ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಬೆಂಗಳೂರಿನ ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ವಿಜಯಲಕ್ಷ್ಮೀ  ಸೇರಿ ಇಬ್ಬರ ಬಂಧನ

ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಸೇರಿ ಇಬ್ಬರ ಬಂಧನ

ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್‌ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.

ಮಕ್ಕಳ ಮೇಲೆ ದೌರ್ಜನ್ಯ: ಬೆಂಗಳೂರು  ಡೇ ಕೇರ್‌ನ ಇಬ್ಬರು ಆರೈಕೆದಾರರ ಬಂಧನ

ಬೆಂಗಳೂರು ಡೇ ಕೇರ್ ಸಿಬ್ಬಂದಿ ಬಂಧನ

ಬೆಂಗಳೂರಿನ ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಇಬ್ಬರು ಆರೈಕೆದಾರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷ ವಯಸ್ಸಿನ ಮಕ್ಕಳನ್ನು ಡೇ ಕೇರ್ ಆರೈಕೆದಾರರು ವಾಷಿಂಗ್ ಮೆಷಿನ್ ಒಳಗೆ ಹಾಕಿ ಚಿತ್ರ ಹಿಂಸೆ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

ಸರ್ಕಾರ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ: ಬಿ.ವೈ.ವಿ

ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು: 30 ದಿನಗಳಲ್ಲಿ ಕೈಗೊಂಡ ಮಹತ್ವದ ತೀರ್ಮಾನಗಳು

ಡಿ.ಕೆ. ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು

CM DK Shivakumar: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ (ಜುಲೈ 3) ಯಶಸ್ವಿ ಒಂದು ತಿಂಗಳು ಪೂರೈಸಿದ್ದಾರೆ. ಈ 30 ದಿನಗಳಲ್ಲಿ ಯಾವೆಲ್ಲಾ ಮಹತ್ವದ ತೀರ್ಮಾನಗಳು ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು

ಕೊಡಗಿನಲ್ಲಿ ಯಾವುದೇ ಯೋಜನೆ ಹಮ್ಮಿಕೊಳ್ಳಲಾರೆ. ಸ್ಥಳೀಯ ಭೂಮಾಲೀಕರು ತನ್ನನ್ನು ದಾರಿ ತಪ್ಪಿಸಿ ಜಾಗ ಮಾರಾಟ ಮಾಡಿದ್ದರು ಎಂದು ಶ್ರೀ.ಎಂ ನೊಂದು ನುಡಿದಿದ್ದರು. ಈ ನಿಟ್ಟಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.10ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

PM Kisan: ಕಲ್ಯಾಣ ಕರ್ನಾಟಕದ ರೈತರಿಗೆ ʼಪಿಎಂ ಕಿಸಾನ್ʼ ಆಸರೆ

PM Kisan: ಕಲ್ಯಾಣ ಕರ್ನಾಟಕದ ರೈತರಿಗೆ ʼಪಿಎಂ ಕಿಸಾನ್ʼ ಆಸರೆ

2026-27ನೇ ಸಾಲಿನ 23ನೇ ಕಂತಿನಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಒಟ್ಟು 8,92,260 ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ 178.45 ಕೋಟಿ ನಗದು ನೇರವಾಗಿ ಜಮೆಯಾಗಿದೆ. ಈ ಭಾಗದ ಬಹುತೇಕ ರೈತರು ಮಳೆ ಆಧಾರಿತ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ಪ್ರಸ್ತುತ ಎಲ್‌ನಿನೋ ಪರಿಣಾಮ ದಿಂದಾಗಿ ಮುಂಗಾರು ಮಳೆ ವಿಳಂಬವಾಗಿದ್ದು, ಬಿತ್ತನೆಯ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಕೃಷಿ ವೆಚ್ಚ ರೈತರಿಗೆ ಹೊರೆಯಾಗಿತ್ತು

ತುಮಕೂರು ವಿಭಾಗದಲ್ಲಿ 97 ಸಾವಿರ ಕಟ್ಟಡ ಕಾರ್ಮಿಕರು !

ತುಮಕೂರು ವಿಭಾಗದಲ್ಲಿ 97 ಸಾವಿರ ಕಟ್ಟಡ ಕಾರ್ಮಿಕರು !

