ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Karnataka Budget 2026: ಕಾರವಾರಕ್ಕೆ ಹೈಟೆಕ್ ಸ್ಪರ್ಶ: ಕೊನೆಗೂ ಈಡೇರಿತು 'ಸೂಪರ್ ಸ್ಪೆಷಾಲಿಟಿ' ಕನಸು

ಕೊನೆಗೂ ಈಡೇರಿತು 'ಸೂಪರ್ ಸ್ಪೆಷಾಲಿಟಿ' ಕನಸು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ತುರ್ತು ಚಿಕಿತ್ಸಾ ಸೌಲಭ್ಯವಿಲ್ಲದ ಕಾರಣ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳು ಮಣಿಪಾಲ, ಮಂಗಳೂರು ಅಥವಾ ಹುಬ್ಬಳ್ಳಿಯಂತಹ ನಗರಗಳಿಗೆ 150-200 ಕಿ.ಮೀ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಹಾದಿ ಯಲ್ಲೇ ಅನೇಕ ಜೀವಗಳು ಬಲಿಯಾಗಿದ್ದವು.

Gold Rate Today 6th March 2026: ಇಂದೂ ಕುಸಿದ ಚಿನ್ನದ ದರ; 15 ಸಾವಿರ ರುಪಾಯಿ ಗಡಿಯಿಂದ ಕೆಳಗಿಳಿದ ಬೆಲೆ

ಚಿನ್ನದ ದರದಲ್ಲಿ ಇಂದು ಭಾರಿ ಕುಸಿತ

Gold Price Today 6th March 2026: ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರ ಶುಕ್ರವಾರವೂ (ಮಾರ್ಚ್‌ 6) ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 70 ರುಪಾಯಿ ಇಳಿಕೆಯಾಗಿ 14,860 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 77 ರುಪಾಯಿ ಕಡಿಮೆಯಾಗಿದ್ದು, 16,211 ರುಪಾಯಿಗೆ ಕುಸಿದಿದೆ.

Karnataka Budget 2026: ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ರೇಷನ್‌ ಬದಲಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ

ಗರ್ಭಿಣಿ, ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ವ್ಯವಸ್ಥೆ

Women And Child Development Department: ಮಧ್ಯಾಹ್ನದ ಬಿಸಿಯೂಟದಿಂದ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ನಂತರ ಬಿಸಿಯೂಟ ಬದಲಾಗಿ ಮನೆಗೆ ರೇಷನ್‌ ನೀಡಲು ಒತ್ತು ನೀಡಲಾಗಿತ್ತು. ಆದರೆ, ಇದೀಗ ಈ ಹಿಂದಿನಂತೆ ಅಂಗನವಾಡಿಗಳಲ್ಲೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Karnataka Budget 2026: ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಸಿಎಂ ಘೋಷಣೆ; ಹವ್ಯಕ ಮಹಾಸಭಾ, ವಿಶ್ವೇಶ್ವರ ಭಟ್‌ ಸ್ವಾಗತ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಹವ್ಯಕ ಮಹಾಸಭಾ, ವಿಶ್ವೇಶ್ವರ ಭಟ್‌ ಸ್ವಾಗತ

ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಮಾಡಿದ ಪ್ರಸ್ತಾವವನ್ನು ಅಖಿಲ ಹವ್ಯಕ ಮಹಾಸಭಾ, ಅದರ ಅಧ್ಯಕ್ಷ ಗಿರಿಧರ ಕಜೆ ಹಾಗೂ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರು ಸ್ವಾಗತಿಸಿದ್ದಾರೆ. ಈ ಮಹತ್ವದ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿಗಳನ್ನು ಅವರು ಸಮಸ್ತ ಹವ್ಯಕರ ಪರವಾಗಿ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

Karnataka Budget: ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ

ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ

ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ ಸಿಕ್ಕಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.

Karnataka Budget 2026: ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರ

ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿಬಿಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನವನ್ನೂ ಸರಕಾರ ಮೀಸಲಿರಿಸಿದೆ.

