ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Nidumamidi Sri: ಮಠಾಧೀಶರು ರಾಯಭಾರಿಗಳಾಗಬೇಕು ಎಂಬ ಮಾತು ನೋವು ತಂದಿದೆ: ನಿಡುಮಾಮಿಡಿ ಶ್ರೀ

ಮಠಾಧೀಶರು ರಾಯಭಾರಿಗಳಾಗಬೇಕು ಎಂಬ ಮಾತು ನೋವು ತಂದಿದೆ

ಸರ್ಕಾರದ ಪರವಾಗಿ ಇರಬೇಕು ಎನ್ನುವುದು ತಪ್ಪಲ್ಲ. ಆದರೆ, ಸರ್ಕಾರದ ರಾಯಭಾರಿಗಳಾಗಿ, ಸೇವಕರಾಗಿ ಸೇವೆ ಮಾಡಿದರೆ ಮಾತ್ರ ಮುಕ್ತಿ ಎಂಬ ರೀತಿಯಲ್ಲಿ ಮಾತನಾಡುವುದು ಅನುಚಿತ. ಮಠಾಧಿಪತಿಗಳು ಯಾವುದೇ ರಾಜಕಾರಣಿ ಅಥವಾ ಪಕ್ಷದ ಸೇವೆ ಮಾಡಲು ಇರುವವರಲ್ಲ. ಅವರು ಸಮಾಜ ಹಾಗೂ ಸಾರ್ವಜನಿಕರ ಸೇವೆ, ಮಾರ್ಗದರ್ಶನಕ್ಕಾಗಿ ಇದ್ದಾರೆ ಎಂದರು.

ಜಿಬಿಎ ವ್ಯಾಪ್ತಿಯಲ್ಲಿ ಮರದ ಕೊಂಬೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ; 2.77 ಕೋಟಿ ರೂ. ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮರದ ಕೊಂಬೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ; ಹೈಕೋರ್ಟ್ ಆದೇಶ ನೀಡಿದ್ದೇನು?

ಮರದ ಕೊಂಬೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರುದ್ಧ ಹೈಕೋರ್ಟ್‌ ಕ್ರಮ ಕೈಗೊಂಡಿದೆ. ಸಂತ್ರಸ್ತ ಜಿ. ಚಂದನ್ ಅವರಿಗೆ 2,77,29,695 ರೂ. ಪರಿಹಾರವನ್ನು ಶೇ.6ರ ವಾರ್ಷಿಕ ಬಡ್ಡಿಯೊಂದಿಗೆ ಪಾವತಿಸುವಂತೆ ಆದೇಶಿಸಿದೆ.

ಬರ ಪರಿಹಾರಕ್ಕೆ ಕೇಂದ್ರಕ್ಕೆ ಬೇಡಿಕೆ;  ಪ್ರಧಾನಿ ಮೋದಿ ಭೇಟಿಯಾಗ್ತಾರಾ ಸಿಎಂ ಡಿಕೆ ಶಿವಕುಮಾರ್‌?

ಪ್ರಧಾನಿ ಮೋದಿ ಭೇಟಿಯಾಗ್ತಾರಾ ಸಿಎಂ ಡಿಕೆ ಶಿವಕುಮಾರ್‌?

ರಾಜ್ಯದಲ್ಲಿ ಮಳೆ ಅಭಾವ ಎದುರಾಗಿದ್ದು, ಈ ಕುರಿತು ಬರ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಮಯ ಕೋರಿದ್ದಾರೆ. ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಹಲವು ಮನವಿಗಳನ್ನು ಸಲ್ಲಿಸಿದ್ದಾರೆ.

