ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chennamma Deve gowda: ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ?: ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ ಮಣಿಪಾಲ್‌ ಆಸ್ಪತ್ರೆ

ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆ ವೈದ್ಯರ ಮಾಹಿತಿ

ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

Pralhad Joshi: ರಾಜ್ಯದಲ್ಲಿನ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟಾರೆ 75 ಅಮೃತ್ ಭಾರತ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿರುವುದು ಭಾರತದ ವೇಗದ ಬೆಳವಣಿಗೆಗೆ ನಿದರ್ಶನವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಗ್ರಾಹಕರನ್ನು ಆಕರ್ಷಿಸಲು ಡಾರ್ಕ್ ಪ್ಯಾಟರ್ನ್ ಪ್ರದರ್ಶನ; ಸ್ಪೈಸ್ ಜೆಟ್ ಏರ್‌ಲೈನ್ಸ್‌ಗೆ 1 ಲಕ್ಷ ರು. ದಂಡ

ಡಾರ್ಕ್ ಪ್ಯಾಟರ್ನ್; ಸ್ಪೈಸ್ ಜೆಟ್ ಏರ್‌ಲೈನ್ಸ್‌ಗೆ 1 ಲಕ್ಷ ದಂಡ

ವಿಮಾನಯಾನ ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ವಂಚಿಸುವ ರೀತಿಯಲ್ಲಿ 'ಡಾರ್ಕ್ ಪ್ಯಾಟರ್ನ್ ' ಪ್ರದರ್ಶಿಸಿದ್ದ ಸ್ಪೈಸ್ ಜೆಟ್ ಏರ್‌ಲೈನ್ಸ್ ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) 1 ಲಕ್ಷ ರುಪಾಯಿ ದಂಡ ವಿಧಿಸುವ ಮೂಲಕ ಎಚ್ಚರಿಸಿದೆ.

Shidlaghatta News: ಅಧ್ಯಕ್ಷ ಸ್ಥಾನ ನೀಡಿದರೆ ಅಭಿವೃದ್ಧಿಗೆ ಆದ್ಯತೆ: ಜೆಡಿಎಸ್ ಬೆಂಬಲಿತ ಅನಿತಾ

ಅಧ್ಯಕ್ಷ ಸ್ಥಾನ ನೀಡಿದರೆ ಅಭಿವೃದ್ಧಿಗೆ ಆದ್ಯತೆ: ಜೆಡಿಎಸ್ ಬೆಂಬಲಿತ ಅನಿತಾ

ವಯಸ್ಸಿನಲ್ಲಿ ಹಿರಿಯರಾಗಿದ್ದ ಸದಸ್ಯರಿಗೆ ಮೊದಲ 15 ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನ ನೀಡಲಾ ಗಿದ್ದು, ಬಳಿಕದ 15 ತಿಂಗಳ ಅವಧಿಗೆ ನನಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಶಾಸಕ ಬಿ.ಎನ್. ರವಿಕುಮಾರ್(MLA B.N.Ravikumar) ಅವರ ಸಮ್ಮುಖದಲ್ಲೇ ಭರವಸೆ ನೀಡಲಾಗಿತ್ತು. ಇದೀಗ ಮೊದಲ ಅವಧಿ ಪೂರ್ಣ ಗೊಂಡಿರುವುದರಿಂದ ನೀಡಿದ ಮಾತಿನಂತೆ ಅಧ್ಯಕ್ಷ ಸ್ಥಾನವನ್ನು ನನಗೆ ನೀಡಬೇಕು

Kanakapura murder: ಪ್ರೇಯಸಿಯನ್ನು ಗುಂಡಿಟ್ಟು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ಪ್ರೇಯಸಿಯನ್ನು ಕೊಂದು ತೋಟದಲ್ಲಿ ಹೂತುಹಾಕಿದ ಯುವಕ!

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಶಯಗೊಂಡ ಯುವಕ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿದ್ದಾನೆ.

