ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಬಂಜಾರಾ ಸಮುದಾಯ ದುಡಿಯಲು ವಲಸೆ ಹೋಗಿದ್ದು ಗಣತಿ ಮುಂದೂಡಬೇಕು: ಶೇಖರ ನಾಯಕ

ಬಂಜಾರಾ ಸಮುದಾಯ ಬೇರೆ ಕಡೆ ವಲಸೆ ಹೋಗಿದ್ದು, ಗಣತಿ ಮುಂದೂಡಬೇಕು

ಜನಸಂಖ್ಯಾ ಆಧಾರದ ಮೇಲೆ ಜಾತಿ ಗಣತಿ ಮಾಡುತ್ತಿರುವ ಸರ್ಕಾರ ಇಂದು ಬಂಜಾರ ಸಮು ದಾಯ ಅತ್ಯೆಂತ ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವ ಜನಸಮುದಾಯ ತುತ್ತಿನ ಚೀಲ ತುಂಬಿಸಿ ಕೊಳ್ಳಲು ಮಹಾರಾಷ್ಟ್ರ, ಗುಜರಾತ ,ಮುಂಬೈಗೋವಾ ಇತರೆ ರಾಜ್ಯಗಳಿಗೆ ದುಡಿಯಲು ಹೋಗಿದ್ದಾರೆ ತಾಂಡಾಗಳಲ್ಲಿ ಬಂಜಾರ ಸಮುದಾಯ ಜನ ಸದ್ಯ ಇರುವುದು ವಿರಳ

Kantara Chapter 1: ಕಾಂತಾರ ಚಾಪ್ಟರ್ 1 ಬಿಡುಗಡೆ ಅಪ್‌ಡೇಟ್‌, ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ

ಕಾಂತಾರ ಚಾಪ್ಟರ್ 1 ಬಿಡುಗಡೆ ಅಪ್‌ಡೇಟ್‌, ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ʻಕಾಂತಾರ ಚಾಪ್ಟರ್‌ 1’ ಸಿನಿಮಾಗೆ ಇತ್ತೀಚೆಗೆ ಸಾಕಷ್ಟು ಅಡಚಣೆಗಳು ಎದುರಾಗಿವೆ. ಹೀಗಾಗಿ ಸಿನಿಮಾ ರಿಲೀಸ್‌ ಮುಂದಕ್ಕೆ ಹೋಗಲಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ವದಂತಿಗಳು ಹಬ್ಬಿದ್ದವು. ಇದೀಗ ಆ ವದಂತಿಗಳಿಗೆ ಹೊಂಬಾಳೆ ಫಿಲಂಸ್‌ ಸ್ಪಷ್ಟನೆ ನೀಡಿದೆ.

Haveri News: ಹಾವೇರಿಯಲ್ಲಿ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಹಾವೇರಿಯಲ್ಲಿ ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಜಾಮೀನು, ಭರ್ಜರಿ ರೋಡ್‌ಶೋ

ಗ್ಯಾಗ್‌ರೇಪ್‌ ಆರೋಪಿಗಳಾದ ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮಿವುಲ್ಲಾ ಲಾಲನವರ, ಮಹಮದ್ ಸಾದಿಕ್ ಅಗಸಿಮನಿ, ಶೊಯಿಬ್ ಮುಲ್ಲಾ, ತೌಸಿಪ್ ಚೋಟಿ, ರಿಯಾಜ್ ಸಾವಿಕೇರಿಗೆ ಜಾಮೀನು ದೊರೆತಿದ್ದು, ಜೈಲಿನಿಂದ ಹೊರಬಿದ್ದ ಕೂಡಲೇ ಕಾರುಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ.