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್ ಯೋಜನೆಯಡಿ 4,29,641 ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ 11,463, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಡಿ 3311,

International Plastic Bag Free Day: ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತಿ ದಿನ

ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತಿ ದಿನ

ಉತ್ತರ ಕನ್ನಡ ಜಿಲ್ಲೆಯು ತನ್ನ ವಿಶಾಲವಾದ ಕಡಲತೀರಗಳು, ದಟ್ಟವಾದ ಪಶ್ಚಿಮ ಘಟ್ಟದ ಕಾಡುಗಳು ಮತ್ತು ಸುಂದರ ನದಿ ತೀರಗಳಿಗೆ ಹೆಸರುವಾಸಿಯಾಗಿದೆ. ಗೋಕರ್ಣ, ಮುರುಡೇಶ್ವರ, ಕಾರವಾರದ ದೇವಭಾಗ್ ಮತ್ತು ದಾಂಡೇಲಿಯಂತಹ ಪ್ರವಾಸಿ ತಾಣಗಳು ವರ್ಷವಿಡೀ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶಗಳು ಅತಿಯಾದ ಪ್ಲಾಸ್ಟಿಕ್ ತ್ಯಾಜ್ಯದ ಪಿಡುಗಿಗೆ ತೀವ್ರವಾಗಿ ತುತ್ತಾಗಿವೆ.

ರಾಜ್ಯದ ಹಲವೆಡೆ ಮಳೆ ಕೊರತೆ; ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ರಾಜ್ಯದ ಹಲವೆಡೆ ಮಳೆ ಕೊರತೆ ಉಂಟಾಗಿದ್ದು, ಕರಾವಳಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ ಸೇರಿ ಕೆಲವು ಕಡೆ ಮಾತ್ರ ಉತ್ತಮ ಮಳೆಯಾಗುತ್ತಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿದೆ. ಜೂನ್‌ ಕೊನೆಯ ಎರಡು ವಾರವೂ ಒಣ ಹವೆ ಮುಂದುವರಿದಿದೆ.

Aarathi Krishna: ʼಆರತಿ ಕೃಷ್ಣʼಗೆ ಅನಿವಾಸಿ ಸಚಿವೆ ಪಟ್ಟ ನೀಡಿ

ʼಆರತಿ ಕೃಷ್ಣʼಗೆ ಅನಿವಾಸಿ ಸಚಿವೆ ಪಟ್ಟ ನೀಡಿ

ಆರತಿ ಕೃಷ್ಣ ಅವರು ಕಳೆದ ಒಂದುವರೆ ದಶಕದಿಂದ ಅನಿವಾಸಿ ಭಾರತೀಯರನ್ನು ಹಾಗೂ ರಾಜ್ಯ ಸರಕಾರದ ನಡುವೆ ಸೇತುವೆಯ ರೀತಿ ಕಾರ್ಯ ನಿರ್ವಹಿಸು ತ್ತಿದ್ದಾರೆ. ಅನೇಕ ಅನಿವಾಸಿ ಭಾರತೀಯರಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಮನಸ್ಸಿರುತ್ತದೆ. ಅಂತಹವರೊಂದಿಗೆ ಚರ್ಚಿಸಲು, ಅವರಿಗೆ ಅಗತ್ಯವಿರುವ ಸಹಾಯವನ್ನು ಸರಕಾರದ ಮಟ್ಟದಲ್ಲಿ ನೀಡಲು ಒಬ್ಬರ ಅಗತ್ಯವಿದೆ

ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಕ್ಕಿ ಉತ್ಕೃಷ್ಠ ಗುಣಮಟ್ಟಕ್ಕೆ ಪ್ರಲ್ಹಾದ್‌ ಜೋಶಿ ಮಹತ್ತರ ನಿರ್ಧಾರ

ದೇಶದ ಪಡಿತರದಾರರಿಗೆ ಇನ್ನು ಅತ್ಯಂತ ಶ್ರೇಷ್ಠ ಗುಣಮಟ್ಟದ ಅಕ್ಕಿ ಪೂರೈಕೆ

Pralhad Joshi: ದೇಶದ ಪ್ರತಿಯೊಂದು ಅರ್ಹ ಕುಟುಂಬವೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಮೊದಲಿನಷ್ಟೇ ಪ್ರಮಾಣದ ಆಹಾರ ಧಾನ್ಯ ಪಡೆಯಲಿದೆ. ಇದರಲ್ಲಿ ಯಾವುದೇ ರೀತಿ ಕಡಿತ ಮಾಡಲಾಗಿಲ್ಲ. ಆದರೆ, ಗುಣಮಟ್ಟದಲ್ಲಿ ಮಾತ್ರ ಪರಿವರ್ತನೆ ತೋರಲಾಗಿದೆ. ಅದರಂತೆ ಇನ್ನು ಮುಂದೆ ಶೇ.90ರಿಂದ 95ರಷ್ಟು ಉತ್ಕೃಷ್ಟ ಗುಣಮಟ್ಟದ ಅಕ್ಕಿ ಪಡಿತರದಾರರ ಕೈ ಸೇರಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜೋಶಿ ತಿಳಿಸಿದ್ದಾರೆ.