Bengaluru Power Cut: ಗಮನಿಸಿ; ಜುಲೈ 18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜುಲೈ 18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 220/66/11 ಕೆ.ವಿ. ಐ.ಟಿ.ಐ ಸ್ಟೇಷನ್‌ನಲ್ಲಿ 31.5 ಎಂ.ವಿ.ಎ ಶಕ್ತಿ ಪರಿವರ್ತಕ-1 ಮತ್ತು 2 ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜುಲೈ 18ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಸಚಿವ ಸಂಪುಟ ವಿಸ್ತರಣೆ, ಜಿಬಿಎ ಚುನಾವಣೆ ಬಗ್ಗೆ ಅಪ್‌ಡೇಟ್‌ ಕೊಟ್ಟ ಸಿಎಂ ಡಿ.ಕೆ. ಶಿವಕುಮಾರ್

ಸಚಿವ ಸಂಪುಟ ವಿಸ್ತರಣೆ, ಜಿಬಿಎ ಚುನಾವಣೆ ಬಗ್ಗೆ ಅಪ್‌ಡೇಟ್‌ ಕೊಟ್ಟ ಸಿಎಂ

CM DK Shivakumar: ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Spoorthi Shetty: ಮಿಸ್ ಯೂನಿವರ್ಸ್ ಇಂಡಿಯಾ 2026 ಅಂತಿಮ ಸುತ್ತಿಗೆ ಉಡುಪಿಯ ಸ್ಫೂರ್ತಿ ಶೆಟ್ಟಿ ಅಯ್ಕೆ

ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿಗೆ ಸ್ಫೂರ್ತಿ ಶೆಟ್ಟಿ ಆಯ್ಕೆ

Miss Universe India 2026: ಈ ಹಿಂದೆ ಕರ್ನಾಟಕ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತು ಪ್ರವೇಶಿಸಲು ವಿಫಲರಾಗಿದ್ದ ಸ್ಫೂರ್ತಿ, ಇದೀಗ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಫೈನಲ್‌ಗೆ ಆಯ್ಕೆಯಾಗಿದ್ದಾರೆ. ಆಗಸ್ಟ್ 23ರಂದು ನವದೆಹಲಿಯಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಅಂತಿಮ ಸುತ್ತಿನಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸುಮಾರು 50 ಸ್ಪರ್ಧಿಗಳೊಂದಿಗೆ ಸ್ಫೂರ್ತಿ ಶೆಟ್ಟಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

Bengaluru's Second Airport: ಕನಕಪುರದಲ್ಲಿ ಬೇಡ, ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ

ಕನಕಪುರದಲ್ಲಿ ಬೇಡ, ತುಮಕೂರಿನಲ್ಲಿ ಏರ್‌ಪೋರ್ಟ್‌ ನಿರ್ಮಿಸಿ: ಬಿಜೆಪಿ ಆಗ್ರಹ

ಕನಕಪುರದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ತೀರ್ಮಾನ ಮಾಡುವ ಮುನ್ನ ರಾಜ್ಯದ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕು. ವಿಮಾನ ನಿಲ್ದಾಣ ಎಲ್ಲಿ ಆಗಬೇಕು ಎಂಬುದನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಮುಕ್ತ ಚರ್ಚೆ ನಡೆಸಿ ನಂತರ ತೀರ್ಮಾನಿಸುವುದು ಒಳ್ಳೆಯದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ; ಆಸ್ಪತ್ರೆಗೆ ಎಚ್‌ಡಿಕೆ ಭೇಟಿ

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ

Chennamma: ಆಸ್ಪತ್ರೆಯ ವೈದ್ಯಕೀಯ ಮೂಲಗಳ ಮಾಹಿತಿ ಪ್ರಕಾರ, ಚೆನ್ನಮ್ಮ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಆತಂಕ ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ. ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯರು ನಿರಂತರವಾಗಿ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

Bengaluru girl dies: ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು; ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ

ಬೆಂಗಳೂರಿನಲ್ಲಿ 2 ವರ್ಷದ ಮಗು ಅನುಮಾನಾಸ್ಪದ ಸಾವು

ಬೆಂಗಳೂರು ನಗರದ ಬಾಣಸವಾಡಿಯಲ್ಲಿ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ಪೋಷಕರು ತಿಳಿಸಿದ್ದಾರೆ. ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲಿವ್ ಇನ್‌ನಲ್ಲಿದ್ದ ಪೋಷಕರ ಮೇಲೆ ಶಂಕೆ ವ್ಯಕ್ತವಾಗಿದೆ.

GBA elections: ಜಿಬಿಎ ಚುನಾವಣೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸುಪ್ರೀಂ ಕೋರ್ಟ್‌

ಜಿಬಿಎ ಚುನಾವಣೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸುಪ್ರೀಂ ಕೋರ್ಟ್‌

ಈ ಹಿಂದೆ ಸುಪ್ರೀಂಕೋರ್ಟ್ ಆಗಸ್ಟ್ 31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ಪೂರ್ಣಗೊಳಿಸುವಂತೆ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು. ವಿಚಾರಣೆಯಲ್ಲಿ ಸರ್ಕಾರದ ವಾದ ಆಲಿಸಿದ ಸುಪ್ರೀಂ ಕೋರ್ಟ್​, ಡಿಸೆಂಬರ್ 31ರವರೆಗೆ ಸಮಯ ನೀಡಿದೆ.