Actor Darshan: ನಟ ದರ್ಶನ್‌, ವಿಜಯಲಕ್ಷ್ಮಿಗೆ ಮತ್ತೊಂದು ಕೋರ್ಟ್‌ ಸಮನ್ಸ್‌

ನಟ ದರ್ಶನ್‌, ವಿಜಯಲಕ್ಷ್ಮಿಗೆ ಮತ್ತೊಂದು ಕೋರ್ಟ್‌ ಸಮನ್ಸ್‌

ಬೇರೊಂದು ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ನಟ ದರ್ಶನ್ (Actor Darshan) ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

Gold Rate Today:  ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಇಂದಿನ ರೇಟ್‌ ಇಷ್ಟಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 23rd May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 35 ರೂ. ಇಳಿಕೆ ಕಂಡಿದ್ದು, 8,940 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 38 ರೂ. ಇಳಿಕೆಯಾಗಿ 9,753 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,520 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,400 ರೂ. ಮತ್ತು 100 ಗ್ರಾಂಗೆ 8,94,000 ರೂ. ನೀಡಬೇಕಾಗುತ್ತದೆ.

Tumkur News: ಉಸಿರಾಟದ ತೊಂದರೆ: ನವಜಾತ ಮಗುವಿಗೆ ಯಶಸ್ವಿ ಚಿಕಿತ್ಸೆ

ಉಸಿರಾಟದ ತೊಂದರೆ: ನವಜಾತ ಮಗುವಿಗೆ ಯಶಸ್ವಿ ಚಿಕಿತ್ಸೆ

ಆಸ್ಪತ್ರೆಯ ಮಕ್ಕಳ ವೈದ್ಯರಾದ ಡಾಕ್ಟರ್ ನವೀನ್ ಕುಮಾರ್ ಎಸ್.ಆರ್. ಅತಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು, ಕಳೆದ 26 ದಿನಗಳಿಂದ ಈ ಮಗುವಿಗೆ ಚಿಕಿತ್ಸೆ ನೀಡಿರುವುದು ನಮ್ಮ ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯಲ್ಲಿ ಇತಿಹಾಸ ಸೃಷ್ಟಿಸಿದೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾಕ್ಟರ್ ಡಿ ಎಂ ಗೌಡ ತಿಳಿಸಿದರು

Tumkur News: ಎನ್.ಎಸ್.ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ; ನಾಗರಾಜು.ಎನ್

ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಎನ್‌ಎಸ್‌ಎಸ್ ಶಿಬಿರ

ವಿದ್ಯಾರ್ಥಿಗಳು ತಮ್ಮ ಗ್ರಾಮಗಳಲ್ಲಿ ಸಾರ್ವಜನಿಕ ರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾದ ಪರಿಸರ ಕಾಪಾಡಬೇಕು ಪಠ್ಯದ ಜೊತೆಗೆ ಸಮುದಾಯದ ಪರಿಚಯ, ಸೇವೆ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಾಂಸ್ಕೃತಿಕ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಹ ಭೋಜನ, ಕ್ರೀಡೆ ಮೂಲಕ ಸಮಗ್ರತೆ ಪರಿಕಲ್ಪನೆ ಹೀಗೆ ಹಲವು ಚಿಂತನೆ ಸಾಕಾರಕ್ಕಾಗಿ ಶಿಬಿರ ನಡೆಯು ತ್ತದೆ.

