ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Tumkur News: ಶತಮಾನದ ಇತಿಹಾಸವಿರುವ ಸರಕಾರಿ ಶಾಲೆಯ ಜಾಗ ಉಳಿಸಲು ಒತ್ತಾಯ

ಶತಮಾನದ ಇತಿಹಾಸವಿರುವ ಸರಕಾರಿ ಶಾಲೆಯ ಜಾಗ ಉಳಿಸಲು ಒತ್ತಾಯ

ತುಮಕೂರಿನಲ್ಲಿ ಶತಮಾನದ ಇತಿಹಾಸವಿರುವ ಶಾಲೆಯ ಜಾಗವು ಮಾರುಕಟ್ಟೆಯಲ್ಲಿ ಅಧಿಕ ಬೆಲೆ ಬಾಳುತ್ತಿರುವುದರಿಂದ, ಕೆಲ ಖಾಸಗಿ ಸಂಸ್ಥೆಗಳು ಹಾಗೂ ರಿಯಲ್ ಎಸ್ಟೇಟ್ ಲಾಬಿ ಶಾಲೆಯ ಮೇಲೆ ಕಣ್ಣಿಟ್ಟಿವೆ. ಶಾಲಾ ಜಾಗವನ್ನು ಕಬಳಿಸುವ ದುರುದ್ದೇಶದಿಂದಲೇ ಶಾಲೆಗೆ ಸರಿಯಾದ ಮೂಲಭೂತ ಸೌಕರ್ಯಗಳು ಸಿಗದಂತೆ ತಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Ganesh Chaturthi 2026: ಸಾರ್ವಜನಿಕ ಗಣೇಶೋತ್ಸವ: ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂನಿಂದ ಮಾರ್ಗಸೂಚಿ ಬಿಡುಗಡೆ

ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ಮಾರ್ಗಸೂಚಿ ಬಿಡುಗಡೆ

ಗಣೇಶ ಉತ್ಸವಕ್ಕೆ ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ನೀಡಿದ ತಕ್ಷಣ ಸಂಬಂಧಪಟ್ಟ ಉಪ ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಪೆಂಡಾಲ್‌ ನಿರ್ಮಿಸಿರುವ ಸಮಾರಂಭ ಸ್ಥಳವನ್ನು ಪರಿಶೀಲಿಸಿ, ಸದರಿ ಸ್ಥಳವು ಸುರಕ್ಷತೆಯಿಂದ ಕೂಡಿದೆಯೇ ಎಂಬದನ್ನು ಖಾತ್ರಿ ಪಡಿಸಿಕೊಂಡು ವಿದ್ಯುತ್‌ ಸಂಪರ್ಕಕ್ಕೆ ನಿರಾಕ್ಷೇಪಣಾ ಪತ್ರ ನೀಡಬೇಕು ಎಂದು ಬೆಸ್ಕಾಂ ಸೂಚಿಸಿದೆ.

Pavagada Naxalites: ಪಾವಗಡದಲ್ಲಿ ನಕ್ಸಲ್ ಭೀತಿ; ಶಂಕಿತ ನಕ್ಸಲ್ ವೆಂಕಟೇಶ್‌ಗಾಗಿ ಬೃಹತ್ ಕೂಂಬಿಂಗ್ ಕಾರ್ಯಾಚರಣೆ

ಪಾವಗಡದಲ್ಲಿ ಶಂಕಿತ ನಕ್ಸಲ್ ವೆಂಕಟೇಶ್‌ಗಾಗಿ ಕೂಂಬಿಂಗ್ ಕಾರ್ಯಾಚರಣೆ

ಪಾವಗಡದಲ್ಲಿ ತಾಲೂಕಿನಲ್ಲಿ ಶಂಕಿತ ವೆಂಕಟೇಶ್‌ನ ಜಾಡು ಪತ್ತೆಹಚ್ಚಲು ಪೊಲೀಸರು ಅತ್ಯಾಧುನಿಕ ಡ್ರೋನ್ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇಟ್ಟಿದ್ದಾರೆ. ಗ್ರಾಮಗಳು, ಗುಡ್ಡಗಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಶಂಕಿತನ ಬಂಧನಕ್ಕಾಗಿ ಪೊಲೀಸ್ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದೆ.