Belagavi News: ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ; ಅನ್ನ ನೀಡುವ ರೈತ ಜಮೀನು ಇಟ್ಟುಕೊಳ್ಳಬಾರದೇ?: ವಿಜಯೇಂದ್ರ ಪ್ರಶ್ನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ

BY Vijayendra: ಮುಖ್ಯಮಂತ್ರಿ ಆಗಬೇಕು ಎಂಬ ಡಿ.ಕೆ. ಶಿವಕುಮಾರ್ ಅವರ ದಶಕಗಳ ಕನಸು ಈಡೇರಿದೆ. ಆದರೆ ದುರಾಸೆ ಬಂದರೆ ಯಾವುದೂ ಸಾಕಾಗೋದಿಲ್ಲ ಎಂಬುದು ಸಾಬೀತಾಗಿದೆ. ಸಿಎಂ ಆದ ತಕ್ಷಣ ನಿಮ್ಮ ಆದ್ಯತೆ ಉತ್ತರ ಕರ್ನಾಟಕದ ಅಭಿವೃದ್ಧಿ ಆಗಿರಲಿಲ್ಲ. ಅವರ ಸಂಕಷ್ಟಕ್ಕೆ ಮಿಡಿಯಲಿಲ್ಲ. ಬದಲು ಬಿಡದಿ ಟೌನ್‍ಶಿಪ್, ಕನಕಪುರದಲ್ಲಿ ವಿಮಾನ ನಿಲ್ದಾಣ ಮಾಡಲು ಮುಂದಾದ್ರಿ. ಇದರಲ್ಲಿ ರಿಯಲ್ ಎಸ್ಟೇಟ್ ಬಿಟ್ಟರೆ ಬೇರೆ ಹಿತಾಸಕ್ತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಅರೆಸ್ಟ್‌; ಇಲಿಪಾಷಾಣ ಸೇವಿಸಿದ್ದರಿಂದ ಆಸ್ಪತ್ರೆಗೆ ದಾಖಲು

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಂದಿದ್ದ ಚೇತನ್‌ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿಯೇ ಯುವತಿಯನ್ನು ಕೊಂದಿದ್ದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಕ್ಕೆಪದವು ನಿವಾಸಿಯಾಗಿದ್ದ ಲಾವಣ್ಯಳನ್ನು ಆಕೆಯ ದೂರದ ಸಂಬಂಧಿ ಆರೋಪಿ ಚೇತನ್‌ ನಿನ್ನೆ ಕೊಲೆ ಮಾಡಿದ್ದ.

ಬೇಡಿಕೆಗೆ ತಕ್ಕಷ್ಟು ಪ್ರಶ್ನೆ ಪತ್ರಿಕೆ ಪೂರೈಸದ ಕೊಪ್ಪಳ ವಿವಿ

ಬೇಡಿಕೆಗೆ ತಕ್ಕಷ್ಟು ಪ್ರಶ್ನೆ ಪತ್ರಿಕೆ ಪೂರೈಸದ ಕೊಪ್ಪಳ ವಿವಿ

ಪರಿಕ್ಷಾರ್ಥಿಗಳಿಗೆ ಸಮರ್ಪಕ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಪೂರೈಕೆ ಮಾಡದ ಕೊಪ್ಪಳ ವಿಶ್ವ ವಿದ್ಯಾಲಯದ ಸ್ಥಿತಿ ಈ ಮೇಲಿನ ಮಾತಿಗೆ ಪುಷ್ಠಿ ನೀಡಿದೆ. ಇತ್ತೀಚೆಗಷ್ಟೇ ಕೊಪ್ಪಳ ವಿಶ್ವ ವಿದ್ಯಾಲಯ ಡಿಜಿಟಲ್ ಮೌಲ್ಯಮಾಪನಕ್ಕೆ ಮುಂದಾಗಿರುವ ಬಗ್ಗೆ ವರದಿ ಆಗಿತ್ತು. ಆದರೆ, ಗುರುವಾರ ನಡೆದ ವಿವಿಧ ಓಪನ್ ಎಲೆಕ್ಟಿವ್ ವಿಷಯಗಳ ಪರೀಕ್ಷೆಯಲ್ಲಿ ಸಾಕಷ್ಟು ಅಪರಾತಪರ ಆಗಿದೆ.

