ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ
Lokayukta Raid: ಗೋದಾಮು ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಗ್ರಾಪಂ ಪಿಡಿಒ, ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿ, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೇಲ್‌ನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.