Gauribidanur News: ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಜವಾಬ್ದಾರಿ ವಹಿಸಿ: ಎನ್. ಎಚ್.ಶಿವಶಂಕರರೆಡ್ಡಿ ಕರೆ

ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಜವಾಬ್ದಾರಿ ವಹಿಸಿ

ತಾಲ್ಲೂಕಿನ ಹೊಸೂರಿನ ಬಲಿಜಗರ ಕಲ್ಯಾಣ ಮಂಟಪದಲ್ಲಿ ಗೌರಿಬಿದನೂರು ವಿಧಾನಸಭಾ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ನಡೆ ಮತ ರಕ್ಷಣೆಯ ಕಡೆ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಿಎಲ್‌ಎ ಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಕರ್ನಾಟಕದಲ್ಲೂ ಈ ಪ್ರಕ್ರಿಯೆ ಪ್ರಾರಂಭವಾಗಿದೆ.

Gauribidanur News: ಶಾಲಾ ಸಂಸತ್ ಚುನಾವಣೆ

Gauribidanur News: ಶಾಲಾ ಸಂಸತ್ ಚುನಾವಣೆ

ಹಣ ತೆಗೆದುಕೊಂಡು ಮತದಾನ ಮಾಡುವುದಲ್ಲ, ಅದು ನಮ್ಮ ಹಕ್ಕಾಗಿದೆ. ಭ್ರಷ್ಟಾಚಾರ ಮುಕ್ತ ವಾಗಿ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ನಮಗೆ ಚುನಾವಣೆ ಹೇಗೆ ನಡೆಯುತ್ತದೆ, ನಾವು ಹೇಗೆ ಮತದಾನ ಮಾಡಬೇಕು, ಎಂದೆಲ್ಲಾ ಕಲಿಸಿದ್ದಾರೆ. ನಾವು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುತ್ತೇವೆ

ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಕರೆ; ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳೇನು?

ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಕರೆ

CM DK Shivakumar: ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತ ಮಾಹಿತಿ ಇಲ್ಲಿದೆ.

ಜು.11ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್: 5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ

ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ ನ್ಯಾಯಾಲಯಗಳಿಗೆ ಪದೇ ಪದೇ ಅಲೆದಾಡುವ ಅಗತ್ಯ ಇರುವುದಿಲ್ಲ. ಪರಸ್ಪರ ರಾಜಿಯಿಂದ ವಿವಾದಗಳು ಅಂತ್ಯಗೊಳ್ಳುವುದರಿಂದ ಸಂಬಂಧಗಳು ಉಳಿಯು ತ್ತವೆ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯಗಳು ಕಡಿಮೆಯಾಗುತ್ತವೆ

Chinthamani News: ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮುಖಂಡ ವೇಣುಗೋಪಾಲ್ ಭಾಗಿ

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದು 100% ಸತ್ಯ ಎಂದು ದೃಢಪಡಿಸಿದ ಗೋಪಿ

ದೇವಸ್ಥಾನಗಳ ನಿಧಿ ದುರುಪಯೋಗದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ವೇಣುಗೋಪಾಲ್ ದೇವಸ್ಥಾನಗಳ ಹಣವನ್ನು ಯಾರೆಲ್ಲಾ ದುರುಪಯೋಗಪಡಿಸಿಕೊಂಡಿದ್ದಾರೋ ಅವರಿಂದ ಸಂಪೂರ್ಣ ಹಣ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಯಾರನ್ನೂ ಬಿಡಬಾರದು. ಎಸ್‌ಐಟಿ ಮೂಲಕ ಸಮಗ್ರ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು

ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ; ಹೆಚ್ಚುವರಿ ಪೊಲೀಸ್ ಭದ್ರತೆಗೆ ಗುಪ್ತಚರ ಇಲಾಖೆಯ ಶಿಫಾರಸು?

ಕೆಂಪೇಗೌಡ ಜಯಂತಿ ಗದ್ದಲದ ಬಳಿಕ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ

ಜೂನ್ 27ರಂದು ಸರ್ಕಾರದ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಇರಬಾರದು, ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಗೋ ಬ್ಯಾಕ್ ಪ್ರದೀಪ್ ಈಶ್ವರ್(Go back Pradeep Eshwar) ಎಂದು ಘೋಷಣೆಗಳನ್ನು ಕೂಗುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಅಪಮಾನ ಮಾಡಿದ್ದರು.

