ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ದೊಡ್ಡಮ್ಮತಾಯಿ ದೇವರ ಪ್ರಧಾನ ಅರ್ಚಕರಿಗೆ ಪುಷ್ಪವೃಷ್ಟಿಯ ನಡುವೆ ಭಕ್ತಿ ಸಮರ್ಪಣೆ

ನರನೇ ನಾರಾಯಣನಾದಂತೆ ನಡೆದ ಸುರೇಶ್‌ಸ್ವಾಮಿಗಳ ಹುಟ್ಟುಹಬ್ಬ ಸಂಭ್ರಮ

ತಾಲೂಕಿನ ಅಲಾಸ್ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಕ್ತಿಸ್ವರೂಪಿಣಿ ದೊಡ್ಡಮ್ಮತಾಯಿಯ ದೂತನಂತೆಯೇ ಭಾವಿಸ ಲ್ಪಡುವ ಸುರೇಶ್‌ಸ್ವಾಮಿಗಳ ಹುಟ್ಟುಹಬ್ಬವನ್ನು ಪ್ರತಿ ವರ್ಷ ಜೂ.20ರಂದು ಸಮಾಜಸೇವೆಯ ರೂಪದಲ್ಲಿ ಆಚರಿಸಿಕೊಂಡು ಬರುತ್ತಿರುವುದು ಭಕ್ತರಲ್ಲಿ ವಿಶೇಷ ಭಾವನಾತ್ಮಕ ಬಂಧವನ್ನು ಮೂಡಿಸಿದೆ.

ಸಮಯಕ್ಕೆ ಸರಿಯಾಗಿ ಬಾರದ ಕಾರ್ಯಕರ್ತೆ : ಅಂಗನವಾಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಆಕ್ರೋಶ

ಬಿ.ವಡ್ಡಹಳ್ಳಿ ಅಂಗನವಾಡಿ ಎದುರು ಧರಣಿ

ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮ ಹಾಗೂ ಸಹಾಯಕಿ ನಡುವೆ ದೀರ್ಘಕಾಲದಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳು ನಡೆಯುತ್ತಿದ್ದು, ಇದರಿಂದಾಗಿ ಅಂಗನವಾಡಿ ಕೇಂದ್ರದ ದೈನಂದಿನ ಕಾರ್ಯಕಲಾಪಗಳಿಗೆ ತೀವ್ರ ಹಿನ್ನಡೆಯಾಗಿದೆ. ಇವರಿಬ್ಬರ ಆಂತರಿಕ ಕಲಹ ದಿಂದಾಗಿ ಕೇಂದ್ರಕ್ಕೆ ಬೀಗ ಹಾಕಿ ಹೋಗಿರುವ ಘಟನೆಯೂ ನಡೆದಿದೆ

ಘನತ್ಯಾಜ್ಯದಿಂದ ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ: ಜೋಶಿ

ʼಹಸಿರು ಇದ್ದಿಲುʼ ಉತ್ಪಾದನಾ ಘಟಕ ಹುಬ್ಬಳ್ಳಿಯಲ್ಲಿ ಶೀಘ್ರ ಆರಂಭ

Pralhad Joshi: ದೇಶದಲ್ಲಿ ವಾರಣಾಸಿ ಬಿಟ್ಟರೆ ಹುಬ್ಬಳ್ಳಿಯಲ್ಲೇ ಘನ ತ್ಯಾಜ್ಯ ಸಂಸ್ಕರಣಾ "ಹಸಿರು ಇದ್ದಿಲು" ಉತ್ಪಾದಿಸುವ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪಿಸಿದೆ. ಇದರಿಂದ ಮಹಾನಗರದ ಕಸಕ್ಕೆ ಮುಕ್ತಿ ದೊರೆಯಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Actor Vinod Prabhakar: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ಇತ್ತೀಚೆಗೆ ತಮ್ಮ ಬಹುನಿರೀಕ್ಷಿತ 'ಬಲರಾಮ' ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಟ ವಿನೋದ್ ಪ್ರಭಾಕರ್ ತೊಡಗಿಸಿಕೊಂಡಿದ್ದರು. ಈ ನಡುವೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಸದ್ಯ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Chikkaballapur News: ನಂದಿಗಿರಿಧಾಮದ ಸೂರ್ಯೋದಯದ ಸೊಬಗಿನಲ್ಲಿ ಯಶಸ್ವಿಯಾದ ‘ಕಲಾ ನಡಿಗೆ ನಿಮ್ಮ ಬಳಿಗೆ’ ಕಾರ್ಯಕ್ರಮ

