ಅಕ್ರಮ ಗಾಂಜಾ ಬೆಳೆದು ಸಿಕ್ಕಿಬಿದ್ದ ಪೊಲೀಸ್ ಸಿಬ್ಬಂದಿಯ ಪುತ್ರ!
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ದಾಳಿ ವೇಳೆ ಬರೋಬ್ಬರಿ 950 ಗ್ರಾಂಗಳಷ್ಟು ತೂಕವಿದ್ದ ಗಾಂಜಾ ಗಿಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸಪ್ಪನ ಮಗನೇ ಇಂತಹ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿರುವುದನ್ನು ಕಂಡು ಸ್ಥಳೀಯ ಗ್ರಾಮಸ್ಥರು ಮತ್ತು ಸಾರ್ವಜನಿಕರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.