ಉ.ಕರ್ನಾಟಕ, ಮಧ್ಯ ಕರ್ನಾಟಕ, ಮೈಸೂರು ಭಾಗಕೆ ಪ್ರತ್ಯೇಕ ತಂಡ: ಬರ ಅಧ್ಯಯನಕ್ಕೆ ಕೇಂದ್ರದ 3 ತಂಡ

ಬರ ಅಧ್ಯಯನಕ್ಕೆ ಕೇಂದ್ರದ 3 ತಂಡ

ಒಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಿದರೆ, ಮತ್ತೊಂದು ತಂಡ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರ ಅಧ್ಯಯನ ಮಾಡಲಿದೆ. ಮೂರನೇ ತಂಡ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಅಧ್ಯಯನ ನಡೆಸಲಿದೆ. ಈ ಬಗ್ಗೆ ಮಾತನಾಡಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೇಂದ್ರದ ತಂಡಗಳು ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿ ಸಲ್ಲಿಸಲಿವೆ.

ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ: ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯದ 6 ಜಿಲ್ಲೆಗಳಲ್ಲಿ ವರುಣನ ಆರ್ಭಟ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಇಂದು (ಸೆಪ್ಟೆಂಬರ್ 29) ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಜೊತೆಗೆ ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೇಕೆದಾಟು ಸೇರಿ ವಿವಿಧ ನೀರಾವರಿ ಯೋಜನೆಗಳಿಗೆ ಮಧ್ಯಸ್ಥಿಕೆ ವಹಿಸಲು ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಸಿಎಂ

ಮೇಕೆದಾಟು ಯೋಜನೆಗೆ ಜಲಶಕ್ತಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ

Mekedatu Project: ಮೇಕೆದಾಟು ಅಣೆಕಟ್ಟೆಗೆ ಮತ್ತೊಮ್ಮೆ ಡಿಪಿಆರ್ ಸಲ್ಲಿಕೆಯಾಗಿರುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯ ಸ್ಥಳ ಗುರುತಿಸಲಾಗಿದೆ. ತಮಿಳುನಾಡು ತಂಡ ಭೇಟಿ ನೀಡಿದರೂ ಅವರಿಗೂ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನಾಯಿಂಧ್ರಹಳ್ಳಿ ಗೇಟ್ ಬಳಿ ಭೀಕರ ಅಪಘಾತ: ಕೆಎಸ್ಆರ್'ಟಿಸಿ ಬಸ್ ಓವರ್‌ಟೇಕ್ ಮಾಡಲು ಹೋಗಿ ಆಟೋ ಪಲ್ಟಿ

ಆಟೋ ಪಲ್ಟಿಯಾಗಿ ಮೂವರು ಮಹಿಳಾ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಮಹಿಳೆಯರಿಗೆ ಕೂಲಿ ಕೆಲಸಕ್ಕೆ ಕರೆದೊಯುತ್ತಿದ್ದ ಆಟೋ ಒಂದು ಬಸ್ಸಿಗೆ ಓವರ್ ಅಟ್ಯಾಕ್ ಮಾಡಲು ಹೋಗಿ ಪಲ್ಟಿ ಹೊಡೆದು ಮೂವರು ಮಹಿಳಾ ಕೂಲಿ ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಿಂಧ್ರಹಳ್ಳಿ ಗೇಟ್ ಸಮೀಪ ಬೆಳಗ್ಗೆ ಸಂಭವಿಸಿದೆ.

Road Accident: ಚಿಂತಾಮಣಿ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವನ ಸ್ಥಿತಿ ಚಿಂತಾಜನಕ

ಚಿಂತಾಮಣಿ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ

ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ಉಪ್ಪರಪೇಟೆ ಬಳಿ ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಅಪಘಾತದಲ್ಲಿ ಶಿಡ್ಲಘಟ್ಟ ಪಟ್ಟಣದ ನಿವಾಸಿಗಳಾದ ಕೃಷ್ಣ (21 ವರ್ಷ), ರಮಾದೇವಿ(40 ವರ್ಷ) ನಿಜಾಮುಲ್ಲಾ(40 ವರ್ಷ), ಶಾಮೀರ್ (25 ವರ್ಷ)ಎಂದು ಗುರುತಿಸಲಾಗಿದ್ದು, ಇವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ

Tumkur News: ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡಬೇಕು. ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸುವುದರ ಮೂಲಕ ನಮ್ಮ ದೇಶದ ಸಂಪ್ರದಾಯ, ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೆ ತಿಳಿಸಿದ್ದಾರೆ.

