ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ
DK Shivakumar: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. "ಅನುದಾನದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.