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಟ್ರಾಮಾ ಸೆಂಟರ್‌, ಅಸ್ಥಿ ಚಿಕಿತ್ಸಾ ಕೇಂದ್ರ ಆರಂಭ ಯಾವಾಗ ?

ಸ್ಥಳೀಯರು ಹಾಗೂ ಸಾರ್ವಜನಿಕ ಸಂಘಟನೆಗಳ ಪ್ರಕಾರ, ಟ್ರಾಮಾ ಸೆಂಟರ್‌ನಲ್ಲಿ ಅಗತ್ಯ ವೈದ್ಯರು, ತಜ್ಞ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು ಹಾಗೂ ಆಡಳಿತಾತ್ಮಕ ವ್ಯವಸ್ಥೆ ಇನ್ನೂ ಪೂರ್ಣ ಪ್ರಮಾಣ ದಲ್ಲಿ ಸಿದ್ಧವಾಗಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಟ್ರಾಮಾ ಸೆಂಟರ್ ಅನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

Interview with MLA Dr. Manthar Gowda: ಕೊಡಗು ಜಿಲ್ಲೆಯ ಅಭಿವೃದ್ದಿಯೇ ನನ್ನ ರಾಜಕೀಯದ ಗುರಿ !

ಕೊಡಗು ಜಿಲ್ಲೆಯ ಅಭಿವೃದ್ದಿಯೇ ನನ್ನ ರಾಜಕೀಯದ ಗುರಿ !

ಕಳೆದ ಮೂರು ವರ್ಷಗಳಿಂದ ಕೊಡಗು ಕ್ಷೇತ್ರದ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು, ತಮ್ಮ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧರಾಗಿದ್ದಾರೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ, ಕ್ರೀಡೆಗಳ ಅಭಿವೃದ್ಧಿ ಮತ್ತು ಮಾನವ ಆನೆ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಿದ್ದಾರೆ

'ನನ್ನ ಪ್ರತಿಯೊಂದು ಮೈಲುಗಲ್ಲು ಜನತೆಯ ನಂಬಿಕೆಗೆ ಸಾಕ್ಷಿ'; ಜೀವನ ಚರಿತ್ರೆ ಕಂಡು ಭಾವುಕರಾದ ಡಿ.ಕೆ. ಶಿವಕುಮಾರ್

ಜೀವನ ಚರಿತ್ರೆ ಕಂಡು ಭಾವುಕರಾದ ಡಿ.ಕೆ. ಶಿವಕುಮಾರ್

ಭಾರತದಾದ್ಯಂತ ಕಾಂಗ್ರೆಸ್ ರಾಜ್ಯ ಶಾಸಕರನ್ನು ರಕ್ಷಿಸುವಲ್ಲಿ((ಗುಜರಾತ್, ರಾಜಸ್ಥಾನ, ಗೋವಾ ಶಾಸಕರ ರೆಸಾರ್ಟ್ ರಾಜಕಾರಣ) ಅವರ ಉನ್ನತ ಪಾತ್ರಗಳು, ಸಿದ್ದರಾಮಯ್ಯ ಅವರೊಂದಿಗಿನ ಅವರ ತೀವ್ರ ರಾಜಕೀಯ ಪೈಪೋಟಿ ಮತ್ತು ಅಧಿಕಾರ ಹಂಚಿಕೆ ಸೆಟಪ್, 2023 ರ ಚುನಾವಣಾ ತಂತ್ರಗಾರಿಕೆಗಳ ತೆರೆಮರೆಯ ರೋಚಕ ಕಥೆಗಳನ್ನು ರಶೀದ್ ಕಿದ್ವಾಯಿ ಅವರು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.

ಸಂಪುಟ ಮುಂದೂಡಿಕೆ ?

ಸಂಪುಟ ಮುಂದೂಡಿಕೆ ?

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆಯ ವಿಶ್ವಾಸದಲ್ಲಿ ದೆಹಲಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಾಗೂ ಸಚಿವಾ ಕಾಂಕ್ಷಿಗಳಿಗೆ ಕೊಂಚ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬೆಂಗಳೂರಿಗೆ ಮರಳಿದ್ದರಿಂದ ಪಟ್ಟಿ ಪರಿಷ್ಕರಣೆ ಚರ್ಚೆ ಪೂರ್ಣ ಗೊಂಡಿಲ್ಲ. ಆದ್ದರಿಂದ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಹೋಗುವ ಸಾಧ್ಯತೆ ದಟ್ಟವಾಗಿದೆ.