Chikkaballapur News: ಹಿರಿಯ ನಾಗರಿಕರ ಕುಂದುಕೊರತೆಗಳ ಆಲಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಹಿರಿಯ ನಾಗರಿಕರ ಕುಂದುಕೊರತೆಗಳ ಆಲಿಸಲು ಸೂಚನೆ

ಅಗತ್ಯವಿದ್ದಲ್ಲಿ ಹಿರಿಯ ನಾಗರಿಕರು ತಮ್ಮ ಆಸ್ತಿಯನ್ನು ವಾಪಸ್ಸು ಪಡೆಯಲು ಇರುವ ಕಾನೂನು ಅವಕಾಶಗಳ ಬಗ್ಗೆಯೂ ಮಾರ್ಗದರ್ಶನ ನೀಡಬೇಕು. ಇಂತಹ ಪ್ರಕರಣಗಳಲ್ಲಿ ಉಚಿತ ಕಾನೂನು ನೆರವು ದೊರಕುವಂತೆ ಕ್ರಮವಹಿಸಬೇಕು. ಅಲ್ಲದೆ ಹಿರಿಯ ನಾಗರಿಕರ ಇಂತಹ ಸಮಸ್ಯೆಗಳಿಗೆ ಉಪವಿಭಾಗಾಧಿಕಾರಿ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಈ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು

ಹೃದಯದ ಬಡಿತ ತಪ್ಪದಿರಲಿ, ಆರೋಗ್ಯದ ಹೆಜ್ಜೆ ನಿಲ್ಲದಿರಲಿ: ವಿಶ್ವ ಹೃದಯ ದಿನ: ಆರೋಗ್ಯಕರ ಜೀವನಶೈಲಿಗೆ ಒತ್ತು

ವಿಶ್ವ ಹೃದಯ ದಿನ: ಆರೋಗ್ಯಕರ ಜೀವನಶೈಲಿಗೆ ಒತ್ತು

ಹೃದಯಾಘಾತ, ಪಾರ್ಶ್ವವಾಯು, ಅಧಿಕ ರಕ್ತದೊತ್ತಡ, ಹೃದಯ ವೈಫಲ್ಯ ಸೇರಿದಂತೆ ಹೃದಯ ಮತ್ತು ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ದೈಹಿಕ ಚಟುವಟಿಕೆಯ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ, ಧೂಮಪಾನ, ಮದ್ಯಪಾನ, ಅಧಿಕ ತೂಕ, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಪ್ರಮುಖ ಕಾರಣಗಳಾಗಿವೆ.

KEA Exam Hall ticket: ಭೂಮಾಪಕರ ಹುದ್ದೆ, ಗ್ರಾಮ ಆಡಳಿತಾಧಿಕಾರಿ ಹುದ್ದೆ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಇಲ್ಲಿದೆ ಲಿಂಕ್‌

ಭೂಮಾಪಕರು, ಗ್ರಾಮ ಆಡಳಿತಾಧಿಕಾರಿ ಹುದ್ದೆ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

Land surveyor and VAO Recruitment Exam: ಉಳಿಕೆ ಮೂಲ ವೃಂದದ 560 ಭೂಮಾಪಕರ ಹುದ್ದೆ ನೇಮಕಾತಿ ಪರೀಕ್ಷೆ ಅ.2ರಂದು ಮತ್ತು 505 ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿ ಪರೀಕ್ಷೆ 4ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರ ಬಿಡುಗಡೆ ಮಾಡಿದೆ.

