ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bengaluru Rain: ಬೆಂಗಳೂರಿನಲ್ಲಿ ಮಳೆ ಅಬ್ಬರ; ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ಮೆಜೆಸ್ಟಿಕ್‌, ಶಿವಾನಂದ ಸರ್ಕಲ್‌, ಮೈಸೂರು ಬ್ಯಾಂಕ್‌ ಸರ್ಕಲ್, ಶೇಷಾದ್ರಿಪುರಂ, ವಿಧಾನಸೌಧ, ಕೆ.ಆರ್‌. ಸರ್ಕಲ್‌, ಕೆ.ಆರ್‌.ಮಾರ್ಕೆಟ್‌, ಟೌನ್‌ ಹಾಲ್‌, ಮಲ್ಲೇಶ್ವರ, ಯಶವಂತಪುರ, ಕಾರ್ಪೋರೇಷನ್‌ ಸರ್ಕಲ್‌ ಸೇರಿ ಹಲವೆಡೆ ಗುರುವಾರ ರಾತ್ರಿ ಮಳೆ ಅಬ್ಬರಿಸಿದೆ.

V Somanna: ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ: ಸಚಿವ ವಿ.ಸೋಮಣ್ಣ

ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ: ವಿ.ಸೋಮಣ್ಣ

V Somanna: ರಾಜ್ಯ ಸರ್ಕಾರ ನಡೆಸಿರುವ ಜಾತಿ ಗಣತಿಗೆ ಯಾವುದೇ ಕಿಮ್ಮತ್ತಿಲ್ಲ. ಈ ಜಾತಿ ಗಣತಿ ವರದಿ ತನ್ನಿಂದ ತಾನಾಗಿಯೇ ನಿಷ್ಕ್ರಿಯವಾಗುತ್ತದೆ. ದೇಶದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರವೇ ಮಾಡಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ತುಮಕೂರಿನಲ್ಲಿ 4 ಅಡಿ ಉದ್ದದ ಕೊಳಕುಮಂಡಲ, 43 ಮರಿಗಳ ರಕ್ಷಣೆ!

ತುಮಕೂರಿನಲ್ಲಿ 43 ಕೊಳಕುಮಂಡಲ ಹಾವಿನ ಮರಿಗಳ ರಕ್ಷಣೆ

Tumkur News: ತುಮಕೂರು ನಗರದ ಕಾರ್ತಿಕ್ ಎಂಬುವರ ಶೆಡ್‌ನಲ್ಲಿ ಕಾಣಿಸಿಕೊಂಡ 4 ಅಡಿ ಉದ್ದದ ಕೊಳಕುಮಂಡಲ ಹಾಗೂ 43 ಮರಿಗಳನ್ನು ರಕ್ಷಣೆ ಮಾಡಲಾಗಿದೆ. ಪೂರ್ವ ಮುಂಗಾರು ಸಮಯದಲ್ಲಿ ಈ ಹಾವುಗಳು ಸಂತಾನೋತ್ಪತಿ ಮಾಡುತ್ತವೆ. ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಉರಗ ತಜ್ಞರು ಸಲಹೆ ನೀಡಿದ್ದಾರೆ.

Pralhad Joshi: ಈ ವರ್ಷ ಗೋಧಿ ಖರೀದಿ ಶೇ.24ರಷ್ಟು ಹೆಚ್ಚಳ, ಈವರೆಗೆ 256 ಲಕ್ಷ ಮೆಟ್ರಿಕ್ ಟನ್ ಸಂಗ್ರಹ: ಜೋಶಿ

ಗೋಧಿ ಖರೀದಿ ಶೇ.24.78ರಷ್ಟು ಹೆಚ್ಚಳ: ಪ್ರಲ್ಹಾದ್‌ ಜೋಶಿ

Pralhad Joshi: ವಿವಿಧ ರಾಜ್ಯಗಳಿಂದ ಈ ಬಾರಿ ಏಪ್ರಿಲ್ 30ರವರೆಗೆ ಒಟ್ಟಾರೆ 256.31 ಎಲ್‌ಎಂಟಿ ಗೋಧಿಯನ್ನು ಸಂಗ್ರಹಿಸಲಾಗಿದೆ. ಕಳೆದ ವರ್ಷ ಈ ಅವಧಿಗೆ 205.41 ಎಲ್‌ಎಂಟಿ ಸಂಗ್ರಹಿಸಿತ್ತು. ಪ್ರಸ್ತುತ ಗೋಧಿ ಸಂಗ್ರಹ ಕಳೆದ ವರ್ಷಕ್ಕಿಂತ ಶೇ.24.78ರಷ್ಟು ಹೆಚ್ಚಳ ಕಂಡು ಬಂದಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Caste Census: ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯಲಿ: ಸಿಎಂ

CM Siddaramaiah: ಜಾತಿ ಗಣತಿಯೊಂದಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತಂದಿದೆ: ಡಿ.ಕೆ.ಶಿವಕುಮಾರ್

ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತಂದಿದೆ: ಡಿಕೆಶಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು.

