ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bike Taxi Service: ರ‍್ಯಾಪಿಡೋ, ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

ರ‍್ಯಾಪಿಡೋ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ

Bike Taxi Service: ರಾಜ್ಯ ಸಾರಿಗೆ ಸಂಘಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಏ.2ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಸರ್ಕಾರ ಆದೇಶ ಹೊರಡಿಸಿದೆ.

Chikkaballapur News: ಸಾಧನೆ ಎಂಬುದು ದಣಿವಿರದ ಪ್ರಯಾಣ, ಯಶಸ್ಸು ಇದರ ನಿಲ್ದಾಣ : ಕೆ.ವಿ.ನವೀನ್‌ಕಿರಣ್

ಸಾಧನೆ ಎಂಬುದು ದಣಿವಿರದ ಪ್ರಯಾಣ

ವಿದ್ಯಾರ್ಥಿ ಜೀವನದಲ್ಲಿ ಮಾಡುವ ಸಾಧನೆಗೆ ಸೋಲಿಲ್ಲ ಎಂಬ ಮಾತನ್ನು ಒಪ್ಪಿದರೂ ಕೂಡ, ಅಂಕಗಳ ಸಾಧನೆಗಿಂತ ಅಂತರಂಗದ ಸಾಧನೆಗೆ ಅಂದರೆ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಬೆಲೆಯಿದೆ. ಉತ್ತಮ ಫಲಿತಾಂಶದ ಸಾಧನೆ ಬದುಕಿನ ಭಾಗವೇ ಆದರೂ ಜವಾಬ್ದಾರಿಯುತ ನಾಗರೀಕರಾಗಿ ಬೆಳೆದಾಗ ಮಾತ್ರವೇ ಸಮಾಜದ ಆಸ್ತಿಯಾಗಲು ಸಾಧ್ಯ

ಜಂಗಮ ಕೋಟೆ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸಲು ರೈತರಿಂದ ಅಭಿಪ್ರಾಯ ಸಂಗ್ರಹ

ರೈತರ ಅಭಿಪ್ರಾಯದಂತೆ ಮುಂದಿನ ಹೆಜ್ಜೆ

ಜಂಗಮಕೋಟೆ ಹೋಬಳಿ ಪ್ರದೇಶದಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿಯೂ ಸೇರಿದಂತೆ ಒಟ್ಟು  ೨,೮೬೩ ಎಕರೆಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಗುರುತಿಸಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿ ಯಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ.

Pakistani citizens: ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

ಭಟ್ಕಳದಲ್ಲೂ ಇದ್ದಾರೆ 14 ಪಾಕಿಸ್ತಾನಿ ಪ್ರಜೆಗಳು; ಗಡಿಪಾರು ಆಗ್ತಾರಾ?

Pakistani citizens: ಭಟ್ಕಳದಲ್ಲಿ ಒಟ್ಟು 14 ಪಾಕಿಸ್ತಾನಿ ಮೂಲದವರಿದ್ದು, ಅವರಲ್ಲಿ 10 ಮಹಿಳೆಯರಾಗಿದ್ದರೆ, ಮೂವರು ಮಕ್ಕಳು ಇದ್ದಾರೆ. ಇನ್ನೊಬ್ಬ ಮಹಿಳೆ ಅಕ್ರಮ ವಲಸಿಗರಾಗಿದ್ದಾರೆ. ಭಟ್ಕಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಪಾಕ್ ಪ್ರಜೆಗಳು ಇರುವ ಸಾಧ್ಯತೆ ಇದ್ದು, ಈ ಕುರಿತು ಪೊಲೀಸರು ಮಾಹಿತಿ ಕಲೆಹಾಕುತಿದ್ದಾರೆ.

Roopa Moudgil: ಸೇವಾ ಬಡ್ತಿ; ಐಪಿಎಸ್‌ ಅಧಿಕಾರಿ ಡಿ.ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Roopa Moudgil: ಎಡಿಜಿಪಿ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹಿರಿಯ ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಅವರು ಸಲ್ಲಿಸಿರುವ ಮನವಿಯನ್ನು ಕಾನೂನಿನ ಅನ್ವಯ ಎರಡು ತಿಂಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.‌

