸ್ ಹೋಟೆಲ್ ಮುಂಭಾಗದಲ್ಲಿ ‘ನಾದಾಸ್ ಫ್ರೂಟ್’ ಸಂಸ್ಥೆಯ ಅಡಿಯಲ್ಲಿ ಆರಂಭಿಸಲಾಗುತ್ತಿರುವ ‘ನಾದಾಸ್ ಗೋ ಸಂತೆ’ಗೆ ಗುದ್ದಲಿ ಪೂಜೆ ನೆರವೇರಿಸ ಲಾಗುವುದು ಎಂದರು.

ಸೆ.18ರ ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ: ಶಾಸಕ ಅಶೋಕ್ ಕುಮಾರ್ ರೈ

ಸಚಿವ ಸಂಪುಟ ಸಭೆಯಲ್ಲಿ ತುಳು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ

Tulu as additional official language: ಮಂಗಳೂರಿನಲ್ಲಿ ಸೆಪ್ಟೆಂ ರ್ 18 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕೆಲವೊಂದು ಮಹತ್ವದ ಘೋಷಣೆಗಳನ್ನು ರಾಜ್ಯ ಸರ್ಕಾರ ಮಾಡು ಸಾಧ್ಯತೆ ಇದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದು, ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಜಿಲ್ಲೆಯ ಜನರದ್ದಾಗಿದೆ.

Koratagere News: ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

Koratagere News: ಕೊರಟಗೆರೆ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದ್ದಾರೆ.

Mandya Accident: ಮಂಡ್ಯದಲ್ಲಿ ಭೀಕರ ಅಪಘಾತ; ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ-ತಾಯಿ, ಮಗಳ ಸಾವು!

ಮಂಡ್ಯದಲ್ಲಿ ಭೀಕರ ಅಪಘಾತ; ತಂದೆ-ತಾಯಿ, ಮಗಳ ಸಾವು!

ಮಂಡ್ಯ ಜಿಲ್ಲೆ ಮದ್ದೂರಿನ ಕೊಪ್ಪ ಬಳಿ ಭೀಕರ ಅಪಘಾತ ಸಂಭವಿಸಿದ್ದು. ನಾಲ್ವರು ಬರುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಮಗಳು ಮೃತಪಟ್ಟಿದ್ದು, ಮತ್ತೊಂದು ಮಗು ತೀವ್ರವಾಗಿ ಗಾಯಗೊಂಡಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಸ್ಕೃತಿ, ಪರಂಪರೆ ಮುಂದುವರಿಸಲು ಮುಂದಿನ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಸಂಸ್ಕೃತಿ, ಪರಂಪರೆ ಮುಂದುವರಿಸಲು ಹಿರಿಯರ ಮಾರ್ಗದರ್ಶನ ಅಗತ್ಯ

Madhugiri News: ಇಂದಿನ ಆಧುನಿಕ ಯುಗದಲ್ಲಿ ಯುವಪೀಳಿಗೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ, ಧಾರ್ಮಿಕ ಮೌಲ್ಯಗಳನ್ನು ಕಲಿಸುವ ಹಾಗೂ ಸತ್ಸಂಪ್ರದಾಯಗಳನ್ನು ಮುಂದುವರಿಸುವ ಗುರುತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಸಿದ್ಧರಬೆಟ್ಟ ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

BESCOM Online Services: ಸಾಫ್ಟ್‌ವೇರ್ ಅಳವಡಿಕೆ: ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್‌ಲೈನ್ ಸೇವೆ ಅಲಭ್ಯ

ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್‌ಲೈನ್ ಸೇವೆ ಅಲಭ್ಯ

BESCOM: ಐಪಿಡಿಎಸ್ ಐಟಿ ಅಪ್ಲಿಕೇಶನ್ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಸೆ.15ರಂದು ಮಂಗಳವಾರ ಮಧ್ಯರಾತ್ರಿಯಿಂದ ಸೆ.17ರ ಮಧ್ಯರಾತ್ರಿವರೆಗೆ ಬೆಸ್ಕಾಂನ ಆನ್‌ಲೈನ್ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಜೇವರ್ಗಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ; ನೆಲಕ್ಕೆ ಕೆಡವಿ ಹತ್ತಕ್ಕೂ ಹೆಚ್ಚು ಮಂದಿಯಿಂದ ಹಲ್ಲೆ!