DK Shivakumar: ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆಶಿ

DK Shivakumar: ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

BY Vijayendra: ಜಾತಿ ಗಣತಿ; ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ಸಿಗರಿಗೂ ಆಶ್ಚರ್ಯ ಎಂದ ವಿಜಯೇಂದ್ರ

ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ಸಿಗರಿಗೂ ಆಶ್ಚರ್ಯ: ವಿಜಯೇಂದ್ರ

BY Vijayendra: ಕೇಂದ್ರ ಸರ್ಕಾರ ಜನಗಣತಿ ಜತೆ ಜಾತಿ ಗಣತಿ ಮಾಡುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಅವರಿಗೂ ಆಶ್ಚರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Rains: ಮುಂದಿನ 4 ದಿನ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ; ಉತ್ತರ ಒಳನಾಡಿಗೆ ಆರೆಂಜ್‌ ಅಲರ್ಟ್‌

ಮುಂದಿನ 4 ದಿನ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ

Karnataka Rains: ಮುಂದಿನ 3 ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ನಂತರ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

Physical abuse: ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ; ಸ್ನೇಹಿತರಿಂದಲೇ ಹೀನ ಕೃತ್ಯ!

ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ

Physical abuse: ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರೀತಿಯ ನಾಟಕವಾಡಿ ಬಾಲಕಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಯುವಕ, ತನ್ನ ಸ್ನೇಹಿತನ ಜತೆ ಸೇರಿ ಹೀನ ಕೃತ್ಯ ಎಸಗಿದ್ದಾನೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

Caste census: ಜನಗಣತಿ ಜತೆಗೆ ಜಾತಿಗಣತಿ; ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸುವೆ ಎಂದ ಸಿದ್ದರಾಮಯ್ಯ

ಜಾತಿಗಣತಿ; ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸುವೆ ಎಂದ ಸಿದ್ದರಾಮಯ್ಯ

Caste census: 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ. 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ, ಇದಕ್ಕೆ ವೈಜ್ಞಾನಿಕ ಕಾರಣ ಇರಲಿಲ್ಲ. ಹೀಗಾಗಿ ಶೇ. 50 ಮೀಸಲಾತಿ ಮಿತಿಯನ್ನು ತೆಗೆದುಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Kodi Mutt Swamiji: ಭಾರತ-ಪಾಕ್‌ ನಡುವೆ ಉಗ್ವಿಗ್ನ ಸ್ಥಿತಿ; ಯುದ್ಧದ ಬಗ್ಗೆ ಕೋಡಿಮಠ ಶ್ರೀ ಹೇಳಿದ್ದೇನು?

ಭಾರತ-ಪಾಕ್‌ ಯುದ್ಧದ ಬಗ್ಗೆ ಕೋಡಿಮಠ ಶ್ರೀ ಹೇಳಿದ್ದೇನು?

Kodi Mutt Swamiji: ಉತ್ತರದ ನಾಡಿನಲ್ಲಿ ಹಗೆಯ ಬೇಗೆ ಹತ್ತೀತು, ಸುತ್ತುವರಿದು ಬರುವಾಗ ಜಗವೆಲ್ಲಾ ಕೂಳಾದೀತು. ಈ ಮಾತನ್ನು ಮೊದಲೇ ನಾನು ಹೇಳಿದ್ದೆ. ಈ ಮಾತನ್ನು ಹೇಳಿದ ಎರಡು ದಿನಗಳಲ್ಲೇ, ಕಾಶ್ಮೀರದಲ್ಲಿ ಸಾಮೂಹಿಕ ಹತ್ಯಾಕಾಂಡವಾಯಿತು ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.

SSLC result 2025: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡುವುದು ಹೇಗೆ?

