ಕೇರಳದ ಉದ್ಯಮಿ ಕೊಡಗಿನ ತೋಟದ ಮನೆಯಲ್ಲಿ ಕೊಲೆ
ಈ ಪ್ರಕರಣವನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಡಿಜಿಟಲ್ ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. 14 ವರ್ಷಗಳ ಹಿಂದೆ ಕೊಂಗಣ ಗ್ರಾಮದಲ್ಲಿ 32 ಎಕರೆ ಕಾಫಿ ತೋಟ ಖರೀದಿಸಿದ್ದ ಪ್ರದೀಪ್, ತೋಟದ ಮಧ್ಯದಲ್ಲಿರುವ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.