ಗದಗ ಬರಪೀಡಿತ ಎಂದು ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ
ಗದಗ ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದರೂ ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗದಗ ತಾಲೂಕಿನಲ್ಲಿ ಶೇಕಡಾ 49ರಷ್ಟು ಮಳೆ ಕೊರತೆ ಉಂಟಾಗಿದೆ. ಆದರೂ ಸರ್ಕಾರ ಇದನ್ನು ಬರಪೀಡಿತ ಪ್ರದೇಶವೆಂದು ಯಾಕೆ ಘೋಷಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.