ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿ ಸೇರಿ ಇಬ್ಬರ ಬಂಧನ
ಬ್ರೂಕ್ಫೀಲ್ಡ್ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.