100 Scientists resign: ಇಸ್ರೋಗೆ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ

ಇಸ್ರೋಗೆ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ

ಬಾಹ್ಯಾಕಾಶ ಇಲಾಖೆಯಿಂದ ಗಗನಯಾನ ಸೇರಿದಂತೆ ಪ್ರಮುಖ ಇಸ್ರೋ ಯೋಜನೆ ಗಳಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ವಿಜ್ಞಾನಿಗಳು ದಿಢೀರನೆ 100ಕ್ಕೂ ಹೆಚ್ಚು ಮಂದಿ ರಾಜೀನಾಮೆ ಕೊಟ್ಟು ಸರಣಿ ಯಾಗಿ ಹೊರ ನಡೆಯುತ್ತಿದ್ದಾರೆ. ಇನ್ನೂ ಹಲವರು ವಿಆರ್‌ಎಸ್ ಪಡೆದು (ಸ್ವಯಂ ನಿವೃತ್ತಿ) ಪಡೆದು ಹೊರ ನಡೆಯುತ್ತಿದ್ದಾರೆ.

ನಾಡಗೀತೆಯ ಜೈನರುದ್ಯಾನಕ್ಕೆ ಬೌದ್ಧರು, ಮುಂದೆ ಇನ್ನಾರು?

ನಾಡಗೀತೆಯ ಜೈನರುದ್ಯಾನಕ್ಕೆ ಬೌದ್ಧರು, ಮುಂದೆ ಇನ್ನಾರು?

ಕುವೆಂಪು ಅವರ ಜನ್ಮಶತಮಾನೋತ್ಸವದ ಸಮಯದಲ್ಲಿ (2004)ರಲ್ಲಿ ಕೊಳಲು ಕವನ ಸಂಕಲನ ದ ಈ ಪದ್ಯವನ್ನು ನಾಡಗೀತೆಯನ್ನಾಗಿ ಅಧಿಕೃತವಾಗಿ ಅಳವಡಿಸಿಕೊಳ್ಳಲಾಗಿದೆ. ಅದಕ್ಕೂ ಮುಂಚೆ ಯೇ ಈ ಗೀತೆಯನ್ನು ಶಾಲೆ ಗಳಲ್ಲಿ ಹಾಡಲಾಗುತ್ತಿತ್ತು. 2004ರ ನಂತರ ಅಂದರೆ ಕಳೆದ 22 ವರ್ಷ ಗಳಲ್ಲಿ ಮೂರು ಬಾರಿ ಸಾಹಿತ್ಯಕ್ಕೆ ಪರಿಷ್ಕರಣೆ ಮಾಡಲಾಗಿದೆ.

NEET UG Result 2026: ನೀಟ್‌ ಮರುಪರೀಕ್ಷೆ ಫಲಿತಾಂಶ ಪ್ರಕಟ; ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

ನೀಟ್‌ ಫಲಿತಾಂಶ ಪ್ರಕಟ; ಅರ್ಹತೆ ಪಡೆದ 11.21 ಲಕ್ಷ ಅಭ್ಯರ್ಥಿಗಳು

21 ಜೂನ್ ರಂದು ಭಾರತದ 551 ನಗರಗಳು ಮತ್ತು ವಿದೇಶದ 14 ನಗರಗಳಲ್ಲಿ ಒಟ್ಟು 5,440 ಕೇಂದ್ರಗಳಲ್ಲಿ ನೀಟ್ ಪರೀಕ್ಷೆಗೆ ಸುಮಾರು 20 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 11.21 ಲಕ್ಷ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್ (AYUSH) ಮತ್ತು ಇತರೆ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹತೆ ಪಡೆದಿದ್ದಾರೆ.

YouTuber Amuku Dumuku: ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ; ಅಮುಕು ಡುಮುಕು ಮಂಜು ವಿರುದ್ಧ ಎಫ್‌ಐಆರ್‌

ಮಹಿಳೆ ಜತೆ ಅನುಚಿತ ವರ್ತನೆ; ಅಮುಕು ಡುಮುಕು ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ರೆಸ್ಟೋ ಬಾರ್‌ನಲ್ಲಿಊಟ ಮತ್ತು ಮದ್ಯ ಸೇವನೆ ಮಾಡಿದ ಬಳಿಕ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಮಂಜು ಅಲಿಯಾಸ್ ಅಮುಕು ಡುಮುಕು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Loading...