ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Kidnap case: ತಂದೆಯ ಎದುರೇ ಮಗಳ ಕಿಡ್ನ್ಯಾಪ್‌; ರಕ್ಷಿಸಲು ಹೋದ ತಂದೆಯನ್ನು 200 ಮೀಟರ್ ಎಳೆದೊಯ್ದ ಕಾರು!

ಹಾಸನದಲ್ಲಿ ತಂದೆಯ ಎದುರೇ ಮಗಳ ಕಿಡ್ನ್ಯಾಪ್‌!

Kidnap case: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ತಂದೆ ಜತೆ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಕಿಡ್ನ್ಯಾಪ್‌ ಮಾಡಲಾಗಿದೆ. ಮಗಳನ್ನು ರಕ್ಷಿಸಲು ಹೋದ ತಂದೆಯನ್ನು ಕಾರು ಸುಮಾರು 200 ಮೀಟರ್ ಎಳೆದೊಯ್ದಿದೆ.

Union Bank of India: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳಿವೆ, ಹೀಗೆ ಅರ್ಜಿ ಸಲ್ಲಿಸಿ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳಿವೆ, ಹೀಗೆ ಅರ್ಜಿ ಸಲ್ಲಿಸಿ!

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ(Union Bank Of India) ಒಟ್ಟು 500 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು ಹುದ್ದೆಗಳ ಪೈಕಿ ಸಾಮಾನ್ಯ ವರ್ಗದವರಿಗೆ 206, ಆರ್ಥಿಕ ದುರ್ಬಲ ವರ್ಗದವರಿಗೆ 50, ಒಬಿಸಿ ಅಭ್ಯರ್ಥಿಗಳಿಗೆ 134, ಎಸ್‌ಟಿ ಅಭ್ಯರ್ಥಿಗಳಿಗೆ 36 ಹಾಗೂ ಎಸ್‌ಸಿ ವರ್ಗದವರಿಗೆ 74 ಹುದ್ದೆಗಳನ್ನು ಮೀಸಲಿಡಲಾಗಿದೆ.

Road Accident: ಡಿವೈಡರ್‌ಗೆ ಬಸ್‌ ಡಿಕ್ಕಿ, ದೇವನಹಳ್ಳಿ ಏರ್‌ಪೋರ್ಟ್‌ ಸಿಬ್ಬಂದಿ ಸಾವು

ಡಿವೈಡರ್‌ಗೆ ಬಸ್‌ ಡಿಕ್ಕಿ, ದೇವನಹಳ್ಳಿ ಏರ್‌ಪೋರ್ಟ್‌ ಸಿಬ್ಬಂದಿ ಸಾವು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 35 ಮಂದಿ ಸಿಬ್ಬಂದಿಯನ್ನು ಹೊತ್ತ ಖಾಸಗಿ ಬಸ್ ಯಲಹಂಕದ ಕಡಯರಪ್ಪನಹಳ್ಳಿಯ ಪೇಯಿಂಗ್ ಗೆ‌ಸ್ಟ್‌ಹೌಸ್ ಕಡೆಗೆ ತೆರಳುತ್ತಿತ್ತು. ಬೇಗೂರು ಜಂಕ್ಷನ್‌ನಲ್ಲಿ ಎಡ ತಿರುವು ಪಡೆದಾಗ ಅಪಘಾತ (Road Accident) ಸಂಭವಿಸಿದೆ.

DK Shivakumar: ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

"ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ" ಎಂದಿದ್ದಾರೆ ಡಿಕೆ‌ ಶಿವಕುಮಾರ್ (DK Shivakumar).

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 14th May 2025: ಬೆಂಗಳೂರಿನಲ್ಲಿ ಬುಧವಾರ (ಮೇ 14) ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ(Gold Rate Today) ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆಯಾಗಿದ್ದು, 8,805 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 54 ರೂ. ಕಡಿಮೆಯಾಗಿ, 9,606 ರೂ.ಗೆ ಬಂದು ಮುಟ್ಟಿದೆ.