Gauribidanur News: ವೃತ್ತಿಯ ಬಗ್ಗೆ ಅಭಿಮಾನವಿರಲಿ: ಸ್ವಾಮಿ ವೀರೇಶಾನಂದ ಸರಸ್ವತಿ

ವೃತ್ತಿಯ ಬಗ್ಗೆ ಅಭಿಮಾನವಿರಲಿ: ಸ್ವಾಮಿ ವೀರೇಶಾನಂದ ಸರಸ್ವತಿ

ಶಿಕ್ಷಕರು ತಮ್ಮ ವೃತ್ತಿಯನ್ನು ಎಂದಿಗೂ ಲಘುವಾಗಿ ಪರಿಗಣಿಸಬಾರದು. ಸಮಾಜ ಶಿಕ್ಷಕರ ವೃತ್ತಿಯನ್ನು ಕಡೆಗಣಿಸಿದರೆ ತಮ್ಮ ಕರ್ತವ್ಯ ಮತ್ತು ಸಾಧನೆಯ ಮೂಲಕವೇ ಉತ್ತರ ನೀಡಬೇಕು. ಶಿಕ್ಷಕರು ಕಿಂಗ್ ಆಗದಿರಬಹುದು, ಆದರೆ ಕಿಂಗ್ ಮೇಕರ್ ಆಗುತ್ತಾರೆ. ಹೀಗಾಗಿ ಶಿಕ್ಷಕರಿಗೆ ಸಮಾಜದಲ್ಲಿ ಸದಾ ಗೌರವ ಹಾಗೂ ಪವಿತ್ರ ಸ್ಥಾನವಿದೆ ಎಂದರು.

Chikkaballapur News: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಸಹಾಯವಾಣಿ ಕೇಂದ್ರಗಳ ಸ್ಥಾಪನೆ: 25,584 ಮತದಾರರು; ಸೆ.29ಕ್ಕೆ ಅಧಿಸೂಚನೆ, ಅ.23ರಂದು ಮತದಾನ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು 25,584 ಪದವೀಧರ ಮತದಾರ ರಿದ್ದು, 14,597 ಪುರುಷರು ಹಾಗೂ 10,987 ಮಹಿಳಾ ಮತದಾರರು ಇದ್ದಾರೆ. ಅರ್ಹ ಪದವೀಧರರು ಸೆ.29ರೊಳಗಾಗಿ ನಮೂನೆ-18ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಮನವಿ ಮಾಡಿದರು.

ಅತ್ಯಾಧುನಿಕ ಕೇಶ ವಿನ್ಯಾಸ ಸಂಸ್ಥೆಯನ್ನು ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್

ಅತ್ಯಾಧುನಿಕ ಕೇಶ ವಿನ್ಯಾಸ ಸಂಸ್ಥೆಯನ್ನು ಉದ್ಘಾಟಿಸಿದ ಸಿಎಂ

ರಾಜಧಾನಿಗೆ ತನ್ನ ಸೇವೆಯನ್ನು ವಿಸ್ತರಿಸುತ್ತಿರುವುದು ವಿಶೇಷ ಕೂದಲು ಮರುಸ್ಥಾಪನಾ ಸಂಸ್ಥೆಯ ಪಾಲಿಗೆ ಒಂದು ಮಹತ್ವದ ಮೈಲುಗಲ್ಲಾಗಿದೆ; ಈ ಕೇಂದ್ರವು ಸುಧಾರಿತ ವೈದ್ಯಕೀಯ ಮೂಲ ಸೌಕರ್ಯ, ಅನುಭವಿ ವೈದ್ಯರು ಮತ್ತು ವೈದ್ಯರ ನೇತೃತ್ವದ ಕೂದಲು ಮರುಸ್ಥಾಪನಾ ವಿಧಾನ ವನ್ನು ಒಂದೇ ಸೂರಿನಡಿ ಒದಗಿಸುತ್ತದೆ.