Annabrahma Chaturmasya: ಸ್ಟೀಲ್, ಪ್ಲಾಸ್ಟಿಕ್ ಬಿಟ್ಟು ಪಾರಂಪರಿಕ ಪಾತ್ರೆಗಳನ್ನು ಬಳಸಿ: ರಾಘವೇಶ್ವರ ಶ್ರೀ ಸಲಹೆ

ಸ್ಟೀಲ್, ಪ್ಲಾಸ್ಟಿಕ್ ಬಿಟ್ಟು ಪಾರಂಪರಿಕ ಪಾತ್ರೆಗಳನ್ನು ಬಳಸಿ

Raghaveshwara Bharathi swamy: ಚಿನ್ನ, ಬೆಳ್ಳಿ, ತಾಮ್ರ, ಕಂಚು, ಹಿತ್ತಾಳೆ ಪಾತ್ರೆಗಳು ನೀರಿನ ಗುಣವನ್ನು ವೃದ್ಧಿಸಿದರೆ, ಗಾಜು ಗುಣವೃದ್ಧಿ ಮಾಡದೇ ಇದ್ದರೂ ಅದು ಗುಣಹಾನಿಯನ್ನು ಮಾಡುವುದಿಲ್ಲ. ಆದರೆ ಸ್ಟೇನ್ಲೆಸ್ ಸ್ಟೀಲ್, ಅಲ್ಯೂಮಿನಿಯಂ ಹಾಗೂ ಪ್ಲಾಸ್ಟಿಕ್ ಪಾತ್ರೆಗಳು ಸರ್ವದಾ ಬಳಕೆಗೆ ಅಯೋಗ್ಯ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ: ಸಿಎಂ ಆರೋಪ

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ: ಸಿಎಂ ಆರೋಪ

ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಗಣೇಶ ಹಬ್ಬವನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಬೇಕು. ಮೆರವಣಿಗೆ ಹೋಗುವಾಗ ಶಿಸ್ತು ಪಾಲನೆ ಆಗಬೇಕು ಎಂದು ಸಿಎಂ ತಿಳಿಸಿದ್ದಾರೆ.

BJP Protest in T Narasipura: ಟಿ.ನರಸೀಪುರ ಠಾಣೆ ಮುಂದೆ ಅಹೋರಾತ್ರಿ ಧರಣಿಗೆ ಮುಂದಾದ ಬಿಜೆಪಿ ನಾಯಕರು; ಪ್ರತಾಪ್ ಸಿಂಹ, ಅಶೋಕ್, ಯದುವೀರ್ ಸೇರಿ ಹಲವರು ಪೊಲೀಸರ ವಶಕ್ಕೆ

ಟಿ.ನರಸೀಪುರ ಠಾಣೆ ಮುಂದೆ ಪ್ರತಿಭಟನೆ; ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಟಿ.ನರಸೀಪುರದ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಈ ವಿಡಿಯೊ ವೈರಲ್‌ ಆದ ಬಳಿಕ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ನಾಯಕರು ಟಿ.ನರಸೀಪುರ ಠಾಣೆ ಮುಂದೆ ಅಹೋರಾತ್ರಿ ಧರಣಿ ನಡೆಸಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಮಾರಸ್ವಾಮಿ ಅವರ ಅಲ್ಲೋಲ ಕಲ್ಲೋಲ‌ವನ್ನು ಬಿಡಿಸಿ ಹೇಳಬೇಕೇ?; ನಮ್ಮನ್ನು ಸೀಳಿ ಇಡಿ, ಸಿಬಿಐಗೆ ನೀಡಲಿ ಎಂದ ಸಿಎಂ ಡಿಕೆಶಿ