Karnataka Budget 2026: 11ಜಿ ಮಾದರಿ ಆರ್ಥಿಕತೆ; ರಾಜ್ಯದ ಸಶಕ್ತ, ಸುಸ್ಥಿರ ಅಭಿವೃದ್ಧಿ ಮಾದರಿ ಪರಿಚಯಿಸಿದ ಸಿದ್ದರಾಮಯ್ಯ

ಸಶಕ್ತ, ಸುಸ್ಥಿರ ಅಭಿವೃದ್ಧಿ ಮಾದರಿ ಪರಿಚಯಿಸಿದ ಸಿದ್ದರಾಮಯ್ಯ

Siddaramaiah Budget: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದಾರೆ. ಇದರಲ್ಲಿ ಅವರು ಕರ್ನಾಟಕದ್ದೇ ಆದ ಸಶಕ್ತ ಹಾಗೂ ಸುಸ್ಥಿರ ಅಭಿವೃದ್ಧಿ ಮಾದರಿಗಳನ್ನು ರೂಪಿಸಿರುವುದಾಗಿ ತಿಳಿಸಿದರು. ಅದನ್ನು 11ಜಿ ಮಾದರಿ ಆರ್ಥಿಕತೆ ಎಂದು ಕರೆದಿದ್ದಾರೆ. ಆ ಕುರಿತಾದ ವಿವರ ಇಲ್ಲಿದೆ.

Sri Thipperudraswamy Rathotsava: ಶ್ರೀ ತಿಪ್ಪೇರುದ್ರಸ್ವಾಮಿ ರಥೋತ್ಸವ ಇಂದು

ಶ್ರೀ ತಿಪ್ಪೇರುದ್ರಸ್ವಾಮಿ ರಥೋತ್ಸವ ಇಂದು

ಊರ ಮಧ್ಯದಲ್ಲಿರುವ ಮಠವೇ ಒಳಮಠ, ಊರ ಒಳಗೆ ಈ ಮಠವಿರುವದರಿಂದ ಒಳಮಠ ವೆಂದು ಕರೆಯುವ ವಾಡಿಕೆ. ಈ ಮಠಕ್ಕೆ ಹಿರೇಮಠ, ದರ್ಬಾಟ ಮಠವೆಂತಲೂ ಕರೆಯಲಾಗು ತ್ತಿದೆ. ಶ್ರೀಗಳ ಜೀವಿತ ಕಾಲದಲ್ಲಿ ಈ ಮಠದಲ್ಲಿಯೇ ಇದ್ದು ರಾಜ- ಮಹಾರಾಜರಿಗೆ, ಭಕ್ತಾದಿಗಳಿಗೆ ದರ್ಶನ ನೀಡುವುದಲ್ಲದೆ ಅವರ ಕಷ್ಟ-ಸುಖಗಳನ್ನು ವಿಚಾರಿಸುತ್ತಿದ್ದರು. ಅವುಗಳಿಗೆ ಪರಿಹಾರ ವನ್ನು ಸೂಚಿಸಿ, ಆಶೀರ್ವದಿಸು ತ್ತಿದ್ದರು. ಹೀಗಾಗಿ ಈ ಮಠವನ್ನು ದರ್ಬಾರು ಮಠವೆಂದು ಕರೆಯುವ ವಾಡಿಕೆಗೆ ಕಾರಣವಾಗಿದೆ.

Karnataka Budget 2026: ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್‌

ಮಧುಮೇಹಿಗಳಿಗೆ ಗುಡ್‌ ನ್ಯೂಸ್‌; ಸರ್ಕಾರದಿಂದ ಉಚಿತ ಇನ್ಸುಲಿನ್ ಪೆನ್‌

ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Budget 2026: ಇನ್ನು ಮದ್ಯದಲ್ಲಿ ಆಲ್ಕೋಹಾಲ್‌ ಕಂಟೆಂಟ್‌ ಜಾಸ್ತಿಯಾದಷ್ಟೂ ಅಧಿಕ ತೆರಿಗೆ!

ಇನ್ನು ಮದ್ಯದಲ್ಲಿ ಆಲ್ಕೋಹಾಲ್‌ ಕಂಟೆಂಟ್‌ ಜಾಸ್ತಿಯಾದಷ್ಟೂ ಅಧಿಕ ತೆರಿಗೆ!

ಮದ್ಯಪಾನದ ದುಷ್ಪರಿಣಾಮಗಳು ಸಮಾಜದ ಮೇಲೆ ಉಂಟುಮಾಡುವ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು (Alcohol-in-Beverage – AIB) ಆಧರಿಸಿದ ತೆರಿಗೆ ಪದ್ದತಿಯು gold standard ಆಗಿದೆ. ಏಪ್ರಿಲ್ 2026ರಿಂದ ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Karnataka Budget 2026: ಕೃಷಿ, ಹೈನುಗಾರಿಕೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಕೃಷಿ, ಹೈನುಗಾರಿಕೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

ಇಂದಿನ ಬಜೆಟ್‌ನಲ್ಲಿ ರೈತರಿಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಸರ್ಕಾರ ಘೋಷಿಸಿದೆ. 40 ಲಕ್ಷ ರೈತರಿಗೆ 468 ಕೋಟಿ ರೂ. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ. 2,825 ಕೋಟಿ ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿ ನೀರಾವರಿ ಘಟಕ ಸ್ಥಾಪನೆ ಹಾಗೂ 3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ.

Karnataka Budget 2026 PDF Wownload: ಕರ್ನಾಟಕ ಬಜೆಟ್‌ನ ಪಿಡಿಎಫ್ ಪ್ರತಿ ಹೀಗೆ ಡೌನ್​ಲೋಡ್ ಮಾಡಿ

ಕರ್ನಾಟಕ ಬಜೆಟ್‌ನ ಪಿಡಿಎಫ್ ಪ್ರತಿ ಹೀಗೆ ಡೌನ್​ಲೋಡ್ ಮಾಡಿ

Karnataka Budget 2026-27 PDF Document Download: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಇಲ್ಲಿದೆ ಬಜೆಟ್‌ನ ಪಿಡಿಎಫ್‌ ಪ್ರತಿ.

Karnataka Budget 2026: ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯ: ಒಂದೇ ಸೂರಿನಡಿ ಶಿಕ್ಷಣ: ಮೂರು ವರ್ಷಗಳಲ್ಲಿ 3,900 ಕೋಟಿ ರೂ.ಗಳ ವೆಚ್ಚ

ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ: ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ

ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣ ಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.

Karnataka Budget 2026: ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಕೋಲಾರ, ವಿಜಯಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು

ಕಾರವಾರ, ಯಾದಗಿರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ

ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಪ್ರಮುಖವಾಗಿ ಬಹುಬೇಡಿಕೆಯ ಕಾರವಾರಕ್ಕೆ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Karnataka Budget 2026: ಬೆಂಗಳೂರಿನಲ್ಲಿ 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ: ಸಿಎಂ

ಬೆಂಗಳೂರಿನಲ್ಲಿ 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ: ಸಿಎಂ

ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್​ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್​ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.

Social Media Ban for Children: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ

Social Media Ban For Children: ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

11 ಜಿಲ್ಲೆಗಳಲ್ಲಿ 12 ಕಡೆ ಹೊಸ ಪೊಲೀಸ್‌ ಠಾಣೆ ಆರಂಭ: ಸಿಎಂ

11 ಜಿಲ್ಲೆಗಳಲ್ಲಿ 12 ಕಡೆ ಹೊಸ ಪೊಲೀಸ್‌ ಠಾಣೆ ಆರಂಭ: ಸಿಎಂ

ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಎರಡು ಸೇರಿದಂತೆ 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಎಂದು ತಿಳಿಸಲಾಗಿದೆ.

Karnataka Budget 2026 Size: 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ; ಯಾವ ಇಲಾಖೆಗೆ ಎಷ್ಟು ಅನುದಾನ?

4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ

Siddaramaiah Budget: 2026-27 ನೇ ಸಾಲಿನ ಬಜೆಟ್​​ ಮಂಡನೆಯಾಗುತ್ತಿದೆ. ಈ ಬಾರಿ ಬಜೆಟ್​ ಗಾತ್ರ 4.48 ಸಾವಿರ ಕೋಟಿ ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಹೆಚ್ಚಳ ಮಾಡಲಾಗಿದೆ. ಯಾವ ವಲಯಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೈಜ ಸಂಕಷ್ಟಕ್ಕೆ ಪೂರಕವಾಗುವುದೇ ಬಜೆಟ್?

ನೇಕಾರಿಕೆ ಉದ್ದಿಮೆಯ ಅಭಿವೃದ್ಧಿಗೆ ದಶಕದ ಹಿಂದೆಯೇ ಮುಖ್ಯ ವಾದ ಕೋನ್ ಡೈಯಿಂಗ್ ಇನ್ನೂ ನಿರ್ಮಾಣವಾಗಿಲ್ಲ. ಇದರಿಂದ ಸೀರೆಗಳ ಉತ್ಪಾದನೆ ಯಲ್ಲಿ ವಿವಿಧ ಬಣ್ಣ-ಬಣ್ಣದ ರೀತಿಯಲ್ಲಿ ವೈಭವದ ಸೀರೆಗಳನ್ನು ತಯಾರಿಸುವ ಮೂಲಕ ಜವಳಿ ಕ್ಷೇತ್ರಕ್ಕೆ ಹೊಸ ಸ್ಪರ್ಶ ದೊರಕುವಲ್ಲಿ ಕಾರಣವಾಗಲಿದೆ.

Karnataka Budget 2026: ಸಿಹಿ ಸುದ್ದಿ, 56,432 ಸರಕಾರಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಸಿಹಿ ಸುದ್ದಿ, 56,432 ಸರಕಾರಿ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ

ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ (CM Siddaramaiah) 2026ರ ಬಜೆಟ್‌ನಲ್ಲಿ (Karnataka Budget 2026) ಘೋಷಿಸಿದರು.

Karnataka Budget 2026: ಬಜೆಟ್‌ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಸಿಎಂ; ಆಯವ್ಯಯ ಮಂಡನೆ ಆರಂಭ

ಬಜೆಟ್‌ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯ

CM Siddaramaiah: ಸಚಿವ ಸಂಪುಟದಲ್ಲಿ ಅನುಮೋದನೆ ಬಳಿಕ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣ ಆರಂಭಿಸಿದರು. ರಾಜ್ಯದ ಸಿಎಂ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಅನ್ನು ಶುಕ್ರವಾರ ಮಂಡಿಸುತ್ತಿದ್ದಾರೆ.

ಕಲಬುರಗಿಗೆ ಸಿಗುವುದೇ ʼಸಿದ್ದುʼ ವಿಶೇಷ ಅನುಗ್ರಹ?

ಕಲಬುರಗಿಗೆ ಸಿಗುವುದೇ ʼಸಿದ್ದುʼ ವಿಶೇಷ ಅನುಗ್ರಹ?

ಆರೋಗ್ಯ ಕ್ಷೇತ್ರದಲ್ಲಿ ಕಲಬುರಗಿಗೆ ತನ್ನದೇ ಆದ ಸ್ವಾಯತ್ತತೆ ಬೇಕಿದೆ. ಬೆಂಗಳೂರಿನ ಮೇಲಿನ ಅವಲಂಬನೆ ತಗ್ಗಿಸಲು ಇಲ್ಲಿ ನಿಮ್ಹಾನ್ಸ್ ಶಾಖೆ ಹಾಗೂ ಅಖಿಲ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ (ಅಐಐಖಏ) ಶಾಖೆಯನ್ನು ಆರಂಭಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯಾಭಿ ವೃದ್ಧಿ ವಿಶ್ವವಿದ್ಯಾಲಯ ಹಾಗೂ ಅರಣ್ಯ ಕಾಲೇಜು ಸ್ಥಾಪನೆಯ ಮೂಲಕ ಹಿಂದುಳಿದ ಭಾಗದ ಶೈಕ್ಷಣಿಕ ಮಟ್ಟವನ್ನು ಎತ್ತರಿಸು ವಂತೆ ಸರಕಾರಕ್ಕೆ ಒತ್ತಾಯಿಸಲಾಗಿದೆ.

"ಮಗನ ಸಾವಿನ ಹಿಂದೆ ಅಡಗಿದೆ ಸಾವಿರ ಸತ್ಯ";  ಬಿಜೆಪಿ ಕಾರ್ಯಕರ್ತೆ ಶಕುಂತಲಾ ಹಂಚಿಕೊಂಡ ಪೋಸ್ಟ್‌ನಲ್ಲೇನಿದೆ?

ಮಗನ ಸಾವಿನ ಕುರಿತು ಬಿಜೆಪಿ ಕಾರ್ಯಕರ್ತೆ ಶೇರ್‌ ಪೋಸ್ಟ್‌ನಲ್ಲೇನಿದೆ?

ಕಳೆದ ವರ್ಷ ಆತ್ಮಹತ್ಯೆಗೆ ಶರಣಾಗಿದ್ದ ಪುತ್ರ ತ್ರಿಶಾಲ್ ರಾಜ್ (13) ನೆನೆದು ನಗರದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರು ನಿನ್ನೆ (ಗುರುವಾರ) ಭಾವುಕ ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ತಮ್ಮ ಮಗನ ಕುರಿತು ಮತ್ತೊಂದು ಬರಹವನ್ನು ಹಂಚಿಕೊಂಡಿದ್ದಾರೆ.

KSRTC 144 ಹೊಸ ಬಸ್‌ ಖರೀದಿ ಸರ್ಕಾರ ಒಪ್ಪಿಗೆ; ಬಜೆಟ್‌ಗೂ ಮುನ್ನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಬಜೆಟ್‌ಗೂ ಮುನ್ನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಬಜೆಟ್‌ಗೂ ಮುನ್ನಾದಿನ (ಗುರುವಾರ) ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ರೂ.62.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Loading...