Murder Case: ಆಸ್ತಿಗಾಗಿ ನಾಲ್ಕು ಜನರ ಕೊಲೆ ಮಾಡಿದ ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ

ಆಸ್ತಿಗಾಗಿ ನಾಲ್ವರ ಕೊಲೆ ಮಾಡಿದ ಮಗನಿಗೆ ಗಲ್ಲು, ಅಪ್ಪನಿಗೆ ಜೀವಾವಧಿ ಶಿಕ್ಷೆ

2023 ರ ಫೆಬ್ರುವರಿ 23ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಘೋರ ಕೊಲೆಗಳು (Murder Case) ನಡೆದಿದ್ದವು. ಆಸ್ತಿಗಾಗಿ ಮನೆಯ ಸೊಸೆ ಮಾಡಿದ ಪುಸಲಾವಣೆಯ ಪರಿಣಾಮ, ಆಕೆಯ ತಮ್ಮ ಹಾಗೂ ತಂದೆ ಇದೀಗ ಕಂಬಿಗಳ ಹಿಂದೆ ತಮ್ಮ ಕೊನೆಯ ಕ್ಷಣ ಎಣಿಸುವಂತಾಗಿದೆ.

Operation Sindoor: ಆಪರೇಶನ್‌ ಸಿಂದೂರ್‌ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿ ಸೆರೆ

ಆಪರೇಶನ್‌ ಸಿಂದೂರ್‌ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿ ಸೆರೆ

ಆಪರೇಷನ್ ಸಿಂದೂರ್ (Operation Sindoor) ಸಕ್ಸಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲಾಗಿತ್ತು. ಈ ವೇಳೆ ಪಿಜಿಯ ಬಾಲ್ಕನಿಯಲ್ಲಿ ಪಾಕಿಸ್ತಾನ ಪರ ಛತ್ತೀಸ್‌ಗಢ ಮೂಲದ ಶುಭಾಂಶು ಶುಕ್ಲಾ ಘೋಷಣೆ ಕೂಗಿದ್ದ. ಈತ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಾನೆ.

Karnataka Rain: ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ಕೊಪ್ಪಳದಲ್ಲೇ ಸಿಡಿಲಿನ ಹೊಡೆತಕ್ಕೆ ಇಬ್ಬರು, ಬಳ್ಳಾರಿಯಲ್ಲಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಒಬ್ಬರು, ವಿಜಯಪುರದಲ್ಲೂ ಸಹ ಓರ್ವ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗದಲ್ಲಿ ಮಳೆ ನೀರಿಗೆ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಮತ್ತೊಂದಡೆ ಗೋಕಾಕ್​ನಲ್ಲಿ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Karnataka Rains: ಹವಾಮಾನ ವರದಿ; ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಬೆಂಗಳೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದ ವಿವಿಧೆಡೆ ಮೇ 16 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Lokayukta Raid: ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ

ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ

Lokayukta Raid: ಗೋದಾಮು ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಗ್ರಾಪಂ ಪಿಡಿಒ, ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿ, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೇಲ್‌ನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

AITUC strike: ಮೇ 20ಕ್ಕೆ ಕೇಂದ್ರ, ರಾಜ್ಯ ಸರಕಾರದ ಜನ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಎಐಟಿಯುಸಿ ಮುಷ್ಕರ

ಮೇ 20ಕ್ಕೆ ಜನ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಟಿಯುಸಿ ಮುಷ್ಕರ

AITUC strike: 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಆಗ್ರಹಿಸಿದ್ದಾರೆ.

Physical Abuse: ಬೆಳಗಾವಿಯಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

ಬೆಳಗಾವಿಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Physical Abuse: ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ಆಕ್ರೋಶ ಹೊರಹಾಕಿದ್ದರು. ಇದೀಗ ಘಟನೆ ಕುರಿತಂತೆ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Haveri News: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Haveri News: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಒಬ್ಬ ಯುವಕ ನೀರಿನಲ್ಲಿ ಮುಳುಗುತ್ತಿದ್ದ. ಆತನ ರಕ್ಷಣೆಗೆ ಮತ್ತೊಬ್ಬ ಹೋಗಿದ್ದು, ಈ ವೇಳೆ ಇಬ್ಬರೂ ನೀರಿನಿಂದ ಹೊರಬರಲಾರದೇ ಮೃತಪಟ್ಟಿದ್ದಾರೆ.

Sofia Qureshi: ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಮನೆ ಮೇಲೆ ದಾಳಿ; ಸುಳ್ಳು ಸುದ್ದಿ ಹಬ್ಬಿಸಿದ ಯುವಕ!