Chikkaballapur News: ರೈತರ ಸಮಸ್ಯೆ ಕೇಳುವವರೇ ಇಲ್ಲ: ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ರೈತರ ಸಮಸ್ಯೆ ಕೇಳುವವರೇ ಇಲ್ಲ: ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ಸಿಬ್ಬಂದಿ ಕೊರತೆಯ ಕಾರಣ ಕೇಳಿ ಕೇಳಿ ರೈತರು ರೋಸಿ ಹೋಗಿದ್ದಾರೆ. ಇತ್ತೀಚೆಗೆ ಭಾರಿ ಮಳೆ ಸುರಿದ ಹಿನ್ನೆಲೆ ಸರಿಯಾದ ಬೆಳೆ ಹಾನಿ ಅಂದಾಜನ್ನೇ ಮಾಡಿಲ್ಲ. ಇದರಿಂದ ಸಾಕಷ್ಟು ರೈತರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಹೊರಗುತ್ತಿಗೆ ಮೇಲಿರುವ ನೌಕರರು ಸೇರಿದಂತೆ ಇಲಾಖೆ ನೌಕರರು ಸರಿಯಾಗಿ ಸ್ಪಂದಿಸುತ್ತಿಲ್ಲ. ಬಿತ್ತನೆ, ರಸಗೊಬ್ಬರ, ಬೆಳೆ ನಿರ್ವಹಣೆ ಹೀಗೆ ಹಲವು ವಿಷಯಗಳಲ್ಲಿ ರೈತರಿಗೆ ಸೂಕ್ತ ಮಾಹಿತಿ ಸಿಗುತ್ತಿಲ್ಲ

Chikkaballapur News: ಚಿಂತಾಮಣಿ ಬಂದ್ ಯಶಸ್ವಿ: ದಲಿತ ಮುಖಂಡರನ್ನು ಬಂಧಿಸಿ ಬಿಡುಗಡೆಗೊಳಿಸಿದ ಪೊಲೀಸರು

ನಗರದಲ್ಲಿ ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್

ನಗರದ ವಿವಾದಿತ ಸರ್ಕಾರಿ ಬಾಲಕರ ಶಾಲೆಯಲ್ಲಿ ಪ್ರತಿಷ್ಠಾಪಿಸಿದ್ದ,ಅಂಬೇಡ್ಕರ್ ಪುತ್ಥಳಿಯನ್ನು ರಾತ್ರೋ ರಾತ್ರಿ ತಾಲೂಕು ಆಡಳಿತ ತೆರವು ಗೊಳಿಸಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ನಡೆ ವಿರುದ್ಧ ದಲಿತಪರ ಸಂಘಟ ನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಚಿಂತಾಮಣಿ ಬಂದ್ ಗೆ ಕರೆ ನೀಡಿದರು

Chikkaballapur News: ಕನ್ನಡ ಭವನ ಉದ್ಘಾಟನಾ ಸಮಾರಂಭ

ಕನ್ನಡ ಭವನ ಉದ್ಘಾಟನಾ ಸಮಾರಂಭ

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ ವಹಿಸಲಿದ್ದಾರೆ

Tamannaah Bhatia: ಮೈಸೂರು ಸ್ಯಾಂಡಲ್ ಸೋಪಿಗೆ ರಾಯಭಾರಿಯಾಗಿ ಮಿಲ್ಕಿ ಬ್ಯೂಟಿ ತಮನ್ನಾ ಆಯ್ಕೆ;  ಕನ್ನಡಿಗರು ಗರಂ

ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಗೆ ರಾಯಭಾರಿಯಾಗಿ ನಟಿ ತಮನ್ನಾ!

Tamannaah Bhatia: ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ಮೈಸೂರ್ ಸ್ಯಾಂಡಲ್ ಸೋಪ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾರನ್ನು ನೇಮಿಸಿದ್ದು, ಈ ನಿರ್ಧಾರ ಕನ್ನಡ ಕಾರ್ಯಕರ್ತರು ಮತ್ತು ನೆಟಿಜನ್‌ಗಳಿಂದ ತೀವ್ರ ಆಕ್ಷೇಪಕ್ಕೆ ಒಳಗಾಗಿದೆ.

Dengue Fever: ಬೆಂಗಳೂರಲ್ಲಿ ಮಳೆ ತಂದ ಆತಂಕ: ಡೆಂಘೀ, ಮಲೇರಿಯಾ, ವೈರಲ್‌ ಜ್ವರ ಹೆಚ್ಚಳ, ಜೊತೆಗೆ ಕೋವಿಡ್!

ಮಳೆ ತಂದ ಆತಂಕ: ಡೆಂಘೀ, ಮಲೇರಿಯಾ, ವೈರಲ್‌ ಜ್ವರ ಹೆಚ್ಚಳ, ಜೊತೆಗೆ ಕೋವಿಡ್!

ಮಳೆ ಬಂದು ನೀರು ಎಲ್ಲೆಡೆ ನಿಂತು ಸೊಳ್ಳೆಗಳು ಹುಟ್ಟಿಕೊಂಡ ಪರಿಣಾಮ ಡೆಂಘೀ (Dengue Fever), ಮಲೇರಿಯಾ, ಚಿಕುನ್‌ಗುನ್ಯಾ ಪ್ರಕರಣಗಳು ಕಂಡುಬರುತ್ತಿವೆ. ಜತೆಗೆ ಸಾಮಾನ್ಯ ಜ್ವರ, ವೈರಲ್‌ ಸೋಂಕು, ನೆಗಡಿ, ಸುಸ್ತು, ತಲೆನೋವು ಪ್ರಕರಣಗಳೂ ಹೆಚ್ಚಾಗಿವೆ. ಕಲುಷಿತ ನೀರು ಸೇವನೆಯಿಂದ ಬರುವ ಗ್ಯಾಸ್ಟ್ರೋ ಎಂಟರೈಟಿಸ್‌ ಹೆಚ್ಚಾಗಿದೆ.

Banu Mushtaq: ಬಾನು ಮುಷ್ತಾಕ್‌ಗೆ ಜಿ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರಕಾರ

ಬಾನು ಮುಷ್ತಾಕ್‌ಗೆ ಜಿ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರಕಾರ

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರು ಬಯಸಿದರೆ, ನಮ್ಮ ನಿಯಮಗಳ ಪ್ರಕಾರ ಬೆಂಗಳೂರಿನಲ್ಲಿ ‘ಜಿ’ ವರ್ಗದ ಸೈಟ್ ಅನ್ನು ಒದಗಿಸುತ್ತೇವೆ ಎಂದಿದ್ದಾರೆ.

Tamannaah Bhatia: ಮೈಸೂರು ಸ್ಯಾಂಡಲ್‌ಗೆ ನಟಿ ತಮನ್ನಾ ರಾಯಭಾರಿ: ಕಟು ಟೀಕೆ, ಪ್ರತಿಭಟನೆಗೆ ಮುಂದಾದ ಕರವೇ

ಮೈಸೂರು ಸ್ಯಾಂಡಲ್‌ಗೆ ತಮನ್ನಾ ರಾಯಭಾರಿ: ಟೀಕೆ, ಪ್ರತಿಭಟನೆಗೆ ಮುಂದಾದ ಕರವೇ

Tamannaah Bhatia: ಸೋಶಿಯಲ್‌ ಮೀಡಿಯಾಗಳಲ್ಲಿ ಹಾಗೂ ಸಾರ್ವಜನಿಕ ವಲಯಗಳಲ್ಲಿ ಸರ್ಕಾರದ ಈ ನಿರ್ಧಾರಕ್ಕೆ ಟೀಕೆಗಳು ವ್ಯಕ್ತವಾಗಿವೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ, ಬೆಂಗಳೂರಿನವರೇ ಆದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಇನ್ನು ಹಲವು ನಟಿಯರು ಮೈಸೂರು ಸ್ಯಾಂಡಲ್ ಸೋಪ್ ನ ರಾಯಭಾರಿಯನ್ನಾಗಿ ಮಾಡಬಹುದಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ.

Murder Case: ಮಂಗಳೂರಿನಲ್ಲಿ ಚೂರಿಯಿಂದ ಇರಿದು ಮತ್ತೊಬ್ಬನ ಕೊಲೆ

ಮಂಗಳೂರಿನಲ್ಲಿ ಚೂರಿಯಿಂದ ಇರಿದು ಮತ್ತೊಬ್ಬನ ಕೊಲೆ

ಮುಸ್ತಫ ಜೊತೆ ಮಾತುಕತೆಗೆ ತನ್ನ ಇಬ್ಬರು ಪುತ್ರರೊಂದಿಗೆ ಸಲ್ಮಾನ್ ಬಂದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಸಲ್ಮಾನ್​ಗೆ ಮುಸ್ತಫ ಚೂರಿಯಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಲ್ಮಾನ್​​ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

African Swine Fever: ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ, ನೂರಾರು ಹಂದಿಗಳ ಸಾವು

ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ, ನೂರಾರು ಹಂದಿಗಳ ಸಾವು

ಕೊಡಗು ಜಿಲ್ಲೆಯ ಕುಶಾಲನಗರದ ಹುದುಗೂರು ಗ್ರಾಮದಲ್ಲಿ ನಿರಂತರವಾಗಿ ಹಂದಿಗಳು ಮೃತಪಟ್ಟಿರುವ ಹಿನ್ನೆಲೆ, ಪಶು ವೈದ್ಯಕೀಯ ಇಲಾಖೆ ಅವುಗಳ ಸ್ಯಾಂಪಲ್ ಸಂಗ್ರಹಿಸಿ ಹೈದರಾಬಾದಿಗೆ ಕಳುಹಿಸಿತ್ತು. ವರದಿಯಲ್ಲಿ ಹಂದಿಗಳಿಗೆ ಆಫ್ರಿಕನ್ ಹಂದಿಜ್ವರ (African Swine Fever) ಇರುವುದು ದೃಢಪಟ್ಟಿದೆ.

Cancer treatment: ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್‌, ಇಂದಿನಿಂದ 16 ಕಡೆ ಕೀಮೋಥೆರಪಿ ಕೇಂದ್ರ

ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್‌, ಇಂದಿನಿಂದ 16 ಕಡೆ ಕೀಮೋಥೆರಪಿ

ಕ್ಯಾನ್ಸರ್ ರೋಗಿಗಳ ಈ ಸಮಸ್ಯೆಗೆ ಪರಿಹಾರವಾಗಿ, ಆರೋಗ್ಯ ಇಲಾಖೆಯು ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್ ಕೇಂದ್ರಗಳನ್ನು ಆರಂಭಿಸುವ ನಿರ್ಧಾರ ಕೈಗೊಂಡಿದೆ. ಈ ಕೇಂದ್ರಗಳಲ್ಲಿ ಕೀಮೋಥೆರಪಿ ಚಿಕಿತ್ಸೆಯ ಜೊತೆಗೆ ಆಪ್ತ ಸಮಾಲೋಚನೆ, ಮೆಡಿಕಲ್ ಆಂಕಾಲಜಿಸ್ಟ್‌ಗಳ ಸೇವೆ, ವೈದ್ಯರು, ಫಾರ್ಮಾಸಿ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ಸೌಲಭ್ಯವಿರುತ್ತದೆ.

Karnataka SSLC Exam-2: ಮೇ 26ರಿಂದ ರಾಜ್ಯಾದ್ಯಂತ SSLC ಪರೀಕ್ಷೆ-2, ಈ ನಿಯಮ ಪಾಲನೆ ಕಡ್ಡಾಯ

ಮೇ 26ರಿಂದ ರಾಜ್ಯಾದ್ಯಂತ SSLC ಪರೀಕ್ಷೆ-2, ಈ ನಿಯಮ ಪಾಲನೆ ಕಡ್ಡಾಯ

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

Karnataka Weather: ಇಂದು ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಬಿರುಗಾಳಿ ಸಹಿತ ಮಳೆ; ಆರೆಂಜ್‌ ಅಲರ್ಟ್ ಘೋಷಣೆ

ಇಂದು ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಬಿರುಗಾಳಿ ಸಹಿತ ಮಳೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Chikkaballapur News: 31 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ರವರಿಂದ ಭೂಮಿ ಪೂಜೆ

31 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ಭೂಮಿ ಪೂಜೆ

ತಾಲ್ಲೂಕಿನಲ್ಲಿ ಜಲ ಜೀವನ್ ಯೋಜನೆ ಕಳಪೆ ಕಾಮಾಗಾರಿ ಬಗ್ಗೆ ವ್ಯಾಪಕವಾಗಿ ಪೋನ್ ಗಳು ಬರುತ್ತಿದ್ದು ಶೀಘ್ರದಲ್ಲಿ ಎಲ್ಲ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಇಂಜಿನಿಯರ್ ಗಳ ಸಭೆ ಕರೆದು ಚರ್ಚಿಸಿ ಸೂಕ್ತವಾಗಿ ಕೆಲಸ ಮಾಡಲು ಸೂಚಿಸುತ್ತೇನೆ.ಜತೆಗೆ ಗುತ್ತಿಗೆದಾರರು ಕೂಡ ಸರಿಯಾದ ಕೆಲಸ ಮಾಡಲಿಲ್ಲ ಅಂದರೇ ಅವರ ವಿರುದ್ದ ಕಾನೂನು ಕ್ರಮಕೈಗೊಳುತ್ತೇನೆ ಎಂದರು

Pralhad Joshi: ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಪ್ರಲ್ಹಾದ್‌ ಜೋಶಿ

ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಜೋಶಿ

ಗೃಹ ಸಚಿವ ಪರಮೇಶ್ವರ್‌ ಮೇಲೆ ಕ್ರಮಕ್ಕಾಗಿ ಇಡಿಗೆ ಕಾಂಗ್ರೆಸ್‌ನ ಒಂದು ಗುಂಪೇ ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ. ಗೃಹ ಸಚಿವರ ಮೇಲೆ ಕ್ರಮವಾಗಬೇಕೆಂದು ಇಡಿಗೆ ಮಾಹಿತಿ ನೀಡಿದ ಕಾಂಗ್ರೆಸಿಗರು ಯಾರೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಎಲ್ಲ ಗೊತ್ತಿದ್ದರೂ ಈಗ ಡ್ರಾಮ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

Dinesh Gundu Rao: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ದಿನೇಶ್ ಗುಂಡೂರಾವ್

ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ದಿನೇಶ್ ಗುಂಡೂರಾವ್

Dinesh Gundu Rao: ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

DK Shivakumar: ಮೆಟ್ರೋ 2ನೇ ಹಂತದ ಯೋಜನಾ ವೆಚ್ಚ 40,424 ಕೋಟಿಗೆ ಅನುಮೋದನೆ: ಡಿ.ಕೆ.ಶಿವಕುಮಾರ್

ಮೆಟ್ರೋ 2ನೇ ಹಂತದ ಯೋಜನಾ ವೆಚ್ಚ 40,424 ಕೋಟಿಗೆ ಅನುಮತಿ: ಡಿಕೆಶಿ

DK Shivakumar: ಎರಡನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ ₹40,424 ಕೋಟಿಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ ಎಂದು ಅವರು ಹೇಳಿದ್ದಾರೆ.

Electric Shock: ಅಂಕೋಲಾದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವು

Electric Shock: ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ಜರುಗಿದೆ. ಮಹಂತೇಶ್ ಬಾನಾವಳಿಕರ್ (28) ಎಂದು ಗುರುತಿಸಲಾಗಿದೆ. ಭಾರೀ ಗಾಳಿ, ಮಳೆಯಿಂದಾಗಿ ನಡೆದುಕೊಂಡು ಹೋಗುವ ಓಣಿಯೊಂದರಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಯುವಕ ಮಹಂತೇಶ್‌ ಬಾನಾವಳಿಕರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.