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

SSLC result 2025: ಮೇ 2ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಲಭ್ಯವಾಗಲಿದೆ. ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Anti National Post: ದೇಶ ವಿರೋಧಿ ಪೋಸ್ಟ್‌ ಮಾಡಿದ ಮಂಗಳೂರಿನ ವೈದ್ಯೆ ಕೆಲಸದಿಂದ ವಜಾ, ಕೇಸು

ದೇಶ ವಿರೋಧಿ ಪೋಸ್ಟ್‌ ಮಾಡಿದ ಮಂಗಳೂರಿನ ವೈದ್ಯೆ ಕೆಲಸದಿಂದ ವಜಾ, ಕೇಸು

ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್‌ ಹಾಕಿದ್ದ ಆರೋಪದಲ್ಲಿ ವೈದ್ಯೆ ಅಫೀಫಾ ಫಾತೀಮಾ ವಿರುದ್ಧ ಕೇಸ್ ದಾಖಲಾಗಿದೆ. ನೋಟಿಸ್ ನೀಡಿ, ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ತಿಳಿಸಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ವೈದ್ಯೆ ಅಫೀಫಾ ಫಾತೀಮಾ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ.

KV Prabhakar: ಆರೋಗ್ಯಕರ ಸಮಾಜ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಕೆ.ವಿ.ಪ್ರಭಾಕರ್

ಶಿಕ್ಷಕರನ್ನು ವಂದಿಸುವುದು ಉತ್ತಮ‌ ಸಂಸ್ಕಾರ: ಕೆ.ವಿ.ಪ್ರಭಾಕರ್

KV Prabhakar: ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kannada New Movie: ಹೊಸಕಥೆ ಆಧಾರಿತ ʼದಿʼ ಚಿತ್ರ ಮೇ 16ರಂದು ತೆರೆಗೆ

ಹೊಸಕಥೆ ಆಧಾರಿತ ʼದಿʼ ಚಿತ್ರ ಮೇ 16ರಂದು ತೆರೆಗೆ

Kannada New Movie: ವಿನಯ್ ವಾಸುದೇವ್ ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿರುವ ಹೊಸತಂಡದ ಹೊಸಪ್ರಯತ್ನ ʼದಿʼ ಚಿತ್ರದ ಬಿಡುಗಡೆ ದಿನಾಂಕವನ್ನು ಕನ್ನಡ ಚಿತರಂಗದ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಬಿಡುಗಡೆ ಮಾಡಿದ್ದಾರೆ. ಹೊಸಕಥೆ ಆಧರಿಸಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Pakistan Zindabad: ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ; ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್

ಗುಂಪಿನಿಂದ ಮುಸ್ಲಿಂ ಯುವಕನ ಹತ್ಯೆ; ಇನ್ಸ್‌ಪೆಕ್ಟರ್‌ ಸೇರಿ ಮೂವರು ಸಸ್ಪೆಂಡ್

ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ ಪಿ. ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು. ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು.

LPG cylinder blast: ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಇಬ್ಬರು ಸಜೀವದಹನ, ನಾಲ್ವರು ಗಂಭೀರ

ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಇಬ್ಬರು ಸಜೀವದಹನ

LPG cylinder blast: ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಅವಘಡ ನಡೆದಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ವ್ಯಕ್ತಿಯೊಬ್ಬರು ತೆರಳಿದಾಗ ಗ್ಯಾಸ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ.

DK Suresh Wife: ಸಂಸದ ಡಿಕೆ ಸುರೇಶ್‌ ಪತ್ನಿ ತಾನು ಎಂದು ಹೇಳಿಕೊಂಡ ಮಹಿಳೆ; ಕೇಸು

ಸಂಸದ ಡಿಕೆ ಸುರೇಶ್‌ ಪತ್ನಿ ತಾನು ಎಂದು ಹೇಳಿಕೊಂಡ ಮಹಿಳೆ; ಕೇಸು

ಶಾಲೆಯೊಂದರಲ್ಲಿ ಕೆಲಸ ಮಾಡುವ ಮಹಿಳೆ ಮೈಸೂರು ಮೂಲದವರಾಗಿದ್ದಾರೆ. ಪತಿ ಹೆಸರಿನ ಮುಂದೆ ಡಿ.ಕೆ. ಸುರೇಶ್ ಎಂದಿರುವ ನಕಲಿ ಮತದಾರರ ಗುರುತಿನ ಚೀಟಿಯನ್ನು ಸಹ ಪೋಸ್ಟ್ ಮಾಡಿದ್ದಾರೆ. ಎರಡೂ ಖಾತೆಗಳಲ್ಲಿ ಸುರೇಶ್ ಅವರ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

Road Accident: ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

ಘಟನೆ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮೂವರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.

