ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರನಿಗೆ ರಾಜಾತಿಥ್ಯ!
Parappana Agrahara jail in Bengaluru: ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್ ಹಮೀದ್ ಶಕೀಲ್ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನು ಐಸಿಸ್‌ಗೆ ನೇಮಕ ಮಾಡುತ್ತಿದ್ದ. ಸಿರಿಯಾದ ಐಸಿಸ್ ಉಗ್ರರ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಶಕೀಲ್‌ನನ್ನು 2020ರಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿತ್ತು. 2022ರಲ್ಲಿ ಸೌದಿಯಿಂದ ಭಾರತಕ್ಕೆ ಗಡೀಪಾರಾಗಿದ್ದ. ಸದ್ಯ ಕಳೆದ ಮೂರು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿ ಶಕೀಲ್ ಶಿಕ್ಷೆ ಅನುಭವಿಸುತ್ತಿದ್ದಾನೆ.