ಯಶಸ್ವಿಯಾದ ‘ಕಲಾ ನಡಿಗೆ ನಿಮ್ಮ ಬಳಿಗೆ’ ಕಾರ್ಯಕ್ರಮ

ಸರ್ಕಾರದ ಆಶಯದಂತೆ ಜನಸಾಮಾನ್ಯರ ಬಳಿಗೆ ಸಾಂಪ್ರದಾಯಿಕ ಹಾಗೂ ವೈವಿಧ್ಯಮಯ ಕಲಾ ಪ್ರಕಾರಗಳನ್ನು ಕೊಂಡೊಯ್ಯುವ ಉದ್ದೇಶದಿಂದ “ಕಲಾ ನಡಿಗೆ ಜನರ ಬಳಿಗೆ” ಯೋಜನೆಯನ್ನು ರೂಪಿಸಲಾಗಿದೆ. ಪ್ರವಾಸಿ ತಾಣಗಳು, ಉದ್ಯಾನವನಗಳು, ಮಾಲ್‌ಗಳು ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಪ್ರತಿ ತಿಂಗಳು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಕಲಾವಿದರಿಗೆ ವೇದಿಕೆ ಕಲ್ಪಿಸುವ ಜೊತೆಗೆ ಜನರಲ್ಲಿ ನಮ್ಮ ಸಂಸ್ಕೃತಿಯ ಅರಿವು ಮೂಡಿಸುವ ಪ್ರಯತ್ನವನ್ನು ಮಾಡಲಾತ್ತಿದೆ

Bengaluru Rains: ಬೆಂಗಳೂರಿನಲ್ಲಿ ಮಳೆ ಆರ್ಭಟ; ಕೆರೆಗಳಂತಾದ ರಸ್ತೆಗಳು, ವೈಟ್‌ಫೀಲ್ಡ್‌ನಲ್ಲಿ ಮುಳುಗಿದ ವಾಹನಗಳು!

ಬೆಂಗಳೂರಿನಲ್ಲಿ ಮಳೆ ಆರ್ಭಟ; ವೈಟ್‌ಫೀಲ್ಡ್‌ನಲ್ಲಿ ಮುಳುಗಿದ ವಾಹನಗಳು!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಹೊತ್ತಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Gauribidanur News: ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಪುಸ್ತಕ ವಿತರಣೆ ಹಾಗೂ ಸಸಿಗಳು ನೆಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಜೆಬಿಎಂ ಒಗಿಹಾರಾ ಆಟೋಮೊಟಿವ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಹಿರಿಯ ವ್ಯವಸ್ಥಾಪಕ (ಮಾನವ ಸಂಪನ್ಮೂಲ ವಿಭಾಗ) ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಅರುಣ್ ಕುಮಾರ್ ಲೇಪಾಕ್ಷಿ ಅವರು ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಾಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಬರುತ್ತಿದ್ದಾರೆ.

Anganwadi worker attacked: ಬಿ.ವಡ್ಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಜೀವ ಬೆದರಿಕೆ!

ಬಿ.ವಡ್ಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ

ಅಕ್ರಮ ಗುಂಪು ಕಟ್ಟಿಕೊಂಡು ಸ್ಥಳಕ್ಕೆ ಬಂದು, ನನ್ನನ್ನು ಸರ್ಕಾರಿ ಕೆಲಸ ಮಾಡದಂತೆ ಅಡ್ಡಿಪಡಿಸಿ, ನನ್ನನ್ನು ಕುರಿತು ನೀನು ಇಲಿ. ಕೆಲಸ ಮಾಡಬಾರದು, ನಾವು ಎಷ್ಟು ಹಿಂಸೆ ಕೊಟ್ಟರು ನೀನು ಇಲಿಯೇ ಕೆಲಸ ಮಾಡಿಕೊಂಡಿದ್ದೀಯ ಎಂದು ಧಮ್ಕಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಗ್ರಾಮಾಂತರ ಠಾಣೆ ಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿವರಿಸಲಾಗಿದೆ

Shidlaghatta News: ಅಕ್ಷರಾಭ್ಯಾಸಕ್ಕೆ ಪೇಜಾವರ ಶ್ರೀಗಳ ಆಶೀರ್ವಾದ; ನೂತನ ಕಟ್ಟಡ ಉದ್ಘಾಟನೆ

ಅಕ್ಷರಾಭ್ಯಾಸಕ್ಕೆ ಪೇಜಾವರ ಶ್ರೀಗಳ ಆಶೀರ್ವಾದ

ಮಕ್ಕಳ ಜೀವನದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮೌಲ್ಯಗಳ ಬೆಳವಣಿಗೆಯೂ ಅತ್ಯಂತ ಮುಖ್ಯ ವಾಗಿದೆ. ಅಕ್ಷರಾಭ್ಯಾಸವು ಶಿಕ್ಷಣ ಜೀವನದ ಮೊದಲ ಹೆಜ್ಜೆಯಾಗಿದ್ದು, ಭವಿಷ್ಯದ ಸುಂದರ ಬದುಕಿಗೆ ಭದ್ರ ಬುನಾದಿ ಹಾಕುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ

ಅಡ್ಡ ಮತದಾನ ಮಾಡಿರೋದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ: ಜೋಶಿ

Pralhad Joshi: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ತಮಗೆ ತಿಳಿದಿಲ್ಲ. ಆ ಬಗ್ಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Karnataka Urdu Literary Council: ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ: ಮೊಹಮ್ಮದ್ ನಾಸೀರ್

ಉರ್ದು ಶಾಲೆಗಳ ಉಳಿವಿಗೆ ಪೋಷಕರ ಸಹಕಾರ ಅತ್ಯಗತ್ಯ

ಉರ್ದು ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೇವೆ ಸಲ್ಲಿಸಲು ತಾವು ಸದಾ ಸಿದ್ಧನಿರುವುದಾಗಿ ಅವರು ಭರವಸೆ ನೀಡಿದರು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಪೋಷಕರು ಸರ್ಕಾರ ನೀಡುವ ಹಲವಾರು ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಕಡ್ಡಾಯ; ರಾಜ್ಯ ಸರ್ಕಾರದ ನಿರ್ಧಾರಕ್ಕೆ ಜೋಶಿ ಆಕ್ಷೇಪ

ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಕಡ್ಡಾಯ ಕಾನೂನು ಬಾಹಿರ

Ration Card: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅವರ ಆರ್ಥಿಕ ಸ್ಥಿತಿ ಮತ್ತು ಅರ್ಹತೆ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೆ ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಆಧಾರ್, ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಗಳ ಯಶಸ್ವಿ ಏಕೀಕರಣದ ಹೊರತಾಗಿಯೂ ʼಜಾತಿ ಪ್ರಮಾಣ ಪತ್ರʼ ಕಡ್ಡಾಯಗೊಳಿಸುವುದರ ಹಿಂದಿನ ಉದ್ದೇಶವೇನು? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Bengaluru Power Cut: ಜೂನ್‌ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಜೂನ್‌ 22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜೂನ್‌ 22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ; ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ಬಿ.ಎಲ್.ಡಿ.ಇ ಸಂಸ್ಥೆಯ 94 ವಿದ್ಯಾರ್ಥಿಗಳು ನೈಡೆಕ್ ಕಂಪನಿಗೆ ಆಯ್ಕೆ

MB Patil: ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ.