ಸಮ ಸಮಾಜದ ಆಶಯ ಹೊಂದಿದ್ದ ಬಸವಣ್ಣ-ಡಾ.ಕೋಡಿರಂಗಪ್ಪ

ಸಮ ಸಮಾಜದ ಆಶಯ ಹೊಂದಿದ್ದ ಬಸವಣ್ಣ-ಡಾ.ಕೋಡಿರಂಗಪ್ಪ

ಕಾಯಕವೇ ಕೈಲಾಸ ಎಂಬ ತತ್ವವನ್ನು ಸಾರಿದ ಬಸವಣ್ಣನವರು ಎಲ್ಲರೂ ಕಾಯಕವನ್ನು ಮಾಡುವು ದರ ಮೂಲಕ ಸ್ವಾವಲಂಬಿ ಜೀವನವನ್ನು ನಡಿಸಬೇಕೆಂದು ಸಾರಿ ಹೇಳಿದರು. ಅಷ್ಟೇ ಅಲ್ಲದೆ ಸಮಾಜ ದಲ್ಲಿ ಇದ್ದಂತಹ ಮೂಡನಂಬಿಕೆ,ಕಂದಾಚಾರ, ಅನಾಚಾರಗಳನ್ನು ಖಂಡಿಸಿ ಸಮಾಜ ಸುಧಾರಣೆಗೆ ಅವಿರತ ಪ್ರಯತ್ನಿಸಿದರು. ಅಂತರ್ಜಾತಿಯ ವಿವಾಹಗಳನ್ನು ಮಾಡುವುದರ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಹೆಜ್ಜೆಯನಿಡಿಸಿದರು

Chikkaballapur Crime: ತಾಲೂಕಿನ ವರ್ಲಕೊಂಡ ಬಳಿ ಅಪಘಾತ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಸಾವು

ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಅಪಘಾತದಲ್ಲಿ ಸಾವು

ತಾಲೂಕಿನ ವರ್ಲಕೊಂಡ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಮತ ಸೈನಿಕ ದಳ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಕಾರ್ಯಕ್ರಮ ನಿಮಿತ್ತ ಬಾಗೇಪಲ್ಲಿ ಗೆ ತೆರಳಿದ್ದ ಇವರು ಇನ್ನೋವಾ ಕಾರಿನಲ್ಲಿ ವಕೀಲ ಸ್ನೇಹಿತರ ಜೊತೆಗೂಡಿ ಬೆಂಗಳೂರಿನತ್ತ ಬರು ತ್ತಿದ್ದರು

Chikkaballapur News: ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ನೀಡಿರುವ ಅದ್ಭುತ ಚೈತನ್ಯ : ಸಂದೀಪ್‌ಬಿ ರೆಡ್ಡಿ ಬಣ್ಣನೆ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ನೀಡಿರುವ ಅದ್ಭುತ ಚೈತನ್ಯ

ಅಂಬೇಡ್ಕರ್ ದಲಿತ ಕುಟುಂಬದಲ್ಲಿ ಹುಟ್ಟಿರಬಹುದು. ಭಾರತೀಯರು ಇಂದು ನೆಮ್ಮದಿಯಾಗಿ ಜೀವನ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಕಾರಣ ಅವರು ಬರೆದಿರುವ ಗಟ್ಟಿಯಾದ ಸಂವಿಧಾನ ವಾಗಿದೆ. ವಿಶ್ವದ ಭೂಪಟದಲ್ಲಿ ಎಲ್ಲಿಯವರೆಗೆ ಭಾರತ ರಾರಾಜಿಸುತ್ತದೆಯೋ ಅಲ್ಲಿಯವರೆಗೆ ಅಂಬೇಡ್ಕರ್ ಬರೆದ ಸಂವಿಧಾನ ಇರಲಿದೆ,ನನ್ನ ಅಂಬೇಡ್ಕರ್ ಜೀವಂತವಾಗಿ ಇರಲಿದ್ದಾರೆ ಎಂದು ಹೇಳಿದರು.

Gold Price Today: ಅಕ್ಷಯ ತೃತೀಯ ಬೆನ್ನಲ್ಲೇ ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌! ಚಿನ್ನದ ದರದಲ್ಲಿ ಭಾರೀ ಇಳಿಕೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 1st May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆ ಕಂಡಿದ್ದು, 8,775 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 218ರೂ. ಇಳಿಕೆಯಾಗಿದ್ದು 9,573 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,200 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,750 ರೂ. ಮತ್ತು 100 ಗ್ರಾಂಗೆ 8,77,500 ರೂ. ನೀಡಬೇಕಾಗುತ್ತದೆ.