ಕಲಬುರಗಿಯಲ್ಲಿ ಸಿಸಿ ರಸ್ತೆ ಶಂಕುಸ್ಥಾಪನೆ ವೇಳೆ ಹೈಡ್ರಾಮಾ
ಬಸವ ಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ರೇಣುಕಾಚಾರ್ಯ ಅವರು ಶಾಸಕ ಅಲ್ಲಮಪ್ರಭು ಪಾಟೀಲ್ ವಿರುದ್ಧ ನೇರ ವಾಗ್ದಾಳಿ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Drugs seized in Bengaluru: ಬೆಂಗಳೂರಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಇಬ್ಬರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಾಯಿಗೆ ನೀಡುವ ಫುಡ್ ಪ್ಯಾಕೆಟ್ನಲ್ಲಿ ಮಾದಕ ವಸ್ತುಗಳನ್ನು ಇಟ್ಟು ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಅನುಕಂಪದ ಅಲೆಯಲ್ಲಿಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಹಾಗೂ ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿಗೆ ಪಕ್ಷದ ವತಿಯಿಂದ ಇದೀಗ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಗತ್ತಿನಾದ್ಯಂತ ಇಂಧನದ ಕೊರತೆ ಉಂಟಾಗಿದೆ. ಇದೀಗ ಕರ್ನಾಟಕಕ್ಕೆ, ಅಮೆರಿಕದಿಂದ ಬೃಹತ್ ಪ್ರಮಾಣದ ಎಲ್ಪಿಜಿ (LPG) ಹೊತ್ತ ಕಾರ್ಗೋ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಬಂದು ತಲುಪಿದೆ. ಕೇಂದ್ರ ಸರ್ಕಾರವು ಹೋಟೆಲ್ಗಳೇ ಹೆಚ್ಚಾಗಿ ಬಳಸುವ ವಾಣಿಜ್ಯ ಎಲ್ಪಿಜಿ ಹಂಚಿಕೆಯನ್ನು ಈಗಿನ ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ 34 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇದೆ ಎಂದು ಪಶುಪಾ ಲನಾ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ಮುಂಗಾರು ಮಳೆ ಸಕಾಲದಲ್ಲಿ ಬಾರದೆ ಪರಿಸ್ಥಿತಿ ಕೈ ಮೇರಿ ಹೋದರೆ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ ಆರಂಭವಾಗಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಯೋಜನೆಗೆ ಕಳೆದ ಮೂರು ವರ್ಷದ ಅವಧಿಯಲ್ಲಿ ಬರೋಬ್ಬರಿ 15 ಸಾವಿರ ಅರ್ಜಿಗಳು ರಾಜ್ಯಾ ದ್ಯಂತ ಸಲ್ಲಿಕೆಯಾಗಿದ್ದು, ಅದರಲ್ಲಿ 140 ಅರ್ಜಿಗಳು ತಿರಸ್ಕೃತಗೊಂಡಿದ್ದರೆ, ಇನ್ನುಳಿದ 15225 ಅರ್ಜಿಗಳ ಪೈಕಿ 3725 ಮಂದಿಗೆ ಹಣ ಸಿಕ್ಕಿದೆ. ಇನ್ನು 5450 ಮಂದಿಗೆ ಹಣ ಬರಬೇಕಿದೆ. ಇನ್ನುಳಿದ ಅರ್ಜಿಗಳಿಗೆ ಹೆಚ್ಚಿನ ಮಾಹಿತಿ ಕೇಳಲಾಗಿದೆ.
ತಿಂಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು, ಇಂದು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ನಮಾಜ್ ಬಂಡೆಯ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಬೃಹತ್ ಮೆರವಣಿಗೆಯ ಮೂಲಕ ತೆರಳಿದರು. ನಂತರ ಜಾಮಿಯಾ ಮಸೀದಿಯ ಮೌಲ್ವಿಗಳು ಹಬ್ಬದ ಮಹತ್ವದ ಬಗ್ಗೆ ಧಾರ್ಮಿಕ ಉಪದೇಶ ನೀಡಿದರು.
ತಾಲ್ಲೂಕಿನ ಕಸಬ ಹೋಬಳಿ ನಡುವಲಪಾಳ್ಯ, ಬ್ಯಾಡಿಗೆರೆ ಹಾಗೂ ಜವರೇಗೌಡನಪಾಳ್ಯ ಗ್ರಾಮ ದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ರಸ್ತೆ ಅಭಿವೃದ್ಧಿಯ ಅಂದಾಜು 5 ಕೋಟಿ ರೂಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾ, ಸಭಾಪತಿಗಳು ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರಿಗೆ ಸೂಚನೆ ನೀಡಿದ್ದು ಮುಂದಿನ ದಿನದಲ್ಲಿ ಸದನದ ಶಾಸಕರ ಪ್ರಶ್ನೆಗೆ ಶೀಘ್ರ ಉತ್ತರ ಕೊಡುವ ಕೆಲಸ ಆಗಲಿದೆ
ಒಂದು ತಿಂಗಳ ಕಾಲ ಉಪವಾಸ ಆಚರಿಸಿದ ಮುಸ್ಲಿಂ ಸಮಾಜದವರು ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆದ ಈದ್ ಆಚರಣೆಯ ಸಾಮೂಹಿಕ ಪ್ರಾರ್ಥನೆಯಲ್ಲಿ ನಮಾಜ್ ಮಾಡಿ ರಂಜಾನ್ ಹಬ್ಬಕ್ಕೆ ತೆರೆ ಎಳೆದರು. ಮೌಲ್ವಿಗಳು ಕುರಾನ್ ಪಠಣ ಮಾಡಿದರು. ಸಾಮೂಹಿಕ ಪ್ರಾರ್ಥನೆ ನಂತರ ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ತೈಲ ದರ ಭಾರಿ ಏರಿಕೆಯಾಗಿದೆ. ಇದರಿಂದ ದೇಶದಲ್ಲಿ ಪ್ರೀಮಿಯಂ ಪೆಟ್ರೋಲ್ ಮತ್ತು ಬಲ್ಕ್ ಡೀಸೆಲ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಹೀಗಾಗಿ ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ಏರಿಕೆಯಾಗುತ್ತಾ? ಎಂಬ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಏನು ಹೇಳಿದರು ಎಂಬ ಮಾಹಿತಿ ಇಲ್ಲಿದೆ.
ಹಲವಾರು ದಿನಗಳಿಂದ ಬುಕ್ಕಿಂಗ್ ಮಾಡಿದ್ದರೂ ಗ್ಯಾಸ್ ಸಿಗದ ಕಾರಣ ಮಹಿಳೆಯರು ಹಾಗೂ ಹಿರಿಯರು ಗೋಡೌನ್ ಮುಂದೆ ಸಾಲಿನಲ್ಲಿ ನಿಂತು ಕಾದು ಕುಳಿತಿರುವ ದೃಶ್ಯ ಕಂಡುಬಂದಿದೆ. “ಬುಕ್ ಮಾಡಿದರೂ ಗ್ಯಾಸ್ ಸಿಗುತ್ತಿಲ್ಲ. ದಿನಗಳಿಂದ ಕಾದರೂ ಸಿಲಿಂಡರ್ ಮನೆಗೆ ತಲುಪಿಲ್ಲ” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
Saptarishi Avahanam ritual: ಕಾಶಿ ವಿಶ್ವನಾಥ ದೇವಾಲಯದಲ್ಲಿ ನಡೆಯುವ ಮಾದರಿಯಲ್ಲಿ ವಸಂತಕಾಲದ ವಿಷುವತ್ ಸಂಕ್ರಾಂತಿಯ ಸುಸಂದರ್ಭದಲ್ಲಿ ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿರುವ ಯೋಗೇಶ್ವರ ಲಿಂಗದ ಸಾನ್ನಿಧ್ಯದಲ್ಲಿ 'ಸಪ್ತಋಷಿ ಆವಾಹನಂ' ಪ್ರಕ್ರಿಯೆಯನ್ನು ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಅರ್ಚಕರು ಶುಕ್ರವಾರ ನಡೆಸಿಕೊಟ್ಟಿದ್ದಾರೆ.
Chalavadi Narayanaswamy: ಹಿಂದೆ ಕಾಂಗ್ರೆಸ್ಸಿನಲ್ಲಿ ಮಂಡ್ಯ ಹೊರತುಪಡಿಸಿ ಇತರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಸಲ್ಮಾನ್ ಬಂಧುಗಳಿಗೇ ಟಿಕೆಟ್ ಕೊಡುತ್ತಿದ್ದರು. ಈಗ ಎಲ್ಲ ಕಡೆಯಲ್ಲಿ ಅವರಿಗೆ ಕಾಂಗ್ರೆಸ್ ಕೊಕ್ ಕೊಡುತ್ತ ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.