ಕುಮಾರಸ್ವಾಮಿಯ ಅಲ್ಲೋಲ ಕಲ್ಲೋಲ‌ವನ್ನು ಬಿಡಿಸಿ ಹೇಳಬೇಕೇ? ಸಿಎಂ

ಕುಮಾರಸ್ವಾಮಿಯವರು ನನ್ನನ್ನು ಅಧಿಕಾರದಿಂದ ಇಳಿಸಿ ಬಿಡ್ತೇನೆ, ದೆಹಲಿಯಿಂದ ಬಾಂಬ್ ಹಾಕಿ ಬಿಡ್ತೇನೆ, ಅಲ್ಲೋಲ‌ ಕಲ್ಲೋಲ ಮಾಡಿ ಬಿಡ್ತೇನೆ ಅಂತ ಮಾತಾಡುತ್ತಿದ್ದಾರೆ. ನಮ್ಮನ್ನು ಏನು ಬೇಕಾದರೂ ಮಾಡಲಿ. ನಮ್ಮನ್ನು ಬೇಕಾದರೆ ಸೀಳಿ ಇಡಿ, ಸಿಬಿಐಗೆ ತೆಗೆದುಕೊಂಡು ಹೋಗಲಿ. ಆದರೆ ಅವರ ವಿರುದ್ಧ ತನಿಖೆ ಮಾಡಿದಾಗ ನ್ಯಾಯಾಲಯಕ್ಕೆ ಹೋಗಿ ಏಕೆ ತಡೆಯಾಜ್ಞೆ ತರಲಾಗುತ್ತಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

T. Narasipur Ganesha festival: ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಯಾವುದೇ ನಿರ್ಬಂಧವಿಲ್ಲ: ಎಸ್‌ಪಿ ಬಾಲದಂಡಿ

ಟಿ.ನರಸೀಪುರದಲ್ಲಿ ಪ್ರತಿ ವರ್ಷದಂತೆ ಗಣೇಶ ಮೆರವಣಿಗೆಗೆ ಅವಕಾಶವಿದೆ: ಎಸ್‌ಪಿ

ಮಸೀದಿ ಇರುವ ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋದರೆ ಗ್ರಹಚಾರ ಬಿಡಿಸುತ್ತೇನೆ ಎಂಬ ಟಿ.ನರಸೀಪುರ ಇನ್‌ಸ್ಪೆಕ್ಟರ್‌ ಧನಂಜಯ ಅವರ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಪಷ್ಟನೆ ನೀಡಿದ್ದು, ಮೆರವಣಿಗೆ ಹೊಸ ನಿರ್ಬಂಧಗಳು ಇಲ್ಲ, ಈ ಮೊದಲಿನಿಂದ ನಡೆಯುವ ಮಾರ್ಗಗಳಲ್ಲಿ ಗಣೇಶ ಮೆರವಣಿಗೆಗೆ ಅವಕಾಶ ಇದೆ ಎಂದು ಹೇಳಿದ್ದಾರೆ.

BJP Protest in T Narasipura: ಟಿ.ನರಸೀಪುರ ಠಾಣೆ ಮುಂದೆ ಹೈಡ್ರಾಮಾ; ಇನ್ಸ್‌ಪೆಕ್ಟರ್‌ ಧನಂಜಯ್ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರ ಪಟ್ಟು

ಟಿ.ನರಸೀಪುರ ಠಾಣೆ ಮುಂದೆ BJP ಪ್ರತಿಭಟನೆ; ಇನ್ಸ್‌ಪೆಕ್ಟರ್‌ ಕ್ಷಮೆಗೆ ಪಟ್ಟು

T Narasipura Inspector Dhananjay: ಟಿ.ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

Pravasi Prapancha: ಬಾಗಿಲಿಲ್ಲದ ಭಗವಂತ; ಕುಣಿಗಲ್‌ನ ಬೆಟ್ಟದ ರಂಗನಾಥಸ್ವಾಮಿ

ಬಾಗಿಲಿಲ್ಲದ ಭಗವಂತ: ಕುಣಿಗಲ್‌ನ ಬೆಟ್ಟದ ರಂಗನಾಥಸ್ವಾಮಿ

Bettada Ranganathaswamy Temple: ಬೆಟ್ಟದ ರಂಗನಾಥಸ್ವಾಮಿ ಕ್ಷೇತ್ರವನ್ನು ಜನರು ವಿಶೇಷವಾಗಿ ನೆನಪಿಸಿಕೊಳ್ಳುವುದು 'ಬಾಗಿಲಿಲ್ಲದ ದೇವರು' ಎಂಬ ಕಾರಣಕ್ಕೆ. ಒಮ್ಮೆ ದೇವಾಲಯವನ್ನು ನಿರ್ಮಿಸಿ ಬಾಗಿಲು ಹಾಕಿ ಪೂಜೆ ಸಲ್ಲಿಸಲಾಗುತ್ತಿತ್ತು ಎನ್ನುವುದು ಕ್ಷೇತ್ರದ ಇತಿಹಾಸದಲ್ಲಿದೆ. ಆದರೆ ಭಕ್ತರ ನಂಬಿಕೆಯ ಪ್ರಕಾರ 'ನನ್ನನ್ನು ನೋಡಲು ಬರುವ ಭಕ್ತರಿಗೆ ಸಮಯದ ಹಂಗೇಕೆ? ನನ್ನ ದರ್ಶನಕ್ಕೆ ಬಾಗಿಲಿನ ಬಂಧನವೇಕೆ?'ಎಂಬ ಭಾವದಿಂದ ರಂಗನಾಥಸ್ವಾಮಿಯೇ ಆ ಬಾಗಿಲುಗಳನ್ನು ಒದ್ದರೆಂದು ಹೇಳಲಾಗುತ್ತದೆ. ಆ ಬಾಗಿಲುಗಳು ಕುಣಿಗಲ್ ಕೆರೆಗೆ ಹೋಗಿ ಬಿದ್ದವು ಎಂಬುದು ಹಿರಿಯರು ಹೇಳಿಕೊಂಡು ಬಂದಿರುವ ನಂಬಿಕೆ.

Ganesh Chaturthi 2026: ಹಾವೇರಿ ಜಿಲ್ಲೆಯಲ್ಲಿ 2,315 ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಡಿಜೆ ಸೌಂಡ್ ನಿಷೇಧ, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್

ಹಾವೇರಿ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಬಿಗಿ ಬಂದೋಬಸ್ತ್

ಹಾವೇರಿ ಜಿಲ್ಲೆಯಲ್ಲಿ ಗಣೇಶೋತ್ಸವದ ಬಂದೋಬಸ್ತ್ ಕರ್ತವ್ಯಕ್ಕಾಗಿ ಒಬ್ಬರು ಎಸ್‌ಪಿ, ಒಬ್ಬರು ಹೆಚ್ಚುವರಿ ಎಸ್‌ಪಿ, ಐವರು ಡಿಎಸ್‌ಪಿ, 15 ಸಿಪಿಐ/ಪಿಐ, 45 ಪಿಎಸ್‌ಐ, 50 ಎಎಸ್‌ಐ, 500 ಎಚ್‌ಸಿ/ಪಿಸಿ, 400 ಗೃಹರಕ್ಷಕ ಸಿಬ್ಬಂದಿ ಸೇರಿದಂತೆ ಡಿಎಆರ್, ಕೆಎಸ್‌ಆರ್‌ಪಿ ಹಾಗೂ ಕ್ಯೂಆರ್‌ಟಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಪಿಎಂಸಿ ಭೇಟಿ ಬಳಿಕ ಬೀದಿಗಿಳಿದ ಪೊಲೀಸ್ ಇಲಾಖೆ: 800 ಬಾಲ ಕಾರ್ಮಿಕರ ರಕ್ಷಣೆ

800 ಬಾಲ ಕಾರ್ಮಿಕರ ರಕ್ಷಣೆ

ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ನಿಯಂತ್ರಣ ಕೊಠಡಿಯ ವರದಿ ಪ್ರಕಾರ, ರಾಜ್ಯದ 962 ಪೊಲೀಸ್ ಠಾಣೆಗಳ ವ್ಯಾಪ್ತಿ ಯಲ್ಲಿ ಈ ಬೃಹತ್ ತಪಾಸಣಾ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ಯ ಭಾಗವಾಗಿ 16951 ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು ಮತ್ತು ಇತರೆ ಅನುಮಾನಾಸ್ಪದ ಸ್ಥಳಗಳ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಇಡಿಗೆ ದೂರಿತ್ತವರು ಯಾರೆಂದು ಗೊತ್ತು: ಆಫ್ರಿಕಾದಲ್ಲಿ ಹೂಡಿಕೆ ಮಾಡಿದ್ದರೆ ಇಡಿ ದಾಖಲೆ ನೀಡಲಿ: ಸತೀಶ್