MLC Election: ಮತ ಕೊಟ್ಟರೆ ಕಿಸೆಗೆ 50 ಕೋಟಿ, ಕ್ಷೇತ್ರಕ್ಕೆ 100 ಕೋಟಿ ಅನುದಾನದ ಆಮಿಷ: ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ಆರೋಪ

ಅಡ್ಡ ಮತದಿಂದ ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗಲ್ಲ: ಎಚ್‌ಡಿಕೆ

ಪರಿಷತ್ ಚುನಾವಣೆ ಮುಂದಿನ ವಿಧಾನಸಭೆಗೆ ದಿಕ್ಸೂಚಿ ಅಲ್ಲ ಎಂಬ ಮಾತನ್ನು ನಾನು ಒತ್ತಿ ಒತ್ತಿ ಹೇಳಬಯಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಮಿತ್ರಪಕ್ಷಗಳು ಒಟ್ಟಾಗಿ ಜನರ ಮುಂದೆ ಹೋಗುತ್ತೇವೆ. ನಮ್ಮ ನಡುವೆ ಯಾವುದೇ ರೀತಿಯ ಹೊಂದಾಣಿಕೆಯ ಕೊರತೆಯಾಗಲಿ, ವಿಶ್ವಾಸದ ಕೊರತೆಯಾಗಲಿ ಇಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಏಕೆ ಪತ್ರಿಕಾಗೋಷ್ಠಿ ನಡೆಸಲ್ಲ? ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಸಂಸದ ತೇಜಸ್ವಿ ಸೂರ್ಯ ಉತ್ತರ

ಮೋದಿ ಏಕೆ ಪತ್ರಿಕಾಗೋಷ್ಠಿ ನಡೆಸಲ್ಲ ಎಂದು ತಿಳಿಸಿದ ಸಂಸದ ತೇಜಸ್ವಿ ಸೂರ್ಯ

Student Questions MP Tejasvi Surya: ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕಾರಾವಧಿಯಲ್ಲಿ ಇಲ್ಲಿಯವರೆಗಿನ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸದೇ ಇರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾರಣ ನೀಡಿದ್ದಾರೆ. ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

Bidadi Township: ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ. ಶಿವಕುಮಾರ್

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ. ಶಿವಕುಮಾರ್

CM DK Shivakumar: ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಎಐ(ಕೃತಕ ಬುದ್ಧಿಮತ್ತೆ) ವೃತ್ತಿಗಳ ಮರುರೂಪಣೆ: WPU ಗೋವಾದಿಂದ ಉನ್ನತ ಶಿಕ್ಷಣಕ್ಕೆ ಒಂದು ಬಹುವಿಷಯ ದೃಷ್ಟಿಕೋನ

WPU ಗೋವಾದಿಂದ ಉನ್ನತ ಶಿಕ್ಷಣಕ್ಕೆ ಒಂದು ಬಹುವಿಷಯ ದೃಷ್ಟಿಕೋನ

ವಿದ್ಯಾರ್ಥಿಗಳನ್ನು ಅವರ ಮೊದಲ ಉದ್ಯೋಗಕ್ಕೆ ತಯಾರುಗೊಳಿಸಿರೆ ಸಾಲದು ಎಂಬುದನ್ನು ಈಗ ವಿಶ್ವವಿದ್ಯಾಲಯಗಳಿಗೆ ಮನವರಿಕೆಯಾಗಿದೆ.” ಎಂದು ಹೇಳಿದ WPU ಗೋವಾದ ಪ್ರೊ ಉಪಕುಲಪತಿ ಡಾ.ಆಶೀಶ್ ಭಾರದ್ವಾಜ್, “ಇಲ್ಲಿರುವ ಮುಖ್ಯ ಪ್ರಶ್ನೆ ಎಂದರೆ ನಾವು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಎದುರಿಸಬಹುದಾದ ಅನೇಕ(ಬಹು) ಬದಲಾವಣೆಗಳು, ಪರಿವರ್ತನೆಗಳು ಮತ್ತು ಅವಕಾಶಗಳಿಗೆ ಅವರನ್ನು ತಯಾರುಗೊಳಿಸುತ್ತಿದ್ದೇವೆಯೇ ಎಂಬುದು.