ಕರ್ನಲ್ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿ ಎಂಬುದು ಸುಳ್ಳು

Sofia Qureshi: ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವುದು ಕಂಡುಬಂದಿದೆ. ಅನಿಸ್ ಉದ್ದೀನ್ ಎಂಬಾತ, ಸೇನಾಧಿಕಾರಿ ಸೋಫಿಯಾ ಖುರೇಷಿ ಅವರ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ಪತಿ‌ ಮನೆ ಮೇಲೆ ದಾಳಿ ಮಾಡಲಾಗಿದೆ ಎಂದು ಹಳೆ ಪೋಟೋ ಒಂದನ್ನು ಸೇರಿಸಿ, ಸುಳ್ಳು ಸುದ್ದಿ ಹಬ್ಬಿಸಿದ್ದಾನೆ.

Bengaluru Rain: ಬೆಂಗಳೂರಲ್ಲಿ ಆಲಿಕಲ್ಲು ಮಳೆ ಅಬ್ಬರ; ಮರಗಳು ನೆಲಕ್ಕುರುಳಿ ಹಲವು ವಾಹನಗಳು ಜಖಂ

ಬೆಂಗಳೂರಲ್ಲಿ ಆಲಿಕಲ್ಲು ಮಳೆ ಅಬ್ಬರ; ಪ್ರಮುಖ ರಸ್ತೆಗಳು ಜಲಾವೃತ

Bengaluru Rain: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಬಿರುಗಾಳಿಯ ಸಾಧ್ಯತೆ ಇದೆ.

Hubli stabbing case: ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

Hubli stabbing case: ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಐದಾರು ಸ್ನೇಹಿತರು ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರ ನಡುವೆ ಜಗಳವಾಗಿದೆ. ಈ ವೇಳೆ ಒಬ್ಬ ಬಾಲಕ ಮನೆಗೆ ಹೋಗಿ ಚಾಕು ತಂದು, ಸ್ನೇಹಿತನನ್ನೇ ಕೊಲೆ ಮಾಡಿ ಮಾಡಿದ್ದಾನೆ.

Tourism Sector: ಪ್ರವಾಸೋದ್ಯಮವು ಐಟಿ ಕ್ಷೇತ್ರ ಮೀರಿಸುವ ಸಾಮರ್ಥ್ಯ ಹೊಂದಿದೆ: ಆರ್‌.ಕೆ. ಹೊಳ್ಳ

ಐಟಿ ಕ್ಷೇತ್ರ ಮೀರಿಸುವ ಸಾಮರ್ಥ್ಯ ಪ್ರವಾಸೋದ್ಯಮಕ್ಕಿದೆ: ಆರ್‌.ಕೆ. ಹೊಳ್ಳ

Tourism Sector: ಮೈಸೂರು ನಗರದ ಗೋಲ್ಡನ್ ಕ್ಯಾಸಲ್ ಹೋಟೆಲ್‌ನಲ್ಲಿ ʼಪ್ರವಾಸೋದ್ಯಮ ಮತ್ತು ಶೈಕ್ಷಣಿಕ ಸಹಕಾರ ಕಾರ್ಯಕ್ರಮʼವನ್ನು ಸೋಮವಾರ ಆಯೋಜಿಸಲಾಗಿತ್ತು. ಜಾಗತಿಕ ಪ್ರವಾಸೋದ್ಯಮದ ಅಗತ್ಯಗಳು ಮತ್ತು ಭವಿಷ್ಯದ ಉದ್ಯಮದ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

Sonu Nigam: ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಸೋನು ನಿಗಮ್‌; ಮೇ 15ಕ್ಕೆ ವಿಚಾರಣೆ ಮುಂದೂಡಿಕೆ

ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ ಸೋನು ನಿಗಮ್‌

Sonu Nigam: ಕನ್ನಡಾಭಿಮಾನವನ್ನು ಪಹಲ್ಗಾಮ್‌ ಉಗ್ರರ ದಾಳಿಗೆ ಹೋಲಿಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ದೂರು ಮತ್ತು ನಂತರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ 15ಕ್ಕೆ ಮುಂದೂಡಿದೆ.

Pralhad Joshi: ಸಶಕ್ತ, ಸದೃಢ ಭಾರತವನ್ನು ಅಸ್ಥಿರಗೊಳಿಸುವ ಸಂಚು ದೇಶದ ಒಳ-ಹೊರಗಿನಿಂದ ನಡೆಯುತ್ತಿದೆ: ಪ್ರಲ್ಹಾದ್‌ ಜೋಶಿ

ಸಶಕ್ತ, ಸದೃಢ ಭಾರತವನ್ನು ಅಸ್ಥಿರಗೊಳಿಸುವ ಸಂಚು: ಜೋಶಿ

Pralhad Joshi: ಜಗತ್ತಿನಲ್ಲೇ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯತ್ತ ಸಾಗಿದ ಸಶಕ್ತ, ಸದೃಢ ಭಾರತವನ್ನು ಅಸ್ಥಿರಗೊಳಿಸುವ ಸಂಚು ದೇಶದ ಒಳ-ಹೊರಗಿನಿಂದ ನಡೆಯುತ್ತಿದೆ. ಆದರೆ, ಭಾರತ ಇದ್ಯಾವುದಕ್ಕೂ ಜಗ್ಗುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

Gims Hospital: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಲಿಫ್ಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಎಚ್ಚೆತ್ತುಕೊಂಡು ಎಲ್ಲರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೆವೆ ಎಂದು‌ ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್ ತಿಳಿಸಿದ್ದಾರೆ.

Electric Shock: ಬೀದರ್‌ನಲ್ಲಿ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

ಬೀದರ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

Electric Shock: ಬೀದರ್‌ ಜಿಲ್ಲೆ ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ಅವಘಡ ನಡೆದಿದೆ. ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

CBSE 12th Exam Result: ಸಿಬಿಎಸ್‌ಇ 12ನೇ ತರಗತಿ  ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ, ಬೆಂಗಳೂರಿಗೆ 4ನೇ ಸ್ಥಾನ

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ

CBSE 12th Exam Result: ದೇಶಾದ್ಯಂತ ಕಳೆದ ಫೆಬ್ರವರಿ 15ರಿಂದ 4 ಏಪ್ರಿಲ್‌ವರೆಗೆ CBSE 12ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. 2025ನೇ ಸಾಲಿನಲ್ಲಿ 16 ಲಕ್ಷದ 92 ಸಾವಿರದ 794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 14 ಲಕ್ಷದ 96 ಸಾವಿರದ 307 ಮಕ್ಕಳು 12ನೇ ತರಗತಿ ಪಾಸ್ ಮಾಡಿದ್ದಾರೆ.

Karnataka High Court: ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ವ್ಹೀಲಿಂಗ್‌ ಮಾಡುವವರೇ ಎಚ್ಚರಿಕೆ, ನಿಮಗೆ ಜಾಮೀನು ಕೂಡ ಸಿಗೊಲ್ಲ!

ಮೊದಲಿಗೆ ವ್ಹೀಲಿಂಗ್‌ ಬೃಹತ್‌ ನಗರ ಪ್ರದೇಶಗಳ ಹೆದ್ದಾರಿಗಳಿಗೆ ಸೀಮಿತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗುತ್ತಿದೆ. ವ್ಹೀಲಿಂಗ್‌ ಚಾಲಕ, ಹಿಂಬದಿ ಸವಾರ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಗಂಭೀರ ಬೆದರಿಕೆ. ಕೆಲವು ಯುವಕರು ನಿಸ್ಸಂಶಯವಾಗಿ ಸಮಾಜದ ಸ್ವಾಸ್ಥ್ಯ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ," ಎಂದು ನ್ಯಾಯಾಲಯ ಹೇಳಿದೆ.

ಅದ್ಧೂರಿಯಾಗಿ ಉದ್ಘಾಟನೆಗೊಂಡ ಮೂರನೇ ಅಂತಾರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನ 2025

ಆಧುನಿಕ ನ್ಯಾಚುರೋಪತಿ ಪಿತಾಮಹ ಡಾ.ವೀರೇಂದ್ರ ಹೆಗ್ಗಡೆ

ಜನರಿಗೆ ಆರೋಗ್ಯ ಸಮಸ್ಯೆಯಾದರೆ ವೈದ್ಯರ ಬಳಿ ಹೋಗಿ, ನಾವು ಹಣವನ್ನು ನೀಡುತ್ತೇವೆ ನಮಗೆ ಆರೋಗ್ಯವನ್ನು ನೀಡಿ ಎಂದು ಕೇಳುತ್ತಿದ್ದಾರೆ. ಆದರೆ ನಮ್ಮ ನ್ಯಾಚುರೋಪತಿ ಮತ್ತು ಆಯುರ್ವೇದ ಕಾಲೇಜಿನಲ್ಲಿ ದೇಹವು ತಾನಾಗಿಯೇ ಗುಣಮುಖವಾಗುತ್ತದೆ ಎಂದು ಹೇಳಿಕೊಡುತ್ತೇವೆ