ಆಫ್ರಿಕಾದಲ್ಲಿ ಹೂಡಿಕೆ ಮಾಡಿದ್ದರೆ ಇಡಿ ದಾಖಲೆ ನೀಡಲಿ: ಸತೀಶ್

ಶನಿವಾರ ನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಡಿ ಜಾರಿ ನಿರ್ದೇಶನಾಲಯದ ಮಾಧ್ಯಮ ಪ್ರಕಟಣೆಯಲ್ಲಿ ಹೂಡಿಕೆ ಮತ್ತು ಲೋಕೋಪಯೋಗಿ ಇಲಾಖೆ ಲಂಚ ಪಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಇಡಿ ಅಧಿಕಾರಿಗಳು ನೋಟಿಸ್ ನೀಡಿದರೆ ಸೂಕ್ತ ಉತ್ತರ, ಸ್ಪಷ್ಟನೆ ನೀಡಲಾಗುವುದು ಎಂದರು.

MLA Ashok Kumar Rai Interview: ಪಕ್ಷ ರಾಜಕೀಯ ಮೀರಿ ಪುತ್ತೂರಿನ ಅಭಿವೃದ್ದಿಗೆ ಪಣ

ಪಕ್ಷ ರಾಜಕೀಯ ಮೀರಿ ಪುತ್ತೂರಿನ ಅಭಿವೃದ್ದಿಗೆ ಪಣ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದ ಅಭಿವೃದ್ಧಿ, ಕುಡಿಯುವ ನೀರು, ವೈದ್ಯಕೀಯ ಕಾಲೇಜು, ಪ್ರವಾಸೋದ್ಯಮ, ಕೈಗಾರಿಕೆ, ಉದ್ಯೋಗ, ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ವಿಚಾರಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವಿಶ್ವವಾಣಿ ಜತೆ ಹಂಚಿಕೊಂಡಿದ್ದಾರೆ.

"ನಮ್ಮದೇ ನೆಲದಲ್ಲಿ ಹಿಂದೂ ಹಬ್ಬಗಳನ್ನು ಮಾಡಲು ಗೋಗರೆಯಬೇಕೆ?"; ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

ರಾಜ್ಯ ಸರ್ಕಾರ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ; ಜೋಶಿ

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಶಾಂತಿ ಸಭೆಯ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಠಾಣೆ ಎದುರೇ ಡ್ರಾಮಾ; ಪತ್ನಿ ಕಾಟಕ್ಕೆ ಬೇಸತ್ತು ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ!

ಪತ್ನಿ ಕಾಟಕ್ಕೆ ಬೇಸತ್ತು ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ!

ಪ್ರತಿನಿತ್ಯ ಮನೆಯಲ್ಲಾಗುತ್ತಿದ್ದ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ವ್ಯಕ್ತಿಯೋರ್ವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಪತ್ನಿಯೊಂದಿಗೆ ಜಗಳದ ಬೆನ್ನಲ್ಲೇ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ್ದ ವ್ಯಕ್ತಿಯನ್ನು ಬಳಿಕ ಪೊಲೀಸರು ಸಮಾಧಾನ ಪಡಿಸಿ ಕೆಳಗಿಳಿಸಿದ್ದಾರೆ.

ರಾಜ್ಯದಲ್ಲಿ ಮೋಡ ಕವಿದ ವಾತಾವರಣ; ಯಾವ ಜಿಲ್ಲೆಗಳಲ್ಲಿ ಮಳೆ ಇರಲಿದೆ?

ರಾಜ್ಯದಲ್ಲಿ ಮೋಡ ಕವಿದ ವಾತಾವರಣ; ಯಾವ ಜಿಲ್ಲೆಗಳಲ್ಲಿ ಮಳೆ ಇರಲಿದೆ?

Weather News: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

Chinthamani News: ರೈತರ ಖಾತೆಗೆ ನೇರ ಹಾಲು ಪ್ರೋತ್ಸಾಹ ಧನ: ಪಾರದರ್ಶಕತೆಗಾಗಿ ತಂತ್ರಜ್ಞಾನದಲ್ಲಿ ಹೊಸ ಬದಲಾವಣೆ: ವೈ.ಬಿ.ಅಶ್ವತ್ ನಾರಾಯಣ ಬಾಬು

ರೈತರ ಖಾತೆಗೆ ನೇರ ಹಾಲು ಪ್ರೋತ್ಸಾಹ ಧನ

ಸರ್ಕಾರದಿಂದ ಹಾಲಿನ ಪ್ರೋತ್ಸಾಹಧನವಾಗಿ ಪ್ರತಿ ಲೀಟರ್‌ಗೆ 5 ರೂಪಾಯಿ ನೇರವಾಗಿ ರೈತರ ಖಾತೆಗೆ ತಲುಪುವ ವ್ಯವಸ್ಥೆ ಜಾರಿಯಲ್ಲಿದೆ.ಗುಣಮಟ್ಟದ ಹಾಲು ಪೂರೈಸುವ ರೈತರಿಗೆ ಸೂಕ್ತ ಬೆಲೆ ಸಿಗುವಂತಾ ಗಲು ಸಾಫ್ಟ್ವೇರ್ ವ್ಯವಸ್ಥೆಯಲ್ಲಿ ಹೊಸ ಬದಲಾವಣೆಗಳನ್ನು ತರಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ವೈ.ಬಿ. ಅಶ್ವತ್ ನಾರಾಯಣ ಬಾಬು ರವರು ಹೇಳಿದರು

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ

ಮಡಿಯಾಲದಲ್ಲಿ ಶೀಘ್ರ ಎಐ ಅಧ್ಯಯನ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಮಂಗಳೂರು ನಗರದಲ್ಲಿ ಎಲ್ಲ ಬಗೆಯ ಶಿಕ್ಷಣ ಕೋರ್ಸ್‌ಗಳೂ ಲಭ್ಯವಿವೆ. ಇದಕ್ಕೆ ಮತ್ತಷ್ಟು ಮೆರಗು ನೀಡಬೇಕು ಎಂದು ಯೋಚಿಸಿ ಇಲ್ಲಿ ಕೃತಕ ಬುದ್ಧಿಮತ್ತೆ, ಮಷೀನ್ ಲರ್ನಿಂಗ್ ಮತ್ತು ಕಂಪ್ಯೂಟರ್ ಶಿಕ್ಷಣಕ್ಕೆ ಒತ್ತು ಕೊಡುವ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಕೇಂದ್ರ ಆರಂಭಿಸುತ್ತಿದ್ದೇವೆ ಎಂದು "ಒನ್‌ ವರ್ಲ್ಡ್‌ ಒನ್ ಫ್ಯಾಮಿಲಿ ಮಿಷನ್" ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

Ganesh Chaturthi: 1,080 ಪೊಲೀಸ್ ಸಿಬ್ಬಂದಿ ನಿಯೋಜನೆ; ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಲು ಎಸ್ಪಿ ಪದ್ಮನಿ ಸಾಹು ಮನವಿ

ಗಣೇಶೋತ್ಸವಕ್ಕೆ ಬಿಗಿ ಭದ್ರತೆ: ಜಿಲ್ಲೆಯಲ್ಲಿ ಕಟ್ಟೆಚ್ಚರ

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು, ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸರು ನಿರಂತರ ನಿಗಾ ವಹಿಸ ಲಿದ್ದಾರೆ. ಹಬ್ಬಕ್ಕೂ ಮುನ್ನವೇ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಂತಿ ಸಭೆ ನಡೆಸಿ, ಗಣೇಶೋತ್ಸವ ಸಮಿತಿಗಳು, ವಿವಿಧ ಧಾರ್ಮಿಕ ಸಂಘಟನೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಲಾಗಿದೆ

Chikkaballapur News: ಮೊಬೈಲ್ ರೀಲ್ಸ್ಗಳ ಮೋಹದಿಂದ ಹೊರಬಂದು ಗುರಿಯತ್ತ ಸಾಗಲು ವಿದ್ಯಾರ್ಥಿಗಳಿಗೆ ತುತ್ತೂರು ಲೋಕೇಶಪ್ಪ ಕರೆ

ತಂತ್ರಜ್ಞಾನದೊಂದಿಗೆ ಮುನ್ನಡೆಯಿರಿ, ಆದರೆ ಮಾನವೀಯ ಮೌಲ್ಯ ಕಳೆದುಕೊಳ್ಳಬೇಡಿ

ಮಾನವೀಯ ಮೌಲ್ಯಗಳನ್ನು ಕಳೆದುಕೊಂಡ ತಂತ್ರಜ್ಞಾನದಿಂದ ಯಾವುದೇ ಸಮಾಜಕ್ಕೂ ಒಳಿತಾಗು ವುದಿಲ್ಲ. ತಂತ್ರಜ್ಞಾನದ ಅತಿಯಾದ ಅವಲಂಬನೆ ಏಕಾಂಗಿತನವನ್ನು ಉಡುಗೊರೆಯಾಗಿ ನೀಡುತ್ತದೆ. ಆದ್ದರಿಂದ  ವಿದ್ಯಾರ್ಥಿ ಯುವಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ, ಅದರಲ್ಲೂ ರೀಲ್ಸ್ಗಳ ಮೋಹದಿಂದ ಹೊರಬಂದು ಸೃಜನಶೀಲ ಚಟುವಟಿಕೆಗಳತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

KN Rajanna: ಸಚಿವ ಸತೀಶ್‌ ಜಾರಕಿಹೊಳಿ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕೆ.ಎನ್. ರಾಜಣ್ಣ

ಸತೀಶ್‌ ಜಾರಕಿಹೊಳಿ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕೆ.ಎನ್. ರಾಜಣ್ಣ

KN Rajanna: ಕೇಂದ್ರ ಸರ್ಕಾರವು ಎಲ್ಲಾ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸತೀಶ ಜಾರಕಿಹೊಳಿ ಅವರ ಬೆಳೆಯುತ್ತಿರುವ ಜನಪ್ರಿಯತೆಯನ್ನು ಕುಗ್ಗಿಸಲು ಈ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಶಾಸಕ ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅತಿ ಶೀತ ಅಥವಾ ಉಷ್ಣ ನೀರು ಸೇವನೆ ಆರೋಗ್ಯಕ್ಕೆ ಹಾನಿಕರ: ರಾಘವೇಶ್ವರ ಭಾರತೀ ಶ್ರೀ

ಅತಿ ಶೀತ ಅಥವಾ ಉಷ್ಣ ನೀರು ಸೇವನೆ ಆರೋಗ್ಯಕ್ಕೆ ಹಾನಿಕರ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಾವಿಂದು ತತ್‌ಕ್ಷಣಕ್ಕೆ ಹಾಯೆನಿಸುತ್ತದೆ ಎಂದು ನೀರನ್ನು ತಂಪಿನ ಪೆಟ್ಟಿಗೆ (ಫ್ರಿಡ್ಜ್) ಯಲ್ಲಿ ಇಟ್ಟು ಅತೀ ಶೀತ ನೀರನ್ನು ಸೇವಿಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದೇವೆ. ಅದು ದೇಹಕ್ಕೆ ಹಾಳು ಎಂದು ಆಯುರ್ವೇದವೂ ಸೂಚಿಸಿದೆ ಮತ್ತು ಆಧುನಿಕ ವಿಜ್ಞಾನವೂ ಹೇಳಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Prajaseva: ಸ್ಥಳದಲ್ಲೇ ಅರ್ಜಿ ವಿಲೇವಾರಿ; ಫಲಾನುಭವಿಗಳಿಗೆ ಮಂಜೂರಾತಿ ಪತ್ರ, ಕಾರ್ಯಾದೇಶ ವಿತರಣೆ

ಪ್ರಜಾ ಸೇವಾ ಆಂದೋಲನ: ಒಂದೇ ದಿನ 900 ಅರ್ಜಿ ಸ್ವೀಕಾರ

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಭೆಗೆ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಪ್ರಕ್ರಿಯೆ ಪರಿಶೀಲಿಸಿದರು. ಗೌರಿಬಿದನೂರಿನ ಡಿ.ಪಾಳ್ಯದಲ್ಲಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಶಿಡ್ಲಘಟ್ಟದ ಬಶೆಟ್ಟಹಳ್ಳಿಯಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಹಾಗೂ ಚೇಳೂರಿನಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ಸಭೆಗಳು ನಡೆದವು

Loading...