ಕರಾವಳಿ- ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
Karnataka Weather: ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ರಾಜ್ಯದ ಇತರ ಭಾಗಗಳಲ್ಲಿ ಮಂಕಾಗಿದೆ. ಕರಾವಳಿ ಹಾಗೂ ಮಲೆನಾಡು ಉತ್ತಮ ಮಳೆಯಾದರೆ, ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕದ ಹಲವೆಡೆ ಹಗುರ ಮಳೆಯಾಗುತ್ತಿದೆ. ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.