Gudibande News: ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಖಜಾಂಚಿ ಶ್ರೀನಿವಾಸ, ಸಂಘಟನಾ ಕಾರ್ಯದರ್ಶಿಯಾಗಿ ಎ.ಜಿ.ಗಂಗಯ್ಯ, ಕಾನೂನು ಸಲಹೆಗಾರರಾಗಿ ಅಶ್ವತ್ಥಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿಯಾಗಿ ಪದ್ಮನಾಭ, ಜಿಲ್ಲಾ ನಿರ್ದೇಶಕರಾಗಿ ಲೋಕೇಶ್, ಗಂಗಾಧರ್‍, ತಾಲೂಕು ನಿರ್ದೇಶಕರಾಗಿ ಕೆ.ವೆಂಕಟೇಶ್, ಚಿಕ್ಕಗಂಗಯ್ಯ, ಅಶ್ವತ್ಥಮ್ಮ, ಶ್ರೀನಿವಾಸ, ಚಿಕ್ಕಮುನಿಶಾಮಿ ರವರುಗಳು ಆಯ್ಕೆಯಾಗಿದ್ದಾರೆ.

ಕಾಲಚಕ್ರ ತಿರುಗುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಕಾಲಚಕ್ರ ತಿರುಗುತ್ತಲೇ ಇರುತ್ತದೆ ಮೇಲೆ ಹೋದವನು ಕೆಳಗೆ ಬರಲೇಬೇಕು: ಎಚ್‌ಡಿಕೆ

HD Kumaraswamy: ನಾನೇ ಇರುತ್ತೇನೆ, ಎಲ್ಲವೂ ನನ್ನಿಂದಲೇ ಆಗುತ್ತದೆ ಎನ್ನುವುದು ನಡೆಯಲ್ಲ. ಪ್ರತಿಯೊಂದಕ್ಕೂ ಕೊನೆ ಇರುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌; ಮೂಲ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌; ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ.

Gubbi News: ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಲೋಕಾರ್ಪಣೆ

ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಲೋಕಾರ್ಪಣೆ

ಲೋಕಾರ್ಪಣೆಗೊಳಿಸಿದ ತಹಶೀಲ್ದಾರ್ ಆರತಿ.ಬಿ ಮಾತನಾಡಿ, ಗ್ರಾಮೀಣ ಜನರಿಗೆ ದಂತ ಆರೋಗ್ಯ ಬಗ್ಗೆ ಅರಿವಿಲ್ಲ. ಮುಖ ಸೌಂದರ್ಯಕ್ಕೆ ದಂತ ಆರೋಗ್ಯ ಮುಖ್ಯ ಎಂಬ ಅರಿವು ಮೂಡಿಸಲು ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ನಡೆಸಿ ಜೊತೆಗೆ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವ ಅರಿವು ಮೂಡಿಸುವ ಕೆಲಸ ಶ್ಲಾಘನೀಯ ಎಂದರು

WDTI: ಬಿಡದಿಯಲ್ಲಿ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆ

ಬಿಡದಿಯಲ್ಲಿ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ವಾಹನ ಚಾಲನಾ ತರಬೇತಿ ಸಂಸ್ಥೆ ಯನ್ನು ಆರಂಭಿಸಲಾಗುತ್ತದೆ. ಮಹಿಳಾ ಸ್ವಯಂ ಸೇವಾ ಸಂಸ್ಥೆಯಾಗಿರುವ ಅವೇಕ್ (AWAKE - Association of Women Entrepreneurs of Karnataka) ಮಹಿಳೆಯರಿಗೆ ವಾಹನ ಚಾಲನೆ ಸೇರಿದಂತೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲಿದೆ

ಎಂ.ಅಗ್ರಹಾರದ ಜಯಪ್ರಕಾಶ್ ನಾರಾಯಣ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ಬಿ.ನಾರಾಯಣ ಸ್ವಾಮಿ ಅವರಿಗೆ ಹಳೇ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಮುಖ್ಯೋಪಾಧ್ಯಾಯ ಅವರಿಗೆ ಹಳೇ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

1991ರಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಕೆ.ಬಿ.ನಾರಾಯಣ ಸ್ವಾಮಿ ಅವರು, ಶಾಲೆಯ ಬೆಳವಣಿಗೆಗೆ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವುದು ಶ್ಲಾಘ ನೀಯ. ಅವರ ಹಳೇ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಷ್ಟು ಅದ್ಧೂರಿ ಸಮಾರಂಭ ಮಾಡುತ್ತಿರುವು ದನ್ನು ಗಮನಿಸಿದರೇ ಇವರ ಸಾಧನೆ ಏನೆಂಬುದು ತಿಳಿಯುತ್ತಿದೆ.

ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ತೀವ್ರ ಶೋಧ

ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ

ರಾಜ್ಯದ ಹಲವು ಕೋರ್ಟ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್‌ ಬೆದರಿಕೆ ಬಂದ ಬಳಿಕ ಇದೀಗ ಇಸ್ರೋ (ISRO) ಪ್ರಧಾನ ಕಚೇರಿಗೆ ಗುರುವಾರ ಬಾಂಬ್ ಬೆದರಿಕೆಯ ಇಮೇಲ್‌ ಕಳುಹಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯಾಚರಣೆ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Loading...