ಬೆಂಗಳೂರು ಸೆಂಟ್ರಲ್ ಜೈಲಿನಿಂದ ಪತ್ನಿಗೆ ವಿಡಿಯೊ ಕಾಲ್ ಮಾಡಿದ ಕೈದಿ!
ವಿಚಾರಣಾಧೀನ ಕೈದಿಯಾಗಿದ್ದ ಅಕ್ಬರ್ ಎಂಬಾತ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲೇ ಕುಳಿತುಕೊಂಡೇ ಪತ್ನಿಗೆ ವಿಡಿಯೊ ಕಾಲ್ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಸದ್ಯ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆದರೆ ಈಗ ಈತನ ವಿಡಿಯೊ ವೈರಲ್ ಆಗುತ್ತಿದೆ. ಹೀಗಾಗಿ ಜೈಲಿನ ಭದ್ರತಾ ವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗಿವೆ.