ಕೆಡಿಪಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ದಿಟ್ಟ ಧ್ವನಿ
ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.