ದೇವೇಗೌಡರ ಮನಸ್ಸು ನೋಯಿಸಲು ಇಷ್ಟವಿಲ್ಲ ಎಂದ ಡಿಕೆಶಿ
DK Shivakumar: ದೇವೇಗೌಡರು ಮೇಕೆದಾಟು, ಎತ್ತಿನಹೊಳೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ಲೋಕಸಭೆಯಲ್ಲಿ ಮಾತನಾಡುವಂತೆ ಹೇಳಲಿ. ಈ ವಯಸ್ಸಿನಲ್ಲಿ ಅವರ ಮೇಲೆ ವಾಗ್ದಾಳಿ ಮಾಡುವುದು ಸರಿಯಲ್ಲ. ನನಗೆ ಇಷ್ಟವೂ ಇಲ್ಲ. ಈ ವಯಸ್ಸಿನಲ್ಲಿ ಮನಸ್ಸು ನೋಯಿಸುವುದು ಬೇಡ ಎಂದುಕೊಂಡಿರುವೆ. ಅವರೇ ಇವುಗಳಿಗೆ ಪರಿಹಾರ ಸೂಚಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.