ಮಡಿಕೇರಿಯಲ್ಲಿ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ
Madikeri News: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ಶುಕ್ರವಾರ ಅಪಘಾತ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯದ ಆಸ್ಪತ್ರೆಗೆ ರವಾನಿಸಲಾಗಿದೆ.