ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ
ಕೆಪಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಶುಭ ಹಾರೈಸಿರುವ ಸಿಎಂ ಹಾಗೂ ಕೆಪಿಸಿಸಿ ನಿಕಟಪೂರ್ವ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಇಡೀ ಸರ್ಕಾರ ಮತ್ತು ಇಡೀ ಪಕ್ಷ ಹರಿಪ್ರಸಾದ್ ಅವರ ಜೊತೆಯಲ್ಲಿರುತ್ತದೆ. ನಾವೆಲ್ಲರೂ ಒಟ್ಟಾಗಿ ಸಂಕಲ್ಪ ಮಾಡಿ, ಶ್ರಮವಹಿಸಿ ದುಡಿದು 2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಹಾಗೂ 2029ರಲ್ಲಿ ಶ್ರೀ ರಾಹುಲ್ ಗಾಂಧಿ ಅವರನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿಯನ್ನಾಗಿ ಮಾಡಲು ನಾವೆಲ್ಲರೂ ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.