Cabinet Meaning: ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ 'ಪ್ರಜಾಸೇವೆ ಇಲಾಖೆ' ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಜನರ ಕುಂದುಕೊರತೆ ನಿವಾರಣೆಗೆ 'ಪ್ರಜಾಸೇವೆ ಇಲಾಖೆ' ಸ್ಥಾಪನೆ: ಸಿಎಂ

ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ನೇತೃತ್ವದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಯಾದಗಿರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 620 ನೂತನ ಬಸ್ ಖರೀದಿ, ಕರ್ನಾಟಕದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ ಸೇರಿ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್‌ ಕೈಗೊಂಡಿದೆ.

Museum of Art & Photography: ಕಲೆಯ ಭೂಪಟ ಬಿಡಿಸಿದ ಮ್ಯೂಸಿಯಂ

ಕಲೆಯ ಭೂಪಟ ಬಿಡಿಸಿದ ಮ್ಯೂಸಿಯಂ

Pravasi Prapancha: ಐಟಿ ಬೆಳವಣಿಗೆ ಹಾಗೂ ತಂತ್ರಜ್ಞಾನಕ್ಕೆ ಜಗತ್ಪ್ರಸಿದ್ಧವಾಗಿರುವ ಬೆಂಗಳೂರು ನಗರದ ಹೃದಯಭಾಗದಲ್ಲಿ, ಒಂದು ವಿಭಿನ್ನ ರೀತಿಯ ಮ್ಯೂಸಿಯಂ ತಲೆಯೆತ್ತಿ ನಿಂತಿದೆ. 'ಮ್ಯೂಸಿಯಂ ಆಫ್ ಆರ್ಟ್ & ಫೊಟೋಗ್ರಫಿ' (MAP), ಪ್ರಾಚೀನ ಸಂಪ್ರದಾಯ ಹಾಗೂ ಆಧುನಿಕ ಡಿಜಿಟಲ್ ತಂತ್ರಜ್ಞಾನದ ಅದ್ಭುತ ಸಂಗಮವಾಗಿದೆ. ಈ ಮ್ಯೂಸಿಯಂನ ಕುರಿತಾದ ಒಂದು ಸಮಗ್ರ ಇಣುಕು ನೋಟ ಇಲ್ಲಿದೆ.

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

MLC Election: ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ; ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಎಚ್‌ಡಿಕೆ ಕಿಡಿ

ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗಿ: ಎಚ್‌ಡಿಕೆ ಕಿಡಿ

HD Kumaraswamy: ನಮ್ಮ ಪಕ್ಷದಲ್ಲಿ ಭವಿಷ್ಯ ಇಲ್ಲ ಅಂತ ಮನಸ್ಸಿನಲ್ಲಿದ್ದರೆ, ನಾನು ತೊಂದರೆ ಕೊಡಲ್ಲ. ಕಾಂಗ್ರೆಸ್‌ ಪಕ್ಷಕ್ಕೆ ಹೋಗಬೇಕು ಎಂದರೆ ಧೈರ್ಯವಾಗಿ ನನಗೆ ಹೇಳಿ ಹೋಗಿ ಎಂದು ಅಡ್ಡ ಮತದಾನ ಮಾಡಿದವರ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ

ಹುಬ್ಬಳ್ಳಿ- ಗೋಲಗುಂಬಜ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ

MB Patil: ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಮತ್ತು ಗದಗ ಬೈಪಾಸ್‌ಗಳ ಮೂಲಕ ಓಡಿಸಲು ರೈಲ್ವೆ ಮಂಡಳಿ ಶುಕ್ರವಾರ ಒಪ್ಪಿಗೆ ನೀಡಿದ್ದು, ಇದರಿಂದ ವಿಜಯಪುರ, ಬಾಗಲಕೋಟೆ ಭಾಗದ ಜನರ ಬಹು ದಿನಗಳ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.

Gold Price Today On 20 June 2026: ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಇಷ್ಟು

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Gold Silver Price Today: ಚಿನ್ನದ ದರ ಶನಿವಾರ (ಜೂನ್‌ 20) ಮತ್ತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 20 ರುಪಾಯಿ ಏರಿಕೆಯಾಗಿದ್ದು, 13,390 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 22 ರುಪಾಯಿ ಹೆಚ್ಚಾಗಿದ್ದು, 14,608 ರುಪಾಯಿ ಇದೆ.

Loading...