ಬರಗಾಲದ ನಡುವೆ ಫೈನಾನ್ಸ್ ಕಂಪನಿಗಳ ದೌರ್ಜನ್ಯ: ಕಠಿಣ ಕ್ರಮದ ಭರವಸೆ ನೀಡಿದ ಚಿಂತಾಮಣಿ ಡಿವೈಎಸ್‌ಪಿ

ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ರೈತ ಸಂಘ ಆಗ್ರಹ

ನಮ್ಮ ಭಾಗದಲ್ಲಿ ಭೀಕರ ಬರವಿದ್ದು, ಕೊಳವೆ ಬಾವಿಗಳಲ್ಲಿ ನೀರು ಆರೋಗುತ್ತಿದೆ. ಕೆಲಸ-ಕೂಲಿ ಇಲ್ಲದೆ ರೈತರು ಹಾಗೂ ಸಾರ್ವಜನಿಕರು ಕಷ್ಟದಲ್ಲಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಬ್ಯಾಂಕ್‌ಗಳ ಸಿಬ್ಬಂದಿ ರೈತರ ಮನೆಗಳಿಗೆ ತೆರಳಿ ಸಾಲ ಮರು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ.

ACB Raid: ಲಂಚ ಪಡೆಯುವಾಗ ಎಸಿಬಿ ಬಲೆಗೆ: ಲಂಚಕ್ಕೆ ಕೈ ಚಾಚಿದ ಆರೋಗ್ಯಾಧಿಕಾರಿ ಸೇವೆಯಿಂದ ವಜಾ

ಲಂಚಕ್ಕೆ ಕೈ ಚಾಚಿದ ಆರೋಗ್ಯಾಧಿಕಾರಿ ಸೇವೆಯಿಂದ ವಜಾ

ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ವೆಂಕಟೇಶಮೂರ್ತಿ ಅವರು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಅವರ ವಿರುದ್ಧ ಇಲಾಖಾ ಕ್ರಮಕ್ಕೆ ಮುಂದಾ ಗಲಾಗಿದೆ.

Dr. Nandini K L: ಪತ್ರಕರ್ತೆ, ಕಂಟೆಂಟ್ ಕ್ರಿಯೇಟರ್ ಡಾ. ನಂದಿನಿ ಕೆ.ಎಲ್.ಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ‘ವಿಡಿಯೊ ಕ್ರಿಯೇಟರ್ ಅವಾರ್ಡ್ 2026’

ಪತ್ರಕರ್ತೆ ಡಾ. ನಂದಿನಿ ಕೆ.ಎಲ್.ಗೆ ‘ವಿಡಿಯೊ ಕ್ರಿಯೇಟರ್ ಅವಾರ್ಡ್ 2026’

Video Creator Award 2026: ಕರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು, ಸಂಸ್ಕೃತಿ, ಪರಂಪರೆ ಹಾಗೂ ರಾಜ್ಯದ ವೈವಿಧ್ಯಮಯ ಪ್ರವಾಸೋದ್ಯಮ ಸಾಧ್ಯತೆಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ಜನರಿಗೆ ತಲುಪಿಸುವಲ್ಲಿ ಪತ್ರಕರ್ತೆ ಡಾ. ನಂದಿನಿ ಕೆ.ಎಲ್. ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

Gyanesh Kumar: ಜ್ಞಾನೇಶ್ ಕುಮಾರ್ ವಜಾಕ್ಕೆ ಕಾಂಗ್ರೆಸ್ ಆಗ್ರಹ, ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

ಜ್ಞಾನೇಶ್ ಕುಮಾರ್ ವಜಾಕ್ಕೆ ಕಾಂಗ್ರೆಸ್ ಆಗ್ರಹ, ಪ್ರತಿಭಟನೆ

ಜಿಲ್ಲಾಧ್ಯಕ್ಷ ಕೇಶವ ರೆಡ್ಡಿ ಅವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದರು.ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Salute to Nari Shakti: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಬಿಸಿಯೂಟ ನೌಕರರ ಅ.13ರಂದು ‘ನಾರಿ ಶಕ್ತಿ ನಮನ’ ಕಾರ್ಯಕ್ರಮ

ಲಾಭದ ಲೆಕ್ಕಾಚಾರವಿಲ್ಲದೆ ಜನಸೇವೆ: ಸಂದೀಪ್ ಬಿ. ರೆಡ್ಡಿ

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ಮೂಡಿಸುವುದು, ಆತ್ಮವಿಶ್ವಾಸ ತುಂಬುವುದು ತಮ್ಮ ಸಮಾಜಮುಖಿ ಕಾರ್ಯಕ್ರಮಗಳ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಭಾವನೆಗಳನ್ನು ತುಂಬುವುದಿಲ್ಲ. ಇತರರೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ಪ್ರೇರಣೆ ಪಡೆದು ಜನರಿಗೆ ಅನುಕೂಲವಾಗುವ ಕಾರ್ಯಗಳನ್ನು ಕೈಗೊಳ್ಳಲಿ ಎಂದರು.

Chikkaballapur News: ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

ಸಂಘಟನೆಯ ಜಿಲ್ಲಾಧ್ಯಕ್ಷ ನಂದಿ ವಿನೋದ್ ಮಾತನಾಡಿ, ಹಿಂದೂ ಕಾರ್ಯಕರ್ತರನ್ನು ಗುರಿ ಯಾಗಿಸಿಕೊಂಡು ನಡೆದಿರುವ ಇಂತಹ ಘಟನೆಗಳು ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುತ್ತವೆ. ಘಟನೆಗೆ ಸಂಬಂಧಿಸಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.

ಎಫ್‌ಕೆಸಿಸಿಐ ಚುನಾವಣೆ; ಆತಿಥ್ಯ ಕ್ಷೇತ್ರದಿಂದ ನಿರ್ದೇಶಕರಾಗಿ ಕೆ. ರಾಧಾಕೃಷ್ಣ ಹೊಳ್ಳ, ಪಿ.ಸಿ. ರಾವ್‌ ಸೇರಿ ನಾಲ್ವರ ಆಯ್ಕೆ

ಎಫ್‌ಕೆಸಿಸಿಐ ಚುನಾವಣೆ; ನಿರ್ದೇಶಕರಾಗಿ ರಾಧಾಕೃಷ್ಣ ಹೊಳ್ಳ ಆಯ್ಕೆ

ಎಫ್‌ಕೆಸಿಸಿಐನ 2026-27ನೇ ಸಾಲಿನ ಅಧ್ಯಕ್ಷರಾಗಿ ಟಿ. ಸಾಯಿರಾಮ್ ಪ್ರಸಾದ್, ಹಿರಿಯ ಉಪಾಧ್ಯಕ್ಷರಾಗಿ ಬಿ.ಪಿ. ಶಶಿಧರ್ ಮತ್ತು ಉಪಾಧ್ಯಕ್ಷರಾಗಿ ಎನ್. ಸತೀಶ್ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) 109ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

Laxman Savadi: ಗಲಾಟೆ ಪ್ರಕರಣ; ಸಹಕಾರ ಸಚಿವ ಲಕ್ಷ್ಮಣ ಸವದಿಗೆ ಅಥಣಿ ಕೋರ್ಟ್‌ನಿಂದ ಸಮನ್ಸ್

ಸಹಕಾರ ಸಚಿವ ಲಕ್ಷ್ಮಣ ಸವದಿಗೆ ಅಥಣಿ ಕೋರ್ಟ್‌ನಿಂದ ಸಮನ್ಸ್ ಜಾರಿ

ತಳವಾರ ಸಮಾಜಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂದು ಲಕ್ಷ್ಮಣ ಸವದಿ ಅವರನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಸವದಿ ಬೆಂಬಲಿಗರು ಹಲ್ಲೆ ನಡೆಸಿದ್ದರು ಎಂದು ರಾಜು ಜಮಖಂಡಿಕರ್ ಎಂಬುವವರು ಆರೋಪಿಸಿ, ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಅ.9ರಂದು ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಸಚಿವರಿಗೆ ಅಥಣಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಸೂಚಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ತುಮಕೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತುಮಕೂರಿನಲ್ಲಿ ರೈತ ಸಂಘ ಪ್ರತಿಭಟನೆ

Tumkur News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತುಮಕೂರು ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮತ್ತು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ನೇತೃತ್ವದಲ್ಲಿ ನಗರದ ಬಿಎಸ್‌ಜೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Loading...