ಜೇವರ್ಗಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಯೂರ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕನೊಬ್ಬನ ಮೇಲೆ ಹತ್ತಕ್ಕೂ ಹೆಚ್ಚು ಮಂದಿ ಏಕಾಏಕಿ ದಾಳಿ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಯುವಕನನ್ನು ನೆಲಕ್ಕೆ ಕೆಡವಿ ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಎಲ್‌ ನಿನೋ ಎಫೆಕ್ಟ್‌; ಹಾವೇರಿಯಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರಿಗೂ ಸಂಕಷ್ಟ!

ಹಾವೇರಿಯಲ್ಲಿ ಮಳೆ ಕೊರತೆ: ಕೃಷಿ, ಕುಡಿಯುವ ನೀರಿಗೂ ಸಂಕಷ್ಟ!

Haveri News: ಮುಂಗಾರು ಮಳೆ ಕೊರತೆ ಹಿನ್ನಲೆ ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ 8ರವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.45.41ರಷ್ಟು ಮಳೆ ಕೊರತೆಯಾಗಿದ್ದು, ಸೆಪ್ಟೆಂಬರ್‌ 1ರಿಂದ 8ರವರೆಗೆ ಶೇ.71.84ರಷ್ಟು ಮಳೆ ಅಭಾವ ದಾಖಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಪ್ರೀತಮ್ ತಯಾರಿಸಿದ ವಿಠ್ಠಲ ರೂಪದ ಗಣೇಶ ಮೂರ್ತಿ

ಪ್ರೀತಮ್ ತಯಾರಿಸಿದ ವಿಠ್ಠಲ ರೂಪದ ಗಣೇಶ ಮೂರ್ತಿ

ಮನೆಯಲ್ಲಿಯೇ ಮೂರ್ತಿಗಳನ್ನು ತಯಾರಿಸು ವುದರ ಜತೆಗೆ, ನಗರದ ಕಲ್ಮಠ ಗಲ್ಲಿಯ ವಿನೋದ ಬಡಿಗೇರ ಅವರ ಗಣೇಶ ಮೂರ್ತಿ ತಯಾರಿಕಾ ಕಾರ್ಯದಲ್ಲಿಯೂ ಪ್ರೀತಮ್ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾನೆ. ಹಿರಿಯ ಕಲಾವಿದರೊಂದಿಗೆ ಕೆಲಸ ಮಾಡುವ ಮೂಲಕ ಮೂರ್ತಿ ತಯಾರಿಕೆಯ ವಿವಿಧ ಸೂಕ್ಷ್ಮತೆಗಳನ್ನು ಕಲಿಯುತ್ತಿರುವ ಈ ಬಾಲಕ,

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ!  ಶೋಭಾಯಾತ್ರೆಗೆ ಸಜ್ಜು

ಟಿ ನರಸೀಪುರ ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಗಣಪತಿ ಪ್ರತಿಷ್ಠಾಪನೆ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ವಿವಾದದ ಕಿಚ್ಚು ಹೆಚ್ಚಾಗಿದ್ದು, , ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆಯನ್ನು ಮಾಡಿದೆ. ಅಲ್ಲದೇ, ಸೆಪ್ಟೆಂಬರ್ 18 ರಂದು ಲಿಂಕ್ ರಸ್ತೆಯಲ್ಲಿ ಹಿಂದೂ ಶೋಭಾ ಯಾತ್ರೆ ನಡೆಸಲು ಹಿಂದೂ ಪರ ಸಂಘಟನೆ ನಿರ್ಧರಿಸಿದೆ.

Bike Accident: ಗಣೇಶ ಮೂರ್ತಿ ನೋಡಲು ಹೋಗಿ ಮಸಣ ಸೇರಿದ ಯುವಕ

ಗಣೇಶ ಮೂರ್ತಿ ನೋಡಲು ಹೋಗಿ ಮಸಣ ಸೇರಿದ ಯುವಕ

ಗಣೇಶ ಮೂರ್ತಿ ವೀಕ್ಷಿಸಲು ತೆರಳಿದ್ದ ಯುವಕರು ಬೈಕ್‌ಗಳಲ್ಲಿ ರೇಸಿಂಗ್ ಕಟ್ಟಿಕೊಂಡು ವೇಗವಾಗಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ರೇಸ್‌ನಲ್ಲಿ ಭಾಗಿಯಾಗಿದ್ದ ಯುವಕರ ಬೈಕ್‌ಗಳೇ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಪ್ರಶಾಂತ ಹಾಗೂ ಲಿಂಗರಾಜ್ ಅವರ ತಲೆಗೆ ಗಂಭೀರ ಗಾಯಗಳಾಗಿ ಧಾರಾಕಾರ ರಕ್ತಸ್ರಾವವಾಗಿದೆ.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವು

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು

ಗಣೇಶ ಚತುರ್ಥಿಗೆ ಊರಿಗೆ ಬಂದಿದ್ದ ಬಂದಿದ್ದ ಮೂವರು ವಾಪಸ್ ಬೆಂಗಳೂರಿಗೆ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

Kalyana Karnataka Festival: ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಲು ಸಚಿವ ಪ್ರಿಯಾಂಕ್ ಖರ್ಗೆ ಕರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ–2026

ಸೆಪ್ಟೆಂಬರ್ 16 ಮತ್ತು 17 ರಂದು ಕಲಬುರಗಿ ನಗರದಲ್ಲಿ ಆಯೋಜಿಸಲಾಗಿರುವ ವೈವಿಧ್ಯಮಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವ ಜನರು, ವಿದ್ಯಾರ್ಥಿಗಳು ಹಾಗೂ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವ ವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಕರೆ ನೀಡಿದ್ದಾರೆ.

79th Kalyana Karnataka Utsava celebration: ಸೆ.16, 17 ರಂದು 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಕಲಬುರಗಿಯಲ್ಲಿ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ, ಬೀದಿ ಉತ್ಸವ

ಸೆ.16, 17 ರಂದು 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ

ಅಪ್ಪನ ಕೆರೆಯಲ್ಲಿ ಸಂಜೆ 7ರಿಂದ ಭೈರವ್ ಮತ್ತು ತಂಡದಿಂದ ಇಂಡೋ-ಫ್ಯೂಷನ್ ವಾದ್ಯ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ರಾತ್ರಿ 8.30ಕ್ಕೆ ಮುಖ್ಯಮಂತ್ರಿ ಅವರಿಂದ ಕೆರೆ ಅಭಿವೃದ್ಧಿ ಕಾಮಗಾರಿ ಗಳ ಉದ್ಘಾಟನೆ ನಡೆಯಲಿದ್ದು, ರಾತ್ರಿ 9ರಿಂದ ಧ್ವನಿ ಮತ್ತು ಬೆಳಕಿನ ಪ್ರದರ್ಶನದ ಜತೆಗೆ ಡ್ರೋನ್ ಪ್ರದರ್ಶನವೂ ನಡೆಯಲಿದೆ.

ಚಾಮರಾಜನಗರದಲ್ಲಿ ಹುಲಿ ದಾಳಿಗೆ ರೈತ ಬಲಿ; ಮತ್ತೊಂದೆಡೆ ಆನೆ ದಾಳಿಗೆ ವ್ಯಕ್ತಿ ಸಾವು

ಚಾಮರಾಜನಗರದಲ್ಲಿ ಹುಲಿ ದಾಳಿಗೆ ರೈತ ಬಲಿ

ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತರೊಬ್ಬರು ಅತ್ಯಂತ ದಾರುಣವಾಗಿ ಬಲಿಯಾಗಿದ್ದಾರೆ. ರೈತನನ್ನು ಕೊಂದ ಹುಲಿಯು ಆತನ ಮೃತದೇಹದ ಭಾಗವನ್ನು ತಿಂದು ಹಾಕಿರುವುದು ಇಡೀ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

Health Camp: ಲಯನ್ಸ್ ಸಂಸ್ಥೆಯಿಂದ 233ನೇ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ: 75ಕ್ಕೂ ಅಧಿಕ ವಯೋವೃದ್ಧರ ತಪಾಸಣೆ; 34 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆ

ಲಯನ್ಸ್ ಸಂಸ್ಥೆಯಿಂದ 233ನೇ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ

ನಗರದ ಮುನೇಶ್ವರ ಬಡಾವಣೆಯಲ್ಲಿರುವ ಲಯನ್ಸ್ ಕಣ್ಣಿನ ತಪಾಸಣಾ ಕೇಂದ್ರದಲ್ಲಿ ನಡೆದ 233ನೇ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ವಯೋವೃದ್ಧರು ದೃಷ್ಟಿದೋಷದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪ್ರತಿತಿಂಗಳು ದಾನಿಗಳ ಸಹಕಾರದಿಂದ ಸಂಸ್ಥೆ ನಡೆಸುತ್ತಿರುವ ಉಚಿತ ಶಸ್ತ್ರಚಿಕಿತ್ಸಾ ಶಿಬಿರಗಳು ಇಂತಹವರಿಗೆ ಆಸರೆಯಾಗಿವೆ

Horrific tragedy in Belagavi; ಬೆಳಗಾವಿಯಲ್ಲಿ ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು

ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು

ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು.

Loading...