LIC: ಪಹಲ್ಗಾಮ್‌ ದಾಳಿ: ಮೃತರ ಕುಟುಂಬಸ್ಥರ ನೆರವಿಗೆ ಎಲ್‌ಐಸಿ

ಪಹಲ್ಗಾಮ್‌ ದಾಳಿ: ಮೃತರ ಕುಟುಂಬಸ್ಥರ ನೆರವಿಗೆ ಎಲ್‌ಐಸಿ

ಪಹಲ್ಗಾಮ್ ಭೀಕರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗಾಗಿ ಲೈಫ್ ಇನ್ಸೂರೆನ್ಸ್ ಪಾಲಿಸಿ ವಿನಾಯಿತಿ ಪ್ರಕಟಿಸಿದೆ. ಪಹಲ್ಗಾಮ್ ಘಟನೆಯಿಂದ ತೀವ್ರ ದುಃಖವಾಗಿದೆ. ಬಾಧಿತರನ್ನು ಬೆಂಬಲಿಸಲು ಹಾಗೂ ಆರ್ಥಿಕ ಸಹಾಯ ಒದಗಿಸಲು ಎಲ್‌ಐಸಿ ಬದ್ಧವಾಗಿದೆ. ಕ್ರೈಮ್ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಕಾರ್ಯ ನಿರ್ವಹಿಸಲಾಗು ವುದು ಎಂದು ಕಂಪನಿ ಹೇಳಿದೆ

ಯೆಮೆನ್‌ ಮೂಲದ ಮಹಿಳೆಗೆ ಯಶಸ್ವಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಯೆಮನ್‌ ದೇಶದ 63 ವರ್ಷದ ಜಮ್ಜಾಮ್ ಎಂಬ ಮಹಿಳೆ ಕಳೆದ ಐದು ವರ್ಷಗಳಿಂದ ವಯೋ ಸಹಜ ಮೊಣಕಾಲು ನೋವಿನಿಂದ ಬಳಲುತ್ತಿದ್ದರು, ಕ್ರಮೇಣ ನಿಲ್ಲಲು, ನಡೆಯಲು ಸಹ ಸಾಧ್ಯ ವಾಗದ ಸ್ಥಿತಿಗೆ ತಲುಪಿದ್ದರು. ಅವರದ್ದೇ ದೇಶದ ಆಸ್ಪತ್ರೆಗಳಿಗೆ ತೋರಿಸಿದ್ದರೂ ಪ್ರಯೋಜನವಾಗ ಲಿಲ್ಲ. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ಆಗಮಿಸಿದರು. ಇವರ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಇವರಿಗೆ ಬೈಲಾ ಟರಲ್‌ ಮೊಣಕಾಲು ಅಸ್ಥಿಸಂಧಿವಾತ ಇರುವುದು ಪತ್ತೆಯಾಯಿತು

Pahalgam Terror Attack: ತುಮಕೂರಿನಲ್ಲಿ ಮೂವರು ಪಾಕಿಸ್ತಾನಿ ಮಹಿಳೆಯರು

ತುಮಕೂರಿನಲ್ಲಿ ಮೂವರು ಪಾಕಿಸ್ತಾನಿ ಮಹಿಳೆಯರು

Pak women in Tumkur: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಕಳುಹಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಿದೆ. ಅದರಂತೆ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನ ಮೂಲದ ಮಹಿಳೆಯರು ವಾಸವಾಗಿದ್ದು, ಅವರನ್ನು ಮರಳಿ ಪಾಕಿಸ್ತಾನಕ್ಕೆ ಕಳುಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ಕುರಿತ ವಿವರ ಇಲ್ಲಿದೆ.

Karnataka Rains: ರಾಜ್ಯದಲ್ಲಿ ಮೇ 1 ರವರೆಗೆ ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

ರಾಜ್ಯದಲ್ಲಿ ಮೇ 1 ರವರೆಗೆ ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

Karnataka Rains: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ದಕ್ಷಿಣ ಒಳನಾಡಿನಲ್ಲೂ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Physical Abuse: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್‌

ಲೈಂಗಿಕ ಕಿರುಕುಳ; ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್‌ಐಆರ್‌

Physical Abuse: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೇಘನ ಎಂಬಾಕೆ ನೀಡಿದ ದೂರಿನ ಮೇರೆಗೆ ಜೀನಿ ಸಂಸ್ಥೆ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

DK Shivakumar: ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ: ಡಿ.ಕೆ.ಶಿವಕುಮಾರ್

ಕಾವೇರಿ ಆರತಿ ಕಾರ್ಯಕ್ರಮಕ್ಕೆ ವಾರದಲ್ಲಿ ನೀಲನಕ್ಷೆ: ಡಿಕೆಶಿ

DK Shivakumar: ಕಾವೇರಿ ಆರತಿಗೆ ಸರ್ಕಾರ 92 ಕೋಟಿ ರೂ. ನೀಡಲು ತೀರ್ಮಾನಿಸಿದ್ದು, ಇದರ ಜತೆಗೆ ಬೇರೆ ಇಲಾಖೆಗಳು ಅಗತ್ಯ ಸಹಕಾರ ನೀಡಲಿವೆ. ಕನಿಷ್ಠ ಸುಮಾರು 10 ಸಾವಿರ ಜನರು ಕೂತು ಈ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಬೇಕು. ಎಷ್ಟು ದಿನ ಕಾರ್ಯಕ್ರಮ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

CM Siddaramaiah: ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ

CM Siddaramaiah: ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

ದೇಶಕ್ಕೇ ಮಾದರಿಯಾಗುವಂತೆ ಗ್ರೇಟರ್ ಬೆಂಗಳೂರು ನಿರ್ಮಾಣ: ಡಿಕೆಶಿ

DK Shivakumar: ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gokarna tragedy: ಗೋಕರ್ಣದಲ್ಲಿ ತಮಿಳುನಾಡಿನ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಸಮುದ್ರ ಪಾಲು

ಗೋಕರ್ಣದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು

Gokarna tragedy: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಜಟಾಯು ತೀರ್ಥದಲ್ಲಿ ಘಟನೆ ನಡೆದಿದೆ. ತಮಿಳುನಾಡಿನ ತಿರುಚ್ಚಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಸಮುದ್ರಕ್ಕೆ ಇಳಿದಾಗ ಅಲೆಗಳಿಗೆ ಸಿಲುಕಿ ಕೊಚ್ಚಿಹೋಗಿದ್ದಾರೆ. ರಕ್ಷಣಾ ತಂಡವು ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

Pahalgam Terror Attack: ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ; ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ವಶಕ್ಕೆ

ಕಲಬುರಗಿಯಲ್ಲಿ ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ

Pahalgam Terror Attack: ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಗಿದೆ ಎಂದು ಬಜರಂಗ ದಳದ ಕಾರ್ಯಕರ್ತರನ್ನು ಬ್ರಹ್ಮಪುರ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Dr K Kasturirangan: ಪಶ್ಚಿಮ ಘಟ್ಟಗಳ ಜೊತೆಗೆ ತಳುಕು ಹಾಕಿಕೊಂಡ ಡಾ. ಕಸ್ತೂರಿರಂಗನ್

ಪಶ್ಚಿಮ ಘಟ್ಟಗಳ ಜೊತೆಗೆ ತಳುಕು ಹಾಕಿಕೊಂಡ ಡಾ. ಕಸ್ತೂರಿರಂಗನ್

ಕಸ್ತೂರಿರಂಗನ್ 1994ರಿಂದ 2003ರವರೆಗೆ 9ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೇತೃತ್ವ ವಹಿಸಿದ್ದರು. 2003- 2009ರ ಅವಧಿಯಲ್ಲಿ ರಾಜ್ಯಸಭೆಯ ಸದಸ್ಯರಾಗಿದ್ದರು. ಯೋಜನಾ ಆಯೋಗದ ಸದಸ್ಯರಾಗಿದ್ದರು. ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಇವರ ವರದಿ ವಿವಾದಾತ್ಮಕ.

Self Harming: ವಿಜಯಪುರದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ವಿಜಯಪುರದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

Self Harming: ತಲೆಗೆ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಶಿಕಾರಿ ಖಾನ ಪ್ರದೇಶದಲ್ಲಿ ಜರುಗಿದೆ. ಅಶನಾಮ್ ಪ್ರಕಾಶ ಮಿರ್ಜಿ (22) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ ಹಾಗೂ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dr K Kasturirangan: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

Dr K Kasturirangan: 1994 ರಿಂದ 2003ರವರೆಗೆ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ಡಾ.ಕೆ. ಕಸ್ತೂರಿ ರಂಗನ್‌ ಅವರು, 2003ರಿಂದ 2009ರವರೆಗೆ ರಾಜ್ಯಸಭೆ ಸದಸ್ಯರಾಗಿದ್ದರು. ಇನ್ನು ಇವರು ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿಯಾಗಿದ್ದಾರೆ.

Pahalgam terror attack: ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್; ಮಂಗಳೂರಿನಲ್ಲಿ ಕಿಡಿಗೇಡಿ ವಿರುದ್ಧ ಕೇಸ್‌

ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್;‌ ಕೇಸ್‌ ದಾಖಲು

Pahalgam terror attack: 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ಕಿಡಿಗೇಡಿ, ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.

Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

9.82 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್‌ ಮೇಲೆ ಗುರುವಾರ (ಏ.24) ರಂದು ದಾಳಿ ನಡೆಸಿದ್ದರು. ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದ್ದರು.

‌Ricky Rai Shoot out: ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ! ಬಾಯಿ ಬಿಟ್ಟ ಗನ್‌ ಮ್ಯಾನ್

ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್‌ ಮ್ಯಾನ್

ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 25th April 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಕಂಡು ಬಂದಿದ್ದು, 9,005ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆ ಆಗಿ ಪ್ರಸ್ತುತ 9,824 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,050 ರೂ. ಮತ್ತು 100 ಗ್ರಾಂಗೆ 9,00,500 ರೂ. ನೀಡಬೇಕಾಗುತ್ತದೆ.

Mittu Changappa passed Away: ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು ಇಂದಿರಾ ಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಆತ್ಮೀಯರಾಗಿದ್ದರು. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಗಮನ ಸೆಳೆದಿದ್ದರು.

Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.