ಆರೆಂಜ್ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
Karnataka Weather: ಜುಲೈ 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.