ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ಸಾಧ್ಯತೆ!
ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 19 ರಿಂದ 23 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.