ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್; 8 ಅಂತಾರಾಜ್ಯ ದರೋಡೆಕೋರರ ಸೆರೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ 8 ಮಂದಿ ಅಂತರ್‌ರಾಜ್ಯ ದರೋಡೆಕೋರರ ತಂಡವನ್ನು ಯಲ್ಲಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಖತರ್ನಾಕ್ ಗ್ಯಾಂಗ್‌ನ ಹಿನ್ನೆಲೆ ಮತ್ತು ಕೃತ್ಯದ ಶೈಲಿ: ಮಹಾರಾಷ್ಟ್ರದ ಕೈಕಡಿ ಸಮುದಾಯಕ್ಕೆ ಸೇರಿದ ಈ ಗ್ಯಾಂಗ್, ಕಳೆದ 3-4 ವರ್ಷಗಳಿಂದ ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳು, ಪ್ರವಾಸಿ ತಾಣಗಳು ಮತ್ತು ಜಾತ್ರೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿತ್ತು.