ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು: ಸಿಇಒ ಡಾ.ವೈ.ನವೀನ್ ಭಟ್

ತ್ಯಾಜ್ಯ ಸಂಗ್ರಹಣಾ ಶುಲ್ಕ ವಸೂಲಿ ಕಡ್ಡಾಯ

44 ಘಟಕಗಳಲ್ಲಿ ಕಸವನ್ನು ವೈಜ್ಞಾನಿಕವಾಗಿ ವಿಂಗಡಿಸಿ, ನಿರ್ವಹಣೆ ಹಾಗೂ ವಿಲೇವಾರಿ ಮಾಡಲಾಗು ತ್ತಿದೆ. ಈ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿ ಯಾಗಿ ನಿರ್ವಹಿಸಲು ಗ್ರಾಮೀಣ ಭಾಗದ ಕುಟುಂಬ ಗಳು, ಅಂಗಡಿ-ಮುಂಗಟ್ಟುಗಳು, ಹೋಟೆಲ್‌ಗಳು ಹಾಗೂ ಇತರ ವಾಣಿಜ್ಯ ಕಟ್ಟಡಗಳಿಂದ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾತು ಕೊಟ್ಟರು… ರಸ್ತೆ ಮಂಜೂರು ಮಾಡಿಸಿದರು! ಯರ್ರನಾಗೇನಹಳ್ಳಿಯ ದಶಕಗಳ ಕನಸು ನನಸಾಗಿಸಿದ ಶಾಸಕ ಪ್ರದೀಪ್ ಈಶ್ವರ್

ಯರ್ರನಾಗೇನಹಳ್ಳಿಯ ದಶಕಗಳ ಕನಸು ನನಸಾಗಿಸಿದ ಶಾಸಕ ಪ್ರದೀಪ್ ಈಶ್ವರ್

ಯರ್ರನಾಗೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಬಹುದಿನಗಳ ರಸ್ತೆ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದರು. ದೇವಾಲಯದ ಬಳಿ ಗ್ರಾಮಸ್ಥರೊಂದಿಗೆ ಕುಳಿತು ಅವರ ಅಹವಾಲು ಆಲಿಸಿದ್ದ ಶಾಸಕ ಪ್ರದೀಪ್ ಈಶ್ವರ್, ರಸ್ತೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೆಲವೇ ತಿಂಗಳಲ್ಲಿ ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ‘ಕೊಟ್ಟ ಮಾತು ಉಳಿಸಿಕೊಂಡ ಶಾಸಕ’ ಎಂಬ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಆಗಸ್ಟ್‌ 30ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಆಗಸ್ಟ್‌ 30ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಐ ಐ ಎಸ್ ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಮಲ್ಲೇಶ್ವರಂ ವಿಭಾಗದ ಹಲವೆಡೆ ಆ.30ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ: ಶ್ರೀ ಮಧುಸೂಧನ್ ಸಾಯಿ

ತುಮಕೂರು ಜಿಲ್ಲೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ

Sadguru Sri Madhusudan Sai: ಶಿರಾ ತಾಲೂಕಿನ ಗಾಣದ ಹುಣಸೆಯಲ್ಲಿರುವ ಸತ್ಯ ಸಾಯಿ ಕಾರುಣ್ಯನಿಕೇತನದ ಗುರುಕುಲದ ಶಿಕ್ಷಣವನ್ನು ಪಿಯುಸಿವರೆಗೆ ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ್ ಸಾಯಿ ತಿಳಿಸಿದ್ದಾರೆ.

Chikkanayakanahalli Accident: ಚಿಕ್ಕನಾಯಕನಹಳ್ಳಿಯ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ನಾಲ್ವರ ಸಾವು, ಮೂವರಿಗೆ ಗಾಯ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Ramakrishna Hegde’s centenary: ನಾಳೆ ವಿಧಾನಸೌಧದಲ್ಲಿ 'ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ'; ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸೇರಿ ಗಣ್ಯರು ಭಾಗಿ

ನಾಳೆ ವಿಧಾನಸೌಧದಲ್ಲಿ 'ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ'

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆ.29ರಂದು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮಶತಮಾನೋತ್ಸವ ಆಯೋಜಿಸಲಾಗಿದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜನ್ಮಶತಮಾನೋತ್ಸವದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ. ಶಿವಕುಮಾರ್

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ. ಶಿವಕುಮಾರ್

CM DK Shivakumar: ಪೊಲೀಸರ ಆರ್ಥಿಕ ಅಗತ್ಯಗಳಿಗೆ ಮೊದಲು ಪ್ರಾಶಸ್ತ್ಯ ನೀಡಲಾಗುವುದು. ಗೃಹ ಇಲಾಖೆಯು ಪೊಲೀಸರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅನ್ನವೇ ದೇವರು, ಓಜಸ್ಸೇ ಜೀವಾಳ: ರಾಘವೇಶ್ವರ ಭಾರತೀ ಶ್ರೀ

ಅನ್ನವೇ ದೇವರು, ಓಜಸ್ಸೇ ಜೀವಾಳ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ತಾಯಿಯ ಗರ್ಭದಲ್ಲಿ ಜೀವಿಯ ಬೆಳವಣಿಗೆ ಆರಂಭವಾಗುವಾಗ ಮೊಟ್ಟ ಮೊದಲು ಓಜಸ್ಸಿನಿಂದ ಆ ಬೆಳವಣಿಗೆ ಆರಂಭವಾಗುತ್ತದೆ ಎಂದು ಚರಕ ಮಹರ್ಷಿಗಳು ದಾಖಲಿಸಿದ್ದು, ಓಜಸ್ಸು ಜೀವಿಯ ದೇಹದಲ್ಲಿರುವ ಅಮೃತದ್ರವವಾಗಿದೆ. ನಮ್ಮ ಹೃದಯ ಭಾಗದಲ್ಲಿರುವ ಈ ಓಜಸ್ಸು ಸುಮಾರು ಅರ್ಧ ಬೊಗಸೆ ಪ್ರಮಾಣದಲ್ಲಿ ಇರುತ್ತದೆ. ಜೀವ ಶಕ್ತಿಗೆ ಓಜಸ್ಸೇ ಮೂಲವಾಗಿದ್ದು, ಓಜಸ್ಸಿನ ನಾಶದಿಂದ ದೇಹ ನಾಶವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

B Nagendra Resignation: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

ವಿಪಕ್ಷಗಳ ಹೋರಾಟಕ್ಕೆ ಮಣಿದು ಕೊನೆಗೂ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಅಧಿವೇಶನದ ವೇಳೆ ಉಭಯ ಸದನಗಳಲ್ಲೂ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೋರಾಟ ನಡೆಸಿದ್ದರು. ಅಲ್ಲದೆ ಸೆ.1ರಿಂದ 10ರವರೆಗೆ ಪಾದಯಾತ್ರೆ ನಡೆಸಲು ಬಿಜೆಪಿ ತೀರ್ಮಾನಿಸಿತ್ತು.

ಪ.ಜಾತಿ, ಪ.ಪಂಗಡದ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ: ಪಿ. ಚಿಕ್ಕರಂಗಪ್ಪ

ಎಸ್‌ಸಿ, ಎಸ್‌ಟಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶ

Madhugiri News: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೌಕರರಿಗೆ ಸಂವಿಧಾನ ಬದ್ದವಾಗಿ ಕಾಲಕಾಲಕ್ಕೆ ದೊರಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಐಕ್ಯತಾ ಸಮಾವೇಶಕ್ಕೆ ತೆರಳುತ್ತಿರುವುದಾಗಿ ತಾಲೂಕು ಎಸ್.ಸಿ-ಎಸ್.ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಪಿ. ಚಿಕ್ಕರಂಗಪ್ಪ ತಿಳಿಸಿದ್ದಾರೆ.

Save Water: ನೀರಿನ ಮೀಟರ್ ಅಳವಡಿಸಿ ಪೋಲು ತಡೆಗಟ್ಟಿ: ಡಾ.ಎನ್.ಮಂಜುಳಾ

ನೀರಿನ ಮೀಟರ್ ಅಳವಡಿಸಿ ಪೋಲು ತಡೆಗಟ್ಟಿ: ಡಾ.ಎನ್.ಮಂಜುಳಾ

ಯೋಜಿತ ರೀತಿಯಲ್ಲಿ ನೀರು ಪೂರೈಸುವುದರ ಜೊತೆಗೆ ಬಳಕೆಯನ್ನು ನಿಯಂತ್ರಿಸಲು ಹಾಗೂ ಅನಗತ್ಯ ವಾಗಿ ನೀರು ಪೋಲಾಗುವುದನ್ನು ತಡೆಯಲು ಮೀಟರ್ ಅಳವಡಿಕೆ ಪರಿಣಾಮಕಾರಿ ಕ್ರಮವಾಗಿದೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಬಳಕೆಯ ಆಧಾರದ ಮೇಲೆ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರಬೇಕು

ಅಧಿಕಾರಿಗಳಿಗೆ ರಾಖಿ ಕಟ್ಟಿ ರಕ್ಷಾಬಂಧನದ ಮಹತ್ವ ಸಾರಿದ ಬ್ರಹ್ಮಕುಮಾರಿ ಹೇಮಾ ಅಕ್ಕ

ಅಧಿಕಾರಿಗಳಿಗೆ ರಕ್ಷಾಬಂಧನದ ಮಹತ್ವ ಸಾರಿದ ಬ್ರಹ್ಮಕುಮಾರಿ ಹೇಮಾ ಅಕ್ಕ

ರಕ್ಷಾಬಂಧನವು ಸಹೋದರ-ಸಹೋದರಿ ಯರ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿ ಸುವ ವಿಶೇಷ ದಿನವಾಗಿದೆ. ಆದರೆ ಇದರ ಸಂದೇಶ ಕೇವಲ ಕುಟುಂಬದ ಸಂಬಂಧಗಳಿಗೆ ಸೀಮಿತ ವಾಗಿಲ್ಲ. ಪ್ರತಿಯೊಬ್ಬ ಮನುಷ್ಯನ ನಡುವೆಯೂ ಪ್ರೀತಿ, ವಾತ್ಸಲ್ಯ, ಜವಾಬ್ದಾರಿ, ಕರ್ತವ್ಯ ಹಾಗೂ ಆತ್ಮೀಯತೆಯ ಸಂಬಂಧ ಬೆಳೆಸುವ ಮಹತ್ವವನ್ನು ಈ ಹಬ್ಬ ಸಾರುತ್ತದೆ

ಸಾಕು ನಾಯಿಯೊಂದಿಗೆ ಜಗಳವಾಡಿದ ಬೀದಿ ನಾಯಿಯನ್ನು ಕೊಂದೇ ಬಿಟ್ಟ ಪಾಪಿ; ಶಿವಮೊಗ್ಗದಲ್ಲೊಂದು ಹೃದಯ ವಿದ್ರಾವಕ ಘಟನೆ

ಬೀದಿ ನಾಯಿಯನ್ನು ಕೊಂದ ವ್ಯಕ್ತಿಯ ಬಂಧನ

shivamogga crime: ಪರವಾನಿಗೆ ಇಲ್ಲದ ಬಂದೂಕಿನಿಂದ ಬೀದಿ ನಾಯಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದಿದೆ. ಸಾಗರ ತಾಲೂಕಿನ‌ ನಾಡವಳ್ಳಿ ಗ್ರಾಮದ ನಿವಾಸಿ ಲಿಂಗಮೂರ್ತಿ ಬಂಧಿತ ಆರೋಪಿಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

B Nagendra Resignation: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ನನ್ನ ವಿರುದ್ಧ ಕುತಂತ್ರ ನಡೆದಿದೆ ಎಂದು ಕಣ್ಣೀರು

ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ

valmiki corporation scam: ಶೂದ್ರರು, ದಲಿತರು, ಮಹಿಳೆಯರು, ಆದಿವಾಸಿಗಳು ಸ್ವತಂತ್ರವಾಗಿ ಬದುಕಬಾರದು ಎಂಬುವುದು ಬಿಜೆಪಿಯವರ ಉದ್ದೇಶ. ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನನ್ನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ. ಕುಮಾರಸ್ವಾಮಿಗೊಂದು ನ್ಯಾಯ, ನನಗೊಂದು ನ್ಯಾಯಾನಾ? ಕುಮಾರಸ್ವಾಮಿ ವಿರುದ್ಧ ತನಿಖೆಗೆ ಯಾಕೆ ರಾಜ್ಯಪಾಲರು ಅನುಮತಿ ನೀಡಿಲ್ಲ? ಎಂದು ಸಚಿವ ಬಿ.ನಾಗೇಂದ್ರ ಪ್ರಶ್ನಿಸಿದ್ದಾರೆ.

Suspiciousgroup in Gauribidanur: ಅನುಮಾನಾಸ್ಪದ ಗುಂಪು; ಪೊಲೀಸರಿಂದ ವಿಚಾರಣೆ: ಗುರುತಿನ ದಾಖಲೆಗಳ ನೈಜತೆ ಪರಿಶೀಲನೆಗೆ ಸಾರ್ವಜನಿಕರ ಆಗ್ರಹ

ಅನುಮಾನಾಸ್ಪದ ಗುಂಪು; ಪೊಲೀಸರಿಂದ ವಿಚಾರಣೆ

ಮಹಿಳೆಯರು, ವೃದ್ಧರು, ಮಕ್ಕಳು ಹಾಗೂ ಯುವಕರನ್ನು ಒಳಗೊಂಡಿದ್ದ ಗುಂಪಿನ ಚಲನವಲನ ದ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕೆಲ ಯುವಕರು ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಗುಂಪಿನಲ್ಲಿದ್ದ ಮಹಿಳೆಯರು ಮತ್ತು ವೃದ್ಧರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು

Ex-serviceman attempts suicide: ಕಾನೂನಿನಂತೆ ಜಮೀನು ಮಂಜೂರು ಮಾಡದ ಅಧಿಕಾರಿಗಳು: ಮಾಜಿ ಸೈನಿಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!

ಮಾಜಿ ಸೈನಿಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!

ಅಧಿಕಾರಿಗಳು ಕಾನೂನಿನಂತೆ ಜಮೀನು ಮಂಜೂರು ಮಾಡಿಲ್ಲ.ಕಳೆದ 20 ವರ್ಷ ಗಳಿಂದ ಹೋರಾಟ ಮಾಡುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ  ಎಂದು ಆರೋಪಿಸಿ ಮಾಜಿ ಸೈನಿಕ  ಶಿವಾನಂದರೆಡ್ಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದಿದೆ

U T Khader: ಹಜರತ್ ಅಮ್ಮಜಾನ್-ಬಾಬಾಜಾನ್ ದರ್ಗಾದಲ್ಲಿ ಉರುಸ್ ಸಂಭ್ರಮ: ಸಚಿವ ಯು.ಟಿ.ಖಾದರ್ ಚಾದರ್ ಸಮರ್ಪಣೆ

ಆರೋಗ್ಯ ಸಚಿವ ಯು.ಟಿ.ಖಾದರ್ ಮುರುಗಮಲ್ಲ ದರ್ಗಾಕ್ಕೆ ಭೇಟಿ

ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು"ಚಾರಿತ್ರಿಕ ಹಾಗೂ ಪವಿತ್ರ ವಾದ ಹಜರತ್ ಅಮ್ಮಜಾನ್-ಬಾಬಾಜಾನ್ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿರುವುದು ಅತ್ಯಂತ ಸಂತೋಷ ತಂದಿದೆ.ಭಗವಂತನ ಕೃಪೆಯಿಂದ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಮನಃ ಶಾಂತಿ, ಸಮುದಾಯದ ಏಳಿಗೆ, ಕರ್ನಾಟಕದ ಅಭಿವೃದ್ಧಿ ಹಾಗೂ ಬಲಿಷ್ಠ ಭಾರತಕ್ಕಾಗಿ ಪ್ರಾರ್ಥನೆ ಮಾಡಿದ್ದೇನೆ ಎಂದರು

ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರ ಸಾವು

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ; ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸಾವು

Madhya Pradesh Bus Accident: ಮಧ್ಯಪ್ರದೇಶದ ರಾಜ್‌ಗಢದ ಬಿಯೋರಾದ ಭೋಪಾಲ್ ಬೈಪಾಸ್‌ ರಸ್ತೆಯಲ್ಲಿ ಅಪಘಾತ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Gauribidanur News: ಶ್ರೀ ಮಹೇಶ್ವರಮ್ಮ ದೇವಿಯ ವಾರ್ಷಿಕೋತ್ಸವ ಯಶಸ್ವಿ

Gauribidanur News: ಶ್ರೀ ಮಹೇಶ್ವರಮ್ಮ ದೇವಿಯ ವಾರ್ಷಿಕೋತ್ಸವ ಯಶಸ್ವಿ

ಆ. 24ರಂದು ದೇವಾಲಯ ಪ್ರವೇಶ, ಪಂಚಾಮೃತಾಭಿಷೇಕ, ಗಣಪತಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಸಂಜೆ ವಿಶೇಷ ಸಹಸ್ರ ಕುಂಕುಮಾರ್ಚನೆ ಆಯೋಜಿಸಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಆ.25ರಂದು ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ, ಮಹಾಗಣಪತಿ ಹೋಮ, ನವಗ್ರಹ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು.

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ ಶಿಕ್ಷಕರ ಅಮಾನತು: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ ಶಿಕ್ಷಕರ ಅಮಾನತಿಗೆ ಜೋಶಿ ಕಿಡಿ

Two Teachers Suspended: ಆರ್‌ಎಸ್‌ಎಸ್ ಮೆರವಣಿಗೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಅಮಾನತುಗೊಳಿಸುವ ಮೂಲಕ ಕರ್ನಾಟಕ ಸರ್ಕಾರವು ದ್ವೇಷದಿಂದ ವರ್ತಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

MUDA case: 2019 ರಿಂದ 2023ರ ಅವಧಿಯಲ್ಲಿ ಹಂಚಿಕೆಯಾದ ಎಲ್ಲಾ ಮುಡಾ ಸೈಟ್‌ಗಳು ರದ್ದು!

2019 ರಿಂದ 2023ರ ಅವಧಿಯಲ್ಲಿ ಹಂಚಿಕೆಯಾದ ಮುಡಾ ಸೈಟ್‌ಗಳು ರದ್ದು!

Mysuru News: ರಸ್ತೆ ನಿರ್ಮಾಣಕ್ಕೆ ತಮ್ಮ ಜಮೀನು ನೀಡಿ ಈಗಾಗಲೇ ಪರಿಹಾರ ಪಡೆದುಕೊಂಡಿದ್ದ ಮಾಲೀಕರು ಸಹ ಮುಡಾದಿಂದ ಮತ್ತೆ ನಿವೇಶನಗಳನ್ನು ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು 2018ಕ್ಕಿಂತ ಮೊದಲು ಹಂಚಿಕೆಯಾದ ನಿವೇಶನಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದ್ದು, ಅಲ್ಲೂ ಅಕ್ರಮಗಳು ನಡೆದಿರುವುದು ಕಂಡುಬಂದರೆ ಆ ಸೈಟುಗಳನ್ನೂ ಸಹ ರದ್ದುಗೊಳಿಸುವುದಾಗಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

AEE Recruitment Scam: ಗ್ರಾಮೀಣಾಭಿವೃದ್ಧಿ ಇಲಾಖೆಯ ಎಇಇ ನೇಮಕಾತಿಯಲ್ಲಿ ಬೃಹತ್ ಅಕ್ರಮ; ಮಹತ್ವದ ದಾಖಲೆ ಬಿಡುಗಡೆ ಮಾಡಿದ ಎಚ್‌ಡಿಕೆ

ಎಇಇ ನೇಮಕಾತಿಯಲ್ಲಿ ಅಕ್ರಮ; ದಾಖಲೆ ಬಿಡುಗಡೆ ಮಾಡಿದ ಎಚ್‌ಡಿಕೆ

KPSC Scam: ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಜವಾಬ್ದಾರಿ ಹೊರಬೇಕು ಹಾಗೂ ಸಚಿವ ಸ್ಥಾನಕ್ಕೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಅಕ್ರಮಕ್ಕೆ ಸಂಬಂಧಿಸಿ ಅವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ; ಡಿಸಿ ಕಚೇರಿ ಮುಂದೆ ರೈತರಿಂದ ರಸ್ತೆ ತಡೆ

ಕಲಬುರಗಿ ಜಿಲ್ಲೆ ಬರಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ

Kalaburagi News: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ 1,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಬೇಕು ಅಥವಾ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ (SKM) ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Raksha Bandhan Celebration: ಪ್ರಜ್ವಲ್ ವಿದ್ಯಾನಿಕೇತನ್ ಶಾಲೆಯಲ್ಲಿ ರಕ್ಷಾ ಬಂಧನ ಹಬ್ವದ ಸಂಭ್ರಮ

ಪ್ರಜ್ವಲ್ ವಿದ್ಯಾನಿಕೇತನ್ ಶಾಲೆಯಲ್ಲಿ ರಕ್ಷಾ ಬಂಧನ ಹಬ್ವದ ಸಂಭ್ರಮ

ಸಂಸ್ಥಾಪಕಿ ಹಾಗೂ ಯೋಗ ಮತ್ತು ಅಂತಃಪ್ರಜ್ಞೆ ಗುರು ಶ್ರೀಮತಿ ಅಂಬಿಕಾ ಸಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಜ್ವಲ್ ವಿದ್ಯಾನಿಕೇತನ್ ಶಾಲೆಯ 500ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಭಾಗವಹಿಸಿದ್ದರು. ಸಹೋದರ-ಸಹೋದರಿಯರ ನಡುವಿನ ಪವಿತ್ರ ಬಾಂಧವ್ಯ ಸಾರುವ ರಕ್ಷಾ ಬಂಧನದ ಮಹತ್ವವನ್ನು ಮಕ್ಕಳಿಗೆ ತಿಳಿಸಲಾಯಿತು.

Loading...