ವಂಟಮೂರಿ ಮಹಿಳೆಗೆ ಹಲ್ಲೆ ಕೇಸ್; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